Karnataka Assembly Election 2023: ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ದಿ ಕೆಲಸಗಳು ಕೈ ಹಿಡಿಯಲಿದ್ದು, ಸುಮಾರು 75 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ನಾಲ್ಕನೇ ಬಾರಿಗೆ ಬೊಮ್ಮನಹಳ್ಳಿ ಕ್ಷೇತ್ರದ ಜನರು ನನಗೆ ಆಶೀರ್ವದಿಸಲಿದ್ದಾರೆ ಎಂದು ಬಿಜೆಪಿ ಮುಖ್ಯ ಸಚೇತಕರು ಹಾಗೂ ಬೊಮ್ಮನಹಳ್ಳಿ ಶಾಸಕರಾದ ಸತೀಶ್ ರೆಡ್ಡಿ ಹೇಳೀದರು.
ಇಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಲ್ಕನೇ ಬಾರಿ ನಾಮಪತ್ರ ಸಲ್ಲಿಸಿದ ಬಳಿಕ ಶಾಸಕರಾದ ಸತೀಶ್ ರೆಡ್ಡಿ ಮಾತನಾಡಿದರು.
ಇದನ್ನೂ ಓದಿ- Karnataka Election 2023: ಲಿಂಗಾಯತ ನಾಯಕರ ಬೆನ್ನಿಗೆ ಚೂರಿ ಹಾಕಿದ ಬಿಜೆಪಿ- ಕಾಂಗ್ರೆಸ್
ಕೇಂದ್ರದಲ್ಲಿ ನರೇಂದ್ರ ಮೋದಿಜಿ ಅವರ ನೇತೃತ್ವದ ಸರಕಾರ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರಗಳು ಡಬಲ್ ಫೋರ್ಸ್‌ನಲ್ಲಿ ಅಭಿವೃದ್ದಿ ಕಾರ್ಯವನ್ನು ಮಾಡಿವೆ. ಸತತ ಮೂರು ಬಾರಿ ಆಯ್ಕೆಯಾಗುವ ಮೂಲಕ ನನ್ನ ಕ್ಷೇತ್ರದಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದು ಇವುಗಳ ಆಧಾರದ ಮೇಲೆ ಮತದಾರರು ಹೆಚ್ಚಿನ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ- ನನಗೆ ಇನ್ನೂ ವಯಸ್ಸಾಗಿಲ್ಲ, ನಾನು ಚುನಾವಣೆಗೆ ಬೇರೆ ಪಕ್ಷದಿಂದಲೇ ಸ್ಪರ್ಧೆ ಮಾಡುತ್ತೇನೆ- ಎಂ.ಪಿ. ಕುಮಾರಸ್ವಾಮಿ
ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿದ ಅವರು ಹೊಂಗಸಂದ್ರದ ಶ್ರೀ ವೀರಾಂಜನೇಯಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ಬಿಬಿಎಂಪಿ ಮಾಜಿ ಉಪಮೇಯರ್ ರಾಮ್ ಮೋಹನ್ ರಾಜ್ ಹಾಗೂ ಇನ್ನಿತರ ಪ್ರಮುಖ ನಾಯಕರೊಂದಿಗೆ ನಾಮಪತ್ರ ಸಲ್ಲಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.