ಕಾಂಗ್ರೆಸ್ ಕಥೆ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ: ಬಿಜೆಪಿ ವ್ಯಂಗ್ಯ

Siddaramaiah Viral Video: ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಬಸ್‍ನಲ್ಲಿ ಸಿದ್ದರಾಮಯ್ಯನವರು 500 ರೂ. ನೀಡಿ ಸಮಾವೇಶಕ್ಕೆ ಜನರನ್ನು ಸೇರಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸೂಚಿಸಿದ್ದಾರೆ.

Written by - Puttaraj K Alur | Last Updated : Mar 2, 2023, 01:18 PM IST
  • ಕಾಂಗ್ರೆಸ್ ಪ್ರಚಾರ ಸಭೆಗೆ ಹೆಚ್ಚು ಜನರನ್ನು ಕರೆತರಲು ಪ್ರತಿಯೊಬ್ಬರಿಗೆ 500 ರೂ. ನೀಡಿ
  • ಸಿದ್ದರಾಮಯ್ಯನವರ ವೈರಲ್ ವಿಡಿಯೋ ಹಂಚಿಕೊಂಡು ಟೀಕಾಪ್ರಹಾರ ನಡೆಸಿದ ಬಿಜೆಪಿ
  • ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ ಎಂದು ಬಿಜೆಪಿ ವ್ಯಂಗ್ಯ
ಕಾಂಗ್ರೆಸ್ ಕಥೆ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ: ಬಿಜೆಪಿ ವ್ಯಂಗ್ಯ title=
ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸಮಾವೇಶಕ್ಕೆ ಪ್ರತಿಯೊಬ್ಬರಿಗೆ 500 ರೂ. ಕೊಟ್ಟು ಜನರನ್ನು ಕರೆತರಬೇಕು. ಬಿಜೆಪಿಯವರು ಜನರನ್ನು ಕರೆದುಕೊಂಡು ಬರುತ್ತಾರೆ. ನಾವು ಸಹ ಹೆಚ್ಚು ಜನರನ್ನು ಸಮಾವೇಶಕ್ಕೆ ಸೇರಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಬಸ್‍ನಲ್ಲಿ ಸಿದ್ದರಾಮಯ್ಯನವರು 500 ರೂ. ನೀಡಿ ಸಮಾವೇಶಕ್ಕೆ ಜನರನ್ನು ಸೇರಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸೂಚಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಬಿಜೆಪಿ ಕಿಡಿಕಾರಿದೆ.

ಇದನ್ನೂ ಓದಿ: ಪಕ್ಷಕ್ಕೆ ಎಲ್ಲರೂ ಬೇಕು, ಬಂದರೆ ಜೊತೆಯಾಗಿ- ಇಲ್ಲದಿದ್ದವರನ್ನು ಬಿಟ್ಟು ಹೋಗುತ್ತೇವೆ: ಸಚಿವೆ ಶೋಭಾ ಖಡಕ್ ಮಾತು

#CorruptCongress ಹ್ಯಾಶ್‍ಟ್ಯಾಗ್ ಬಳಸಿ ಸಿದ್ದರಾಮಯ್ಯನವರು ಮಾತನಾಡಿರುವ ವಿಡಿಯೋವನ್ನು ಟ್ವಟಿರ್ ಖಾತೆಯಲ್ಲಿ ಹಂಚಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ರಾಜಕಾರಣದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. ‘ದುಡ್ಡು ಕೊಟ್ಟು ಜನರನ್ನು ಕರೆತರುವುದು, ಅವರಿಗೆಲ್ಲ ಬಿಟ್ಟಿ ಬಿಟ್ಟಿ ಭಾಗ್ಯ ಘೋಷಣೆ ಮಾಡುವುದು. ಆ ಕಡೆ ಅದೂ ಇಲ್ಲ, ಈ ