"ಬಿಜೆಪಿಯಲ್ಲಿ ಇದ್ರೆ ಸೇಫ್, ಇಲ್ಲೆ ಇದ್ದು ಗೆದ್ದು ಸಂತಸದಿಂದ ಮಂತ್ರಿಯಾಗೋದು ಒಳ್ಳೆಯದು"-ಯತ್ನಾಳ್ 

ಬಿಜೆಪಿಯಲ್ಲಿ ಇದ್ರೆ ಸೇಫ್, ಇಲ್ಲೆ ಇದ್ದು ಗೆದ್ದು ಸಂತಸದಿಂದ ಮಂತ್ರಿಯಾಗೋದು ಒಳ್ಳೆಯದು ಎಂದು ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಸೇರುವವರಿಗೆ ಕಿವಿ ಮಾತು ಹೇಳಿದ್ದಾರೆ.

Written by - Manjunath N | Last Updated : Mar 29, 2023, 04:22 PM IST
  • ಗಿಫ್ಟ್ ಹಂಚೋರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವಾಗಬೇಕು.
  • ಗಡಿಯಾರ, ಸೀರೆ, ಕುಕ್ಕರ್ ಒಂದು ಮತ ಕಿಮ್ಮತ್ತು ಆಗುತ್ತಾ? ಎಂದು ಅವರು ಪ್ರಶ್ನಿಸಿದ್ದಾರೆ.
  • ಇನ್ನು ಮುಂದುವರೆದು ಮಾತನಾಡಿದ ಅವರು ನಾನು ಗಿಫ್ಟ್ ಪಾಲಿಟಿಕ್ಸ್‌ಗೆ ವಿರೋಧವಾಗಿದ್ದೀನಿ.
 "ಬಿಜೆಪಿಯಲ್ಲಿ ಇದ್ರೆ ಸೇಫ್, ಇಲ್ಲೆ ಇದ್ದು ಗೆದ್ದು ಸಂತಸದಿಂದ ಮಂತ್ರಿಯಾಗೋದು ಒಳ್ಳೆಯದು"-ಯತ್ನಾಳ್  title=

ವಿಜಯಪುರ: ಬಿಜೆಪಿಯಲ್ಲಿ ಇದ್ರೆ ಸೇಫ್, ಇಲ್ಲೆ ಇದ್ದು ಗೆದ್ದು ಸಂತಸದಿಂದ ಮಂತ್ರಿಯಾಗೋದು ಒಳ್ಳೆಯದು ಎಂದು ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಸೇರುವವರಿಗೆ ಕಿವಿ ಮಾತು ಹೇಳಿದ್ದಾರೆ.ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋದ್ರೆ ಅದು ಮರಣ ಶಾಸನ ಇದ್ದಂತೆ ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲ ಆದ್ದರಿಂದ ರಾತ್ರಿ ಕಂಡ ಬಾವಿಗೆ ಹಗಲು ಹೋಗಿ ಬಿದ್ದಂತೆ ಎಂದು ಅವರು ಹೇಳಿದರು.

ಇದನ್ನೂ ಓದಿ: Priyanka Chopra : ಪ್ರಿಯಾಂಕಾ ಬಾಲಿವುಡ್ ತೊರೆಯಲು ಕಾರಣ ಕರಣ್‌ ಜೋಹರ್‌!? ಹೊರಬಿತ್ತು ಅಸಲಿ ಸತ್ಯ

ಕಾಂಗ್ರೆಸ್ ಈಗ ಡೌನ್ ಆಗಿದೆ, ಮೂರ್ನಾಲ್ಕು ತಿಂಗಳ ಹಿಂದೆ ಕಾಂಗ್ರೆಸ್ ಏರಿಕೆ‌‌ ಕಂಡಿತ್ತು, ಈಗ ಮತ್ತೆ ಡೌನ್ ಆಗಿದೆ, ಅಧಿಕಾರಕ್ಕೆ ಬರೋದಿಲ್, ಈಗ ಯಾರು ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಾರೋ ಅವರು ತಮ್ಮ ಮರಣ ಶಾಸನವನ್ನು ತಾವೇ ಬರೆದುಕೊಂಡಂತೆ ಎಂದು ಕಾಂಗ್ರೆಸ್ ಗೆ ಜಂಪ್ ಆಗ್ತಿರೋರಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ನೂತನ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

ಇದೆ ವೇಳೆ ಚುನಾವಣೆ ವೇಳೆ ನಡೆಯುವ ಗಿಫ್ಟ್ ಪಾಲಿಟಿಕ್ಸ್ ಬಗ್ಗೆ ಮಾತನಾಡಿದ ಅವರು ಗಿಫ್ಟ್ ಹಂಚೋರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವಾಗಬೇಕು.ಗಡಿಯಾರ, ಸೀರೆ, ಕುಕ್ಕರ್ ಒಂದು ಮತ ಕಿಮ್ಮತ್ತು ಆಗುತ್ತಾ? ಎಂದು ಅವರು ಪ್ರಶ್ನಿಸಿದ್ದಾರೆ. ಇನ್ನು ಮುಂದುವರೆದು ಮಾತನಾಡಿದ ಅವರು ನಾನು ಗಿಫ್ಟ್ ಪಾಲಿಟಿಕ್ಸ್‌ಗೆ ವಿರೋಧವಾಗಿದ್ದೀನಿ.ನಾನು ಏನು ಹಂಚೋದಿಲ್ಲ, ಸಾಧನೆ ನೋಡಿ ಓಟ್ ಹಾಕಿ ಅಂತಾ ಹೇಳಿದ್ದೇನೆ.ದೀಪಾವಳಿಯಲ್ಲೆ ಗಿಫ್ಟ್ ನೀಡಿದ್ದೇನೆ, ಆಗ ಎಲ್ಲರು ಕೊರೊನಾದಿಂದ ಸಂಕಷ್ಟದಲ್ಲಿದ್ದರು.ಈಗ ಕೆಲ ಮಂದಿ ಸಕ್ಕರೆ ಹಂಚ್ತಿದ್ದಾರೆ ಆದ್ದರಿಂದ ಚುನಾವಣಾ ಅಧಿಕಾರಿಗಳು ಕಟ್ಟು ನಿಟ್ಟಾಗಿ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News