ಮತಯಂತ್ರ ಒಡೆದು ಪುಡಿ ಪುಡಿ ಮಾಡಿದ ಗ್ರಾಮಸ್ಥರು..! ಅಧಿಕಾರಿಗಳ ಕಾರು ಜಖಂ, ಸಿಬ್ಬಂದಿಗೆ ಥಳಿತ

Karnataka Vidhansabha Chunav Latest Updates : ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮಸ್ಥರು ವಿವಿ ಪ್ಯಾಡ್‌ ಇವಿಎಂ, ವಿವಿಪ್ಯಾಟ್ ‌ಅನ್ನು ಒಡೆದು ಹಾಕಿ ಪುಡಿ ಪುಡಿ ಮಾಡಿದ್ದಾರೆ. ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ.

Written by - Krishna N K | Last Updated : May 10, 2023, 01:36 PM IST
  • ವಿವಿ ಪ್ಯಾಡ್‌ ಇವಿಎಂ, ವಿವಿಪ್ಯಾಟ್ ಒಡೆದು ಹಾಕಿದ ಗ್ರಾಮಸ್ಥರು.
  • ವಿಜಯಪುರ ಜಿಲ್ಲೆಯ ಮಸಬಿನಾಳ ಗ್ರಾಮದಲ್ಲಿ ನಡೆದ ಘಟನೆ.
  • ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ.
ಮತಯಂತ್ರ ಒಡೆದು ಪುಡಿ ಪುಡಿ ಮಾಡಿದ ಗ್ರಾಮಸ್ಥರು..! ಅಧಿಕಾರಿಗಳ ಕಾರು ಜಖಂ, ಸಿಬ್ಬಂದಿಗೆ ಥಳಿತ title=

Karnataka Assembly Election 2023 Latest Updates (ಕರ್ನಾಟಕ ಅಸೆಂಬ್ಲಿ ಎಲೆಕ್ಷನ್ 2023 ಲೇಟೆಸ್ಟ್ ಅಪ್ಡೇಟ್) :  ಗ್ರಾಮಸ್ಥರು ಮತಯಂತ್ರಗಳನ್ನು ಒಡೆದು ಪುಡಿ ಪುಡಿ ಮಾಡಿ ಸಿಬ್ಬಂದಿಗೂ ಥಳಿಸಿದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಜರುಗಿದೆ.

ಕಾಯ್ದಿರಿಸಲಾಗಿದ್ದ ಮತಯಂತ್ರಗಳನ್ನು ಸಿಬ್ಬಂದಿ ಬಿಸನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ವಾಪಸ್ ತೆಗೆದುಕೊಂಡು ಬರ್ತಿದ್ದಾಗ ಘಟನೆ ಜರುಗಿದೆ. ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗ್ತಿದೆ ಎಂದು ತಪ್ಪು ಭಾವಿಸಿ ಗ್ರಾಮಸ್ಥರು ಮತ ಯಂತ್ರಗಳನ್ನು ಒಡೆದು ಹಾಕಿದ್ದಾರೆ. ಅಲ್ಲದೆ, ಅಧಿಕಾರಿಗಳ ಕಾರನ್ನು ಜಖಂಗೊಳಿಸಿ, ಸಿಬ್ಬಂದಿಗಳಿಗೆ ಥಳಿಸಿದ್ದಾರೆ ಎನ್ನಲಾಗಿದೆ. ಸದ್ಯ ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: Karnataka Elections 2023 : ಬೆಳಿಗ್ಗೆಯಿಂದ ಈ ವರೆಗೆ ರಾಜ್ಯದಲ್ಲಿ ಶೆ.20.99 ರಷ್ಟು ಮತದಾನ..!

ಮತಯಂತ್ರ ಕೆಟ್ಟಲ್ಲಿ ಬಳಕೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ, ವಿವಿಪ್ಯಾಟ್ ‌ಮಶೀನ್‌ಗಳನ್ನು ವಾಪಸ್ ತರೋದನ್ನ ಗಮನಿಸಿ ಸಿಬ್ಬಂದಿಗಳನ್ನ ಜನರು ಪ್ರಶ್ನಿಸಿದದ್ದರು. ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ, ತಪ್ಪುಭಾವಿಸಿದ ಗ್ರಾಮಸ್ಥರು ಮತಯಂತ್ರಗಳನ್ನು ಒಡೆದು ಹಾಕಿದದ್ದಾರೆ ಎನ್ನಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News