ರಾಜ್ಯ ವಿಧಾನಸಭೆಗೆ ನಾಳೆಯಿಂದಲೇ ಮತದಾನ ಶುರು ! ಬ್ಯಾಲೇಟ್ ಪೇಪರ್ ವೋಟಿಂಗ್ ಗೆ ಅವಕಾಶ

Karnataka Assembly Election 2023 : ನಾಳೆಯಿಂದ ರಾಜ್ಯದಲ್ಲಿ ಬ್ಯಾಲೇಟ್ ಪೇಪರ್ ವೋಟಿಂಗ್  ಆರಂಭವಾಗಲಿದೆ. ಏಪ್ರಿಲ್ 29 ರಿಂದ ಮೇ 6 ರವರೆಗೆ ಬ್ಯಾಲೇಟ್ ಮತದಾನಕ್ಕೆ ಚುನಾವಣಾ ಆಯೋಗ  ಅವಕಾಶ ನೀಡಿದೆ.  

Written by - Ranjitha R K | Last Updated : Apr 28, 2023, 12:39 PM IST
  • ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ಜೋರಾಗಿದೆ
  • ನಾಳೆಯಿಂದ ಬ್ಯಾಲೇಟ್ ಪೇಪರ್ ವೋಟಿಂಗ್
  • ಮೇ10 ರಂದು ಚುನಾವಣೆಗೆ ಮತದಾನ ನಡೆಯಲಿದೆ.
ರಾಜ್ಯ ವಿಧಾನಸಭೆಗೆ ನಾಳೆಯಿಂದಲೇ ಮತದಾನ ಶುರು ! ಬ್ಯಾಲೇಟ್ ಪೇಪರ್ ವೋಟಿಂಗ್ ಗೆ ಅವಕಾಶ  title=

ಬೆಂಗಳೂರು :  Karnataka Assembly Election 2023 : ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ಜೋರಾಗಿದೆ. ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಮೇ10 ರಂದು ಚುನಾವಣೆಗೆ ಮತದಾನ ನಡೆಯಲಿದೆ. ಎರಡು ದಿನಗಳ ಬಳಿಕ ಅಂದರೆ ಮೇ 13 ಕ್ಕೆ ಫಲಿತಾಂಶ ಹೊರಬೀಳಲಿದೆ. 

ನಾಳೆಯಿಂದ ಬ್ಯಾಲೇಟ್ ಪೇಪರ್ ವೋಟಿಂಗ್ :
ಇನ್ನು ನಾಳೆಯಿಂದ ಅಂದರೆ ಏಪ್ರಿಲ್ 29ರಿಂದ ರಾಜ್ಯದಲ್ಲಿ ಬ್ಯಾಲೇಟ್ ಪೇಪರ್ ವೋಟಿಂಗ್  ಆರಂಭವಾಗಲಿದೆ. ಈ ಪ್ರಕಾರ ಒಂದರ್ಥದಲ್ಲಿ ರಾಜ್ಯ ವಿಧಾನಸಭೆಗೆ ನಾಳೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದೆ. ನಾಳೆಯಿಂದ  ಬ್ಯಾಲೇಟ್ ಪೇಪರ್ ವೋಟಿಂಗ್ ಗೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. 

ಇದನ್ನೂ ಓದಿ : ಜೆಡಿಎಸ್ ಜನತಾ ಪ್ರಣಾಳಿಕೆ ಬಿಡುಗಡೆ: ರೈತರು, ಯುವಕರು,ಮಹಿಳೆಯರಿಗೆ ಬಂಪರ್ ಘೋಷಣೆ

ಏಪ್ರಿಲ್ 29 ರಿಂದ ಮೇ 6 ರವರೆಗೆ ಬ್ಯಾಲೇಟ್ ಪೇಪರ್ ವೋಟಿಂಗ್ :
ಏಪ್ರಿಲ್ 29 ರಿಂದ ಮೇ 6 ರವರೆಗೆ ಬ್ಯಾಲೇಟ್ ಮತದಾನಕ್ಕೆ ಚುನಾವಣಾ ಆಯೋಗ  ಅವಕಾಶ ನೀಡಿದೆ.  ರಾಜಧಾನಿ ಬೆಂಗಳೂರೂ ಸೇರಿದಂತೆ ರಾಜ್ಯದ ಎಲ್ಲಾ ಕಡೆ ನಾಳೆಯಿಂದ ಬ್ಯಾಲೇಟ್ ಪೇಪರ್ ವೋಟಿಂಗ್ ನಡೆಯಲಿದೆ. 80 ವರ್ಷ ಮೇಲ್ಪಟ್ಟ ವೃದ್ಧರು ವಿಕಲಚೇತನರಿಗೆ ಹಾಗೂ ಚುನಾವಣೆಯ ಕರ್ತವ್ಯದಲ್ಲಿ ಭಾಗಿಯಾಗುವ ಪೊಲೀಸ್ , ಚುನಾವಣೆ ಸಿಬ್ಬಂದಿಗಳಿಗೆ ಮತದಾನ ಮಾಡಲು ನಾಳೆಯಿಂದ ಅವಕಾಶ ಕಲ್ಪಿಸಲಾಗಿದೆ. 

