Karnataka Assembly Election: ಅಸಮಾಧಾನಗೊಂಡ ನಾಯಕರ ಜೊತೆ ಪಕ್ಷದ ಹಿರಿಯರು ಮಾತನಾಡುತ್ತಿದ್ದು, ಭಿನ್ನಮತ ಶಮನವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಯಲ್ಲಿ ಭಿನ್ನಮತ ಶಮನ ಕುರಿತಂತೆ ಇಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಇನ್ನೂ 12 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಬಾಕಿ ಉಳಿದಿದೆ. ಕೆಲವೆಡೆ ಆಕಾಂಕ್ಷಿಗಳು, ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ಕೊಟ್ಟಿದ್ದಾರೆ ಎಂದರು.
ರಾಜಕಾರಣದಲ್ಲಿ ಪಕ್ಷ ಬದಲಿಸೋದು ಸಾಮಾನ್ಯ:
ರಾಜಕೀಯದಲ್ಲಿ ಪಕ್ಷ ಬದಲಿಸೋದು ಸಾಮಾನ್ಯ. ಅಸಮಾಧಾನಗೊಂಡವರ ಮನವೊಲಿಕೆ ಮಾಡುತ್ತೇವೆ. ಪಕ್ಷದಲ್ಲಿ ಎದ್ದಿರುವ ಅಸಮಾಧಾನ ಸರಿಪಡಿಸಲಾಗುತ್ತಿದೆ. ಕಾರ್ಯಕರ್ತರು ಗಟ್ಟಿ ಇದ್ದಾರೆ, ಇದರಿಂದ ಯಾವುದೇ ಹಾನಿಯಾಗುವುದಿಲ್ಲ ಬಹುತೇಕ ಕಡೆ ಪಕ್ಷದ ಭಿನ್ನಮತ ಶಮನ ಆಗಲಿದೆ ಎಂದು ತಿಳಿಸಿದರು.
ಇದನ್ನೂ ಓದಿ- MP Kumaraswamy: ಕೈ ತಪ್ಪಿದ್ದ ಟಿಕೆಟ್ : ಬಿಜೆಪಿಗೆ ರಾಜೀನಾಮೆ ನೀಡಿದ ಎಂ. ಪಿ ಕುಮಾರಸ್ವಾಮಿ !
ಆರೋಪಗಳಲ್ಲಿ ಹುರುಳಿಲ್ಲ:
ಹಿರಿಯರ ಜತೆ ನಾನು ಹಾಗೂ ಹೈಕಮಾಂಡ್ ಮಾತಾಡುತ್ತಿದ್ದೇವೆ ಲಕ್ಷ್ಮಣ ಸವದಿ ಜನರ ವಿಶ್ವಾಸ ಉಳಿಸಿಕೊಳ್ಳಬೇಕು ಎಂದ ಅವರು ನೆಹರೂ ಓಲೇಕಾರ್ ಆರೋಪಗಳಲ್ಲಿ ಹುರುಳಿಲ್ಲ ಎಂದರು.
ಆರೋಪ ಸಾಬೀತು ಮಾಡಲಿ:
ಅಸಮಾಧಾನಿತರ ಜೊತೆ ಹೈಕಮಾಂಡ್ ಮಾತನಾಡುತ್ತಿದೆ.. ನಾನು ಎಲ್ಲಾ ನಾಯಕರ ಜೊತೆ ಮಾತನಾಡಿದ್ದೇನೆ. ಭಿನ್ನಮತ ಶೀಘ್ರವೇ ಬಗೆಹರಿಯುವ ವಿಶ್ವಾಸ ಇದೆ. ಸವದಿ ಹಿರಿಯರು, ಸುಧೀರ್ಘ ರಾಜಕೀಯದಲ್ಲಿದ್ದಾರೆ. ಸವದಿಗೆ ಜನರಿಂದಲೂ ಒತ್ತಡ ಇದೆ, ಸಮಯ ಬೇಕು. ನೆಹರು ಓಲೇಕಾರ್ ಯಾವ ಆರೋಪ ಬೇಕಾದರೂ ಮಾಡಲಿ. ದಾಖಲೆ ಸಹಿತ 1,500 ಕೋಟಿ ಆರೋಪ ಸಾಬೀತು ಮಾಡಲಿ. ಕೇವಲ ಹೇಳಿಕೆ ಬೇಡ, ದಾಖಲೆ ನೀಡಲಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ- ಬಿಜೆಪಿ ಬಂಡಾಯವೇ ಕೈ ಬಂಡವಾಳ..! ಚಾಮರಾಜನಗರದಲ್ಲೇ ಸೋಮಣ್ಣಗೆ ಚಕ್ರವ್ಯೂಹ
ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ:
ಕಾಂಗ್ರೆಸ್ ನವರಿಗೆ 60ರಿಂದ 65 ಕ್ಷೇತ್ರಗಳಿಗೆ ಅಭ್ಯರ್ಥಿಗಳೇ ಇಲ್ಲ. ಈಗ ಆಮದು ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿ ಇದ್ದಾರೆ. ಕಾಂಗ್ರೆಸ್ ಗೆ ಸಮರ್ಥ ಅಭ್ಯರ್ಥಿ ಇಲ್ಲ, ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.