Karnataka election 2023: ಮತ್ತೆ ಐವರು ಅಭ್ಯರ್ಥಿಗಳನ್ನು ಘೋಷಿಸಿದ ಎಚ್.ಡಿ.ಕುಮಾರಸ್ವಾಮಿ

Karnataka Assembly Election 2023: ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್.ಆರ್.ಸಂತೋಷ್ ಅವರು ಬಿಜೆಪಿ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಹಾಗೆಯೇ ಬಾಗಲಕೋಟೆಯ ದೇವರಾಜ್ ಪಾಟೀಲ್ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರಿದರು.

Written by - Zee Kannada News Desk | Last Updated : Apr 15, 2023, 02:17 PM IST
  • ಮತ್ತೆ ಐವರು ಅಭ್ಯರ್ಥಿಗಳನ್ನು ಘೋಷಿಸಿದ ಎಚ್.ಡಿ.ಕುಮಾರಸ್ವಾಮಿ
  • ಡಾ.ಎ.ಬಿ.ಮಾಲಕರೆಡ್ಡಿ, ರಘು ಆಚಾರ್ ಸೇರಿ 5 ಕ್ಷೇತ್ರಗಳಿಗೆ ಹೆಸರು ಪ್ರಕಟ
  • ಎನ್.ಆರ್.ಸಂತೋಷ್, ದೇವರಾಜ್ ಪಾಟೀಲ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ
Karnataka election 2023: ಮತ್ತೆ ಐವರು ಅಭ್ಯರ್ಥಿಗಳನ್ನು ಘೋಷಿಸಿದ ಎಚ್.ಡಿ.ಕುಮಾರಸ್ವಾಮಿ title=
Karnataka election 2023

ಬೆಂಗಳೂರು: ಈಗಾಗಲೇ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ 2 ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಶನಿವಾರ ಮತ್ತೆ ಐವರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದರು.

ಚಿತ್ರದುರ್ಗಕ್ಕೆ ವಿಧಾನ ಪರಿಷತ್‍ನ ಮಾಜಿ ಸದಸ್ಯ ರಘು ಅಚಾರ್, ಮಡಿಕೇರಿಗೆ ಎನ್.ಎಂ.ಮುತ್ತಪ್ಪ, ಮೂಡಬಿದಿರೆಗೆ ಅಮರಶ್ರೀ, ವರುಣಾ ಕ್ಷೇತ್ರಕ್ಕೆ ಮಾಜಿ ಶಾಸಕ ಡಾ.ಭಾರತಿ ಶಂಕರ್, ಬಾಗಲಕೋಟೆ ಕ್ಷೇತ್ರಕ್ಕೆ ದೇವರಾಜ್ ಪಾಟೀಲ್ ಹಾಗೂ ಯಾದಗಿರಿ ಕ್ಷೇತ್ರಕ್ಕೆ ಮಾಜಿ ಸಚಿವ ಎ.ಬಿ.ಮಾಲಕರೆಡ್ಡಿ ಅವರು ಜೆಡಿಎಸ್ ಅಭ್ಯರ್ಥಿಗಳು ಎಂದು ಸುದ್ದಿಗೋಷ್ಠಿಯಲ್ಲಿ ಎಚ್‍ಡಿಕೆ ತಿಳಿಸಿದರು.  

ಇದನ್ನೂ ಓದಿ: "ನನಗೆ ಹೊಂದಾಣಿಕೆ ರಾಜಕೀಯ ಗೊತ್ತಿಲ್ಲ. ನಾನು ಇರುವ ಪಕ್ಷದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ"

ಎನ್.ಆರ್.ಸಂತೋಷ್ & ದೇವರಾಜ್ ಪಾಟೀಲ್ ಸೇರ್ಪಡೆ

ಇದೇ ಸಂದರ್ಭದಲ್ಲಿ ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್.ಆರ್.ಸಂತೋಷ್ ಅವರು ಬಿಜೆಪಿ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಹಾಗೆಯೇ ಬಾಗಲಕೋಟೆಯ ದೇವರಾಜ್ ಪಾಟೀಲ್ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರಿದರು.

ಎಚ್‍.ಡಿ.ಕುಮಾರಸ್ವಾಮಿ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಇಬ್ಬರೂ ನಾಯಕರಿಗೆ ಪಕ್ಷದ ಶಾಲು ಹೊದಿಸಿ ಜೆಡಿಎಸ್‍ಗೆ ಬರಮಾಡಿಕೊಂಡರು.  

ಇದನ್ನೂ ಓದಿ: ಬೆಂಬಲ ಬೆಲೆಯಡಿ ಕಡಲೆ ಖರೀದಿ: ಹಣ ಪಾವತಿಯಲ್ಲಿ ವಿಳಂಬ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News