ಡಬಲ್ ಎಂಜಿನ್ ಬಿಜೆಪಿ ಸರ್ಕಾರ 40% ಕಮಿಷನ್ ಕೊಚ್ಚೆಯಲ್ಲಿ ಉರುಳಾಡುತ್ತಿದೆ: ಎಚ್‍ಡಿಕೆ ವಾಗ್ದಾಳಿ

ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಭರ್ತಿ 40% ಕಮೀಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪನವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ ಎಂದು ಅಮಿತ್ ಶಾ ವಿರುದ್ಧ ಎಚ್‍ಡಿಕೆ ವಾಗ್ದಾಳಿ ನಡೆಸಿದ್ದಾರೆ.

Written by - Puttaraj K Alur | Last Updated : Mar 3, 2023, 01:02 PM IST
  • ಭ್ರಷ್ಟಾಚಾರ ಮುಕ್ತ ಮಾಡುವುದೆಂದರೆ ಅಪ್ಪನ ಪರ ಪುತ್ರರತ್ನ ಕಂತೆಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ?
  • ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆಂದು ಹೇಳಿದ್ದು ಈ ಅರ್ಥದಲ್ಲಿಯಾ?
  • ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗಂಡಾಂತರ ಮಾಡುವುದಾ? ಎಂದು ಅಮಿತ್ ಶಾಗೆ ಪ್ರಶ್ನಿಸಿದ ಎಚ್‍ಡಿಕೆ
ಡಬಲ್ ಎಂಜಿನ್ ಬಿಜೆಪಿ ಸರ್ಕಾರ 40% ಕಮಿಷನ್ ಕೊಚ್ಚೆಯಲ್ಲಿ ಉರುಳಾಡುತ್ತಿದೆ: ಎಚ್‍ಡಿಕೆ ವಾಗ್ದಾಳಿ title=
ಅಮಿತ್ ಶಾ ವಿರುದ್ಧ ಎಚ್‍ಡಿಕೆ ವಾಗ್ದಾಳಿ

ಬೆಂಗಳೂರು: ರಾಜ್ಯಕ್ಕೆ ಮತ್ತೆ ಇಂದು ಹಾರಿ ಬಂದ ಕೇಂದ್ರ ಗೃಹ ಸಚಿವ ಅಮಿತ್ ಶಾರಿಗೆ ಸ್ವಾಗತ.. ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಭರ್ತಿ 40% ಕಮೀಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪನವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ’ ಎಂದು ಮಾಜಿ ಸಿಎಂ ಎಚ್‍.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

#ಕಮೀಷನ್_ರಾಜ್ಯವಲ್ಲ_ಕರ್ನಾಟಕ ಹ್ಯಾಶ್‍ಟ್ಯಾಗ್ ಬಳಸಿ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಎಚ್‍ಡಿಕೆ, ‘ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ಸರ್‌ ಎಂ.ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಸಾಬೂನು ಕಾರ್ಖಾನೆಯನ್ನು ಸ್ವಚ್ಚಗೊಳಿಸುವುದು ಎಂದರೆ ಇದೇನಾ? ನಿಮ್ಮ ‘ಸ್ವಚ್ಚ ಭಾರತ್‌ʼ ಪರಿಕಲ್ಪನೆಯೇ ಅದ್ಭುತ!! ವಾರೆವ್ಹಾ.. ಅಮಿತ್‌ ಶಾ ಅವರೇ!! ಅಮಿತ್ ಶಾ ಅವರೇ ಈಗ ಹೇಳಿ.. ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆಂದು ನೀವು ಹೇಳಿದ್ದು ಈ ಅರ್ಥದಲ್ಲಿಯಾ? ಭ್ರಷ್ಟಾಚಾರ ಮುಕ್ತ ಮಾಡುವುದೆಂದರೆ ಅಪ್ಪನ ಪರವಾಗಿ ಪುತ್ರರತ್ನ ಕಂತೆಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ? ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗಂಡಾಂತರ ಮಾಡುವುದಾ?’ ಎಂದ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮೊದಲಿನಿಂದಲೂ 500 ರೂ. ಕೊಟ್ಟು ಜನರನ್ನು ಸೇರಿಸುತ್ತಿದೆ..!

