ತಮ್ಮ ಕಚೇರಿಯಲ್ಲಿರುವ ಪ್ರಧಾನಿ ಮೋದಿ ,ಶಾ ಫೋಟೋ ತೆಗೆಯಲ್ಲ ಎಂದ ಜಗದೀಶ್ ಶೆಟ್ಟರ್

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನಂತರವೂ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ತೆಗೆದಿಲ್ಲ, ಹಾಗೆ ಮಾಡುವುದು ನನ್ನ ಸಂಸ್ಕೃತಿ ಅಲ್ಲ, ನನ್ನ ಜಾಯಮಾನಕ್ಕೆ ಬಂದಿಲ್ಲ ಎಂದು ಕಾಂಗ್ರೆಸ್ ಪಕ್ಷದ  ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿರ್ಧಾರ ಕೈಗೊಂಡಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

Written by - Zee Kannada News Desk | Last Updated : May 3, 2023, 07:22 PM IST
  • ಇನ್ನೊಂದು ಪಕ್ಷಕ್ಕೆ ಬದಲಾದ ತಕ್ಷಣ ಹಿಂದಿನ ನಾಯಕರ ಚಿತ್ರಗಳನ್ನು ತೆಗೆಯುವುದು ಒಳ್ಳೆಯ ಸಂಪ್ರದಾಯವಲ್ಲ.
  • ಈ ಚುನಾವಣೆ ನನ್ನ ಸ್ವಾಭಿಮಾನದ ಹೋರಾಟವೇ ಹೊರತು ರಾಜಕೀಯ ಆಕಾಂಕ್ಷೆಗಾಗಿ ಅಲ್ಲ
ತಮ್ಮ ಕಚೇರಿಯಲ್ಲಿರುವ ಪ್ರಧಾನಿ ಮೋದಿ ,ಶಾ ಫೋಟೋ ತೆಗೆಯಲ್ಲ ಎಂದ ಜಗದೀಶ್ ಶೆಟ್ಟರ್  title=
file photo

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನಂತರವೂ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ತೆಗೆದಿಲ್ಲ, ಹಾಗೆ ಮಾಡುವುದು ನನ್ನ ಸಂಸ್ಕೃತಿ ಅಲ್ಲ, ನನ್ನ ಜಾಯಮಾನಕ್ಕೆ ಬಂದಿಲ್ಲ ಎಂದು ಕಾಂಗ್ರೆಸ್ ಪಕ್ಷದ  ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿರ್ಧಾರ ಕೈಗೊಂಡಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ದಶಕಗಳಿಂದಲೂ ತಾನು ಸೇವೆ ಸಲ್ಲಿಸಿದ ಭಾರತೀಯ ಜನತಾ ಪಕ್ಷವು ಬಿಜೆಪಿ ಹಾಲಿ ಅಸೆಂಬ್ಲಿ ಚುನಾವಣೆ  ಹಿನ್ನೆಲೆಯಲ್ಲಿ ತನ್ನ ಸ್ವಕ್ಷೇತ್ರವಾದ ಹುಬ್ಬಳ್ಳಿ ಧಾರವಾಢ ಸೆಂಟ್ರಲ್ ಟಿಕೆಟ್ ನಿರಾಕರಿಸಿದ ನಂತರ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹಾಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ಅದೃಷ್ಟವನ್ನು ಪರೀಕ್ಷಿಸುತ್ತಿದ್ದಾರೆ. ಆದರೆ ಇನ್ನೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರುಗಳ ಫೋಟೋಗಳು ಕಚೇರಿಯ ಗೋಡೆಯ ಮೇಲೆ ರಾರಾಜಿಸುತ್ತಿವೆ.ಈ ವಿಚಾರ ಈಗ ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. 

ಇದನ್ನೂ ಓದಿ: ಕಾಂಗ್ರೆಸ್- ಜೆಡಿಎಸ್‌ದು ಶಾರ್ಟ್‌ ಕರ್ಟ್ ಸರ್ಕಾರ, ಇವುಗಳಿಂದ ಅಭಿವೃದ್ದಿ ಆಗಲ್ಲ..!

