ಫೇಕ್ ಸುದ್ದಿಗಳಿಂದ ವೀರಶೈವ‌ ಲಿಂಗಾಯತ ಸಮುದಾಯಕ್ಕೆ ಅವಮಾನ: ಕಾಂಗ್ರೆಸ್‍ಗೆ ತಕ್ಕಪಾಠವೆಂದ ಬಿಜೆಪಿ

‘ವೀರಶೈವ ಲಿಂಗಾಯತ ಸಮುದಾಯದವರಿಗೆ ಬಿಜೆಪಿಯಿಂದ ಅನ್ಯಾಯವಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ಬಾಯಿ ಬಡಿದುಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷದಿಂದ ವೀರಶೈವ ಲಿಂಗಾಯತ ಸಮುದಾಯಕ್ಕೆ ಆಗಿರುವ ಅನ್ಯಾಯ ಮರೆಮಾಚುವ ಕಸರತ್ತು ಕಾಂಗ್ರೆಸ್ ‌ನಡೆಸುತ್ತಿದೆ’ ಎಂದು ಬಿಜೆಪಿ ಕಿಡಿಕಾರಿದೆ.

Written by - Zee Kannada News Desk | Last Updated : Mar 17, 2023, 08:53 PM IST
  • ವೀರಶೈವ ಲಿಂಗಾಯತ ಸಮುದಾಯದವರಿಗೆ ಬಿಜೆಪಿಯಿಂದ ಅನ್ಯಾಯವಾಗುತ್ತಿದೆ ಎಂದು ಸುಳ್ಳು ಸುದ್ದಿ
  • ಕಾಂಗ್ರೆಸ್ ಪಕ್ಷದಿಂದ ವೀರಶೈವ ಲಿಂಗಾಯತ ಸಮುದಾಯಕ್ಕೆ ಆಗಿರುವ ಅನ್ಯಾಯ ಮರೆಮಾಚುವ ಕಸರತ್ತು
  • ಸಮುದಾಯಕ್ಕೆ ಅವಮಾನ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿಯೂ ಜನ ತಕ್ಕ ಪಾಠ ಕಲಿಸಲಿದ್ದಾರೆ
ಫೇಕ್ ಸುದ್ದಿಗಳಿಂದ ವೀರಶೈವ‌ ಲಿಂಗಾಯತ ಸಮುದಾಯಕ್ಕೆ ಅವಮಾನ: ಕಾಂಗ್ರೆಸ್‍ಗೆ ತಕ್ಕಪಾಠವೆಂದ ಬಿಜೆಪಿ title=
ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: ‘ವೀರಶೈವ ಲಿಂಗಾಯತ ಸಮುದಾಯದವರಿಗೆ ಬಿಜೆಪಿಯಿಂದ ಅನ್ಯಾಯವಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ಬಾಯಿ ಬಡಿದುಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷದಿಂದ ವೀರಶೈವ ಲಿಂಗಾಯತ ಸಮುದಾಯಕ್ಕೆ ಆಗಿರುವ ಅನ್ಯಾಯ ಮರೆಮಾಚುವ ಕಸರತ್ತು ಕಾಂಗ್ರೆಸ್ ‌ನಡೆಸುತ್ತಿದೆ’ ಎಂದು ಬಿಜೆಪಿ ಕಿಡಿಕಾರಿದೆ.

#LiesofCongress ಹ್ಯಾಶ್‍ಟ್ಯಾಗ್ ಬಳಸಿ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ‘ವೀರಶೈವ ‌ಲಿಂಗಾಯತ ನಾಯಕರಾಗಿದ್ದ ಎಸ್.‌ನಿಜಲಿಂಗಪ್ಪ, ವೀರೇಂದ್ರ ಪಾಟೀಲರಿಗೆ ಕಾಂಗ್ರೆಸ್ ಪಕ್ಷದಿಂದ ಆಗಿರುವ ಘೋರ‌ ಅವಮಾನವನ್ನು ವೀರಶೈವ ಲಿಂಗಾಯತ ಸಮುದಾಯ ಎಂದೂ ಮರೆಯುವುದಿಲ್ಲ’ವೆಂದು ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ: ಸಚಿವ ವಿ. ಸೋಮಣ್ಣ ಮುನಿಸಿಗೆ ಚಾಮರಾಜನಗರ ಸಾರಥ್ಯದ ಮುಲಾಮು ಹಚ್ಚಿದ ಹೈಕಮಾಂಡ್!

‘ಬಿಜೆಪಿ ವೀರಶೈವ ಲಿಂಗಾಯತ ಸಮುದಾಯ ಹಾಗೂ ಸಮುದಾಯದ ಯಾವುದೇ ನಾಯಕರನ್ನು ಅಗೌರವದಿಂದ ನೋಡಿಲ್ಲ. ಬಿಜೆಪಿ ಪಕ್ಷ ಹಾಗೂ ಸರ್ಕಾರದಲ್ಲಿ ಲಿಂಗಾಯತ ಸಮುದಾಯದ ನಾಯಕರು ಉನ್ನತ ಸ್ಥಾನದಲ್ಲಿರುವುದು ಕಾಂಗ್ರೆಸ್‍ನ ಹೊಟ್ಟೆ ಉರಿಗೆ ಕಾರಣವಾದಂತಿದೆ’ ಎಂದು ಬಿಜೆಪಿ ಟೀಕಿಸಿದೆ.

‘ಒಂದು ಜಾಗೃತ ಸಮುದಾಯವನ್ನು ಎತ್ತಿಕಟ್ಟಲು ಕಾಂಗ್ರೆಸ್ ಎಷ್ಟೇ ಬೊಬ್ಬೆ ಹೊಡೆದರೂ ನಿಮ್ಮ ಅಪಪ್ರಚಾರಕ್ಕೆ ಮರುಳಾಗುವಷ್ಟು ದುರ್ಬಲ ಮನಸ್ಸಿನವರು ರಾಜ್ಯದಲ್ಲಿಲ್ಲ. ಧರ್ಮದ ಹೆಸರಿನಲ್ಲಿ ಸಮುದಾಯ ಒಡೆಯುವ ಭಂಡತನಕ್ಕೆ ಕಳೆದ ಚುನಾವಣೆಯಲ್ಲಿ ಜಾಗೃತ ವೀರಶೈವ ಲಿಂಗಾಯತ ಸಮುದಾಯ ತಕ್ಕ ಪಾಠ ಕಲಿಸಿದೆ’ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಇಂದಿನಿಂದ ನಾಲ್ಕು ದಿನ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

‘ಈ ಬಾರಿಯೂ ವೀರಶೈವ‌ ಲಿಂಗಾಯತ ಸಮುದಾಯದ ವಿಚಾರದಲ್ಲಿ ಫೇಕ್ ಸುದ್ದಿಗಳ‌ ಮೂಲಕ ಸಮುದಾಯಕ್ಕೆ ಅವಮಾನ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿಯೂ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News