ಮನೆ ಬಾಗಿಲಿನಲ್ಲಿ ಮತದಾನಕ್ಕೆ ಅವಕಾಶ : 
ಇನ್ನು 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಹಾಗೂ ಅಂಗವಿಕಲರಿಗೆ ಮನೆ ಬಳಿಯೇ ಮತ ಚಲಾಯಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಚುನಾವಣಾ ಅಯೋಗದ ಸಿಬ್ಬಂದಿಗಳು ಅವರ ಮನೆ ಬಾಗಿಲಿನಲ್ಲಿಯೇ ಬ್ಯಾಲೆಟ್ ಪೇಪರ್ ನೀಡುತ್ತಾರೆ. ಈ ಮೂಲಕ ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗೆ ಗೌಪ್ಯವಾಗಿ ಮತ ಚಲಾವಣೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. 

ಇದನ್ನೂ ಓದಿ :   ಹಾಸನದಲ್ಲಿ ಮತ ಬೇಟೆಗೆ ಆಗಮಿಸುತ್ತಿದೆ ಘಟಾನುಘಟಿ ನಾಯಕರ ದಂಡು

ಹೇಗೆ ನಡೆಯಲಿದೆ ಈ ಪ್ರಕ್ರಿಯೆ ? : 
ಗೌಪ್ಯ ಮತ ಚಲಾಯಿಸುವಾಗ ಚುನಾವಣೆ ಸಿಬ್ಬಂದಿ ಸೇರಿದಂತೆ ಸ್ಥಳೀಯ ಪೊಲೀಸರು ಸ್ಥಳದಲ್ಲಿ ಹಾಜರಿರುತ್ತಾರೆ. ಮನೆಯಲ್ಲೇ ಮತದಾನ ಮಾಡುವಾಗ ವಿಡಿಯೋ ರೇಕಾರ್ಡಿಂಗ್  ಮಾಡಲಾಗುವುದು. ಮತದಾನದ ನಂತರ ಸ್ಟ್ರಾಂಗ್ ರೂಮ್ ಗೆ ಮತ ಪೆಟ್ಟಿಗೆಯನ್ನು ರವಾನಿಸಲಾಗುವುದು.  ಈ ಎಲ್ಲಾ ಮತಗಳನ್ನು ಮೇ 13 ರಂದು ಮತ ಎಣಿಕೆ ದಿನವೇ ಓಪನ್ ಮಾಡಲಾಗುವುದು. 

ಬೆಂಗಳೂರಿನಲ್ಲಿ   80 ವರ್ಷ ಮೇಲ್ಪಟ್ಟ ಮತದಾರರು  :
ಕೇಂದ್ರ ವಲಯದಲ್ಲಿ - 1995,
ಉತ್ತರ -2298.
ದಕ್ಷಿಣ-2530.
ಡಿಸಿ ಅರ್ಬನ್ -2329,
ಒಟ್ಟು - 9152 

ಈ ಬಾರಿ ಕಣದಲ್ಲಿರುವ ಅಭ್ಯರ್ಥಿಗಳು : 
2023 ನೇ  ಸಾಲಿನಲ್ಲಿ 2, 427 ಪುರುಷರು ಮತ್ತು 185  ಮಹಿಳೆಯರು ಸೇರಿದಂತೆ ಒಟ್ಟು 2,6 13 ಅಭ್ಯರ್ಥಿಗಳು ಕಣದಲ್ಲಿದ್ದಾರೆ.  

ಇದನ್ನೂ ಓದಿ :  ಸಾರ್ವಜನಿಕ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ : 5ನೇ ಗ್ಯಾರಂಟಿ ಯೋಜನೆ ಘೋಷಿಸಿದ ರಾಹುಲ್ ಗಾಂಧಿ

ಒಟ್ಟು ಮತದಾರರು : 
ರಾಜ್ಯದಲ್ಲಿ ಈ ಬಾರಿ ಒಟ್ಟು  5,21,73,579 ಮತದಾರರಿದ್ದಾರೆ. ಅವರಲ್ಲಿ 2.62 ಕೋಟಿ ಪುರುಷರು, 2.59 ಕೋಟಿ ಮಹಿಳೆಯರು ಮತ್ತು 4,699 ಟ್ರಾನ್ಸ್ಜೆಂಡರ್ ಮತದಾರರು ಇದ್ದಾರೆ. 16,976 ಶತಾಯುಷಿಗಳು, 80 ವರ್ಷ ಮೇಲ್ಪಟ್ಟ 12.15 ಲಕ್ಷ ಮತದಾರರು ಮತ್ತು 9.17 ಲಕ್ಷ ಪ್ರಥಮ ಬಾರಿ ಮತದಾರರು ಸೇರಿದ್ದಾರೆ. ಇದಲ್ಲದೆ, 5.55 ಲಕ್ಷ ಮತದಾರರು ಅಂಗವಿಕಲರಾಗಿದ್ದಾರೆ. 

ಮತದಾನ ಕೇಂದ್ರಗಳು : 
ರಾಜ್ಯಾದಾದ್ಯಂತ 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.  ಇವುಗಳಲ್ಲಿ 24,063 ನಗರ ಪ್ರದೇಶಗಳಲ್ಲಿ ಮತ್ತು 34,219 ಗ್ರಾಮೀಣ ಪ್ರದೇಶದಲ್ಲಿವೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News