ಸ್ವಾಭಾವಿಕವಾಗಿ, ಪಕ್ಷವು ಬದಲಾಗುತ್ತಿದ್ದಂತೆ, ಕಚೇರಿಯಲ್ಲಿ ಹೆಗ್ಗುರುತುಗಳಾಗಿ ರಾರಾಜಿಸುವ ಫೋಟೋಗಳನ್ನು ಕಿತ್ತೊಗೆದು, ತಮ್ಮ ರಾಜಕೀಯ ನಿಲುವಿಗೆ ಒಗ್ಗುವಂತಹ ಹಾಲಿ ಪಕ್ಷದ ಫೋಟೋಗಳನ್ನು ಹಾಕುವುದು ವಾಡಿಕೆಯಾಗಿದೆ.ಈಗಿಂದೀಗಲೇ ನಾನು ನನ್ನ ಹೊಸ ಪಕ್ಷದ ನಾಯಕರ ಭಾವಚಿತ್ರಗಳನ್ನು ನನ್ನ ಕಚೇರಿಯಲ್ಲಿ ನೇತು ಹಾಕಬಹುದು.ಆದರೆ ಅದು ನನಗೆ ಇಷ್ಟವಿಲ್ಲ.ಅದು ನನ್ನ ವ್ಯಕ್ತಿತ್ವವೂ ಅಲ್ಲ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಎಂಬುದಾಗಿದೆ.

ಜಗದೀಶ್ ಶೆಟ್ಟರ್ ಅವರು 1994 ರಿಂದ ಬಿಜೆಪಿ ಸದಸ್ಯರಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಬಿಜೆಪಿ ಜೊತೆಗಿನ ದೀರ್ಘಕಾಲದ ನಂಟು ಮುರಿದುಕೊಂಡಿರುವ ಶೆಟ್ಟರ್ ಈಗ ಕಾಂಗ್ರೆಸ್ ಧ್ವಜ ಹಿಡಿದು ಆ ಪಕ್ಷದ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.ತಮ್ಮ ಹಿಂದಿನದನ್ನು ಬದಿಗಿಟ್ಟು, ಶೆಟ್ಟರ್ ತಮ್ಮ ಗೃಹ ಕಚೇರಿಯಲ್ಲಿ ಸೋಫಾದಲ್ಲಿ ಕುಳಿತು ತನ್ನ ಬೆಂಬಲಿಗರು ಮತ್ತು ಕಾರ್ಯಕರ್ತರನ್ನು ಭೇಟಿಯಾಗುತ್ತಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಎರಡು ಫೋಟೋ ಫ್ರೇಮ್​​ಗಳು ಅವರು ಕುಳಿತುಕೊಳ್ಳುವ ಹಿಂದಿನ ಗೋಡೆಯ ಮೇಲೆ ಇನ್ನೂ ನೇತಾಡುತ್ತಿವೆ. ಅದೇ ಸೋಫಾದಲ್ಲಿ ಕುಳಿತು ಮಾಧ್ಯಮಗಳಿಗೂ ಸಂದರ್ಶನ ನೀಡುತ್ತಾರೆ. ಜನರನ್ನು ಭೇಟಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ಡಬಲ್ ಎಂಜಿನ್ ಸರ್ಕಾರದ ಎಲ್ಲ ಎಂಜಿನ್ ಗಳು ವಿಫಲವಾಗಿವೆ- ಮಲ್ಲಿಕಾರ್ಜುನ್ ಖರ್ಗೆ

ಫೋಟೋಗಳ ಬಗ್ಗೆ ಪ್ರಶ್ನಿಸಿದಾಗ ತಮ್ಮದೇ ರೀತಿಯಲ್ಲಿ ಉತ್ತರಿಸಿದ್ದಾರೆ ಜಗದೀಶ್ ಶೆಟ್ಟರ್, ಪ್ರಧಾನಿ ನರೇಂದ್ರ ಮೋದಿಯವರಿಗೆ ಗೌರವ ಸೂಚಿಸುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬದಲಾದ ತಕ್ಷಣ ಹಿಂದಿನ ನಾಯಕರ ಚಿತ್ರಗಳನ್ನು ತೆಗೆಯುವುದು ಒಳ್ಳೆಯ ಸಂಪ್ರದಾಯವಲ್ಲ. ನಾನು ಅದನ್ನು ಮಾಡಲು ಸಾಧ್ಯವಿಲ್ಲ.ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಬಗ್ಗೆ ಅಪಾರ ಗೌರವ ಹೊಂದಿದ್ದೇವೆ ಎಂದು ಈ ಹಿಂದೆಯೂ ಸಾಕಷ್ಟು ಬಾರಿ ಹೇಳಿದ್ದೇನೆ. ಈ ಚುನಾವಣೆ ನನ್ನ ಸ್ವಾಭಿಮಾನದ ಹೋರಾಟವೇ ಹೊರತು ರಾಜಕೀಯ ಆಕಾಂಕ್ಷೆಗಾಗಿ ಅಲ್ಲ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News