ನವದೆಹಲಿ: ಬಹು ನಿರೀಕ್ಷಿತ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಇಂದು ಬೆಳಗ್ಗೆ 11.30ಕ್ಕೆ ಭಾರತೀಯ ಚುನಾವಣಾ ಆಯೋಗವು ಘೋಷಿಸಲಿದೆ.
224 ಸದಸ್ಯ ಬಲ ಹೊಂದಿರುವ ಕರ್ನಾಟಕ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳಲಿದೆ. ಇದಕ್ಕೂ ಮುನ್ನವೇ ಸಾರ್ವತ್ರಿಕ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ.
ಇದನ್ನೂ ಓದಿ: BSY ಮನೆ ಮೇಲಿನ ದಾಳಿಯ ಹಿಂದೆ ಬಿಜೆಪಿಯ "ಸಂತೋಷ ಕೂಟ"ದ ಕೈವಾಡ: ಕಾಂಗ್ರೆಸ್
The Election Commission of India will announce the schedule of the General Election to the Legislative Assembly of Karnataka at 11:30am today. pic.twitter.com/Pe6BEWMD9c
— ANI (@ANI) March 29, 2023
ಹೀಗಾಗಿ ಬುಧವಾರ ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ನಡೆಸಲಿದ್ದು, ದಿನಾಂಕವನ್ನು ಘೋಷಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಈಗಾಗಲೇ ಚುನಾವಣೆ ಎದುರಿಸಲು ಪ್ರಮುಖ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತ ಮತಬೇಟೆ ನಡೆಸುತ್ತಿವೆ.
ಇದನ್ನೂ ಓದಿ: DK Shivakumar: ಪ್ರಜಾಧ್ವನಿ ರೋಡ್ ಶೋ ವೇಳೆ ಕಂತೆ ಕಂತೆ ಹಣ ಎಸೆದ ಡಿಕೆಶಿ, ವಿಡಿಯೋ ವೈರಲ್!
ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಮುಖ ಪಕ್ಷಗಳ ಜೊತೆಗೆ ಈ ಬಾರಿ ಆಪ್, ಮಾಜಿ ಸಚಿವ ಜನಾರ್ದನ ರೆಡ್ಡಿಯವರ ಹೊಸ 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ'ವು ಅದೃಷ್ಟ ಪರೀಕ್ಷೆಗೆ ಇಳಿದಿದೆ. ಚಿತ್ರನಟ ರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷ ಸೇರಿದಂತೆ ಹಲವು ಪಕ್ಷಗಳು ಈ ಬಾರಿ ಚುನಾವಣಾ ಕಣದಲ್ಲಿದ್ದು, ಅದೃಷ್ಟ ಪರೀಕ್ಷೆ ನಡೆಸುತ್ತಿವೆ. ಹೀಗಾಗಿ ಈ ಬಾರಿಯ ಚುನಾವಣಾ ಫಲಿತಾಂಶದ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಯಾವ ಪಕ್ಷಕ್ಕೆ ಮತದಾರ ವಿಜಯದ ಮಾಲೆ ಹಾಕುತ್ತಾನೆ ಅನ್ನೋದರ ಬಗ್ಗೆ ಕುತೂಹಲ ಕೆರಳಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.