‘ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರ್ಕಾರ 40% ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಾ? ಕನ್ನಡಿಗರ ಹೆಮ್ಮೆಯ ಪ್ರತೀಕ  ಸಾಬೂನು ಕಾರ್ಖಾನೆಯನ್ನು 40% ಕಮೀಷನ್ ಸೋಪಿನಿಂದ ಭರ್ಜರಿಯಾಗಿ ತೊಳೆಯುತ್ತಿರುವ ಬಿಜೆಪಿ ಶಾಸಕರ ಬೆನ್ನು ತಟ್ಟುವಿರೋ ಅಥವಾ ಪಕ್ಷದಿಂದ ಹೊರಗಟ್ಟುವಿರೋ? ಶಾಸಕರ ಪುತ್ರರತ್ನ ಪಸಂದಾಗಿರಿಸಿದ್ದ ಕಂತೆಗಳು ಯಾರ ಹುಂಡಿಗೆ? ಶಾಸಕರ ಮನೆಯಲ್ಲೇ 6 ಕೋಟಿ ರೂ. ಸಿಕ್ಕರೆ, ಇನ್ನು 40% ಪರ್ಸಂಟ್‌ ಚರಂಡಿಯಲ್ಲಿ ತೆವಳುತ್ತಿರುವ ಸಚಿವರ ಮನೆಗಳಲ್ಲಿ ಇನ್ನೆಷ್ಟು ಸಿಗಬಹುದು? ರಾಮರಾಜ್ಯ ಮಾಡುತ್ತೇವೆಂದು ಹೇಳಿ ಕರ್ನಾಟಕವನ್ನು ‘ಕಮೀಷನ್‌ ರಾಜ್ಯʼ ಮಾಡಿದ್ದೀರಿ. ಹೌದಲ್ಲವೇ ಅಮಿತ್ ಶಾ ಅವರೇ?’ ಎಂದು ಎಚ್‍ಡಿಕೆ ಕುಟುಕಿದ್ದಾರೆ.

‘ಮೈಸೂರಿನಲ್ಲಿ ನಿನ್ನೆ ನಾನು ಹೇಳಿದ್ದೆ; ಈ ರೀತಿ ಪರ್ಸಂಟೇಜ್ ವ್ಯವಹಾರ ಮುಂದುವರಿದರೆ ಮುಂದೆ 10 ಪರಪ್ಪನ ಅಗ್ರಹಾರ ಜೈಲುಗಳಾನ್ನಾದರೂ ಕಟ್ಟಿಸಬೇಕಾಗುತ್ತದೆ ಎಂದು. ಕಳೆದ ಮೂರೂವರೆ ವರ್ಷದಿಂದ ಕಮೀಷನ್ ಕೊಚ್ಚೆಯಲ್ಲಿ ಉರುಳಾಡಿದ್ದ ಬಿಜೆಪಿ ಸರ್ಕಾರ, ಈಗ ನೋಟಿನ ಕಂತೆಗಳೊಂದಿಗೆ ಆ ಅಸಹ್ಯದ ಪರಾಕಾಷ್ಠೆಯನ್ನು ದರ್ಶನ ಮಾಡಿಸಿದೆ.  ಕಾಂಗ್ರೆಸ್‌ 20% ಮತ್ತು ಬಿಜೆಪಿ 40%. ಕರ್ನಾಟಕವನ್ನು 'ಕಮೀಷನ್‌ ರಾಜ್ಯ' ಮಾಡಿದ ಪಾಪ ಈ ರಾಷ್ಟ್ರೀಯ ಪಕ್ಷಗಳದ್ದು, ಇಂತಹ ಪಾಪದ ದುಡ್ಡಿನಿಂದಲೇ ಚುನಾವಣೆ ನಡೆಸುವ ಕಮೀಷನ್‌ʼಗೇಡಿ ಪಕ್ಷಗಳ ಅಸಲಿ ಮುಖವನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಕರ್ನಾಟಕಕ್ಕೆ ‘ಕಮೀಷನ್‌ ರಾಜ್ಯʼ ಎಂಬ ಹಣೆಪಟ್ಟಿ ಶಾಶ್ವತವಾಗುವ ಅಪಾಯವಿದೆ’ವೆಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Karnataka Lokayukta : ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕನ ಮಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ!

‘ಇಂತಹ ಪ್ರಕರಣಗಳೆಲ್ಲ ಕೊನೆಗೆ ಏನಾದವು ಎನ್ನುವುದು ಜನರಿಗೆ ಚೆನ್ನಾಗಿ ಗೊತ್ತು. ಸಾಂವಿಧಾನಿಕ ಸಂಸ್ಥೆಗಳನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ, ಅವು ತನಿಖೆ ನಡೆಸುತ್ತಿರುವ ಪ್ರಕರಣಗಳು ಯಾವ ರೀತಿ ಹಳ್ಳ ಹಿಡಿದು ಹೋಗಿವೆ ಎನ್ನುವುದು ಈಗಾಗಲೇ ಜಗಜ್ಜಾಹೀರಾಗಿರುವ ಸತ್ಯ. ಜನತಾ ನ್ಯಾಯಾಲಯದಲ್ಲೇ ಇಂತಹ ನಿರ್ಲಜ್ಜ ಪ್ರಕರಣಗಳಿಗೆ ಮುಕ್ತಿ ಕಾಣಿಸಬೇಕು. ಜನರದ್ದೇ ಅಂತಿಮ ತೀರ್ಪು ಹಾಗೂ ಜನರೇ ಪ್ರಜಾಪ್ರಭುತ್ವ ಉಳಿಸಬೇಕು ಎನ್ನುವುದು ನನ್ನ ಅಭಿಪ್ರಾಯ. 2023ಕ್ಕೆ ಆರೂವರೆ ಕೋಟಿ ಕನ್ನಡಿಗರು ನೀಡುವ ಜನಾದೇಶ ಈ ದಿಕ್ಕಿನಲ್ಲೇ ಇರುತ್ತದೆ ಎಂಬ ವಿಶ್ವಾಸ ನನ್ನದು’ ಎಂದು ಎಚ್‍ಡಿಕೆ ಟ್ವೀಟ್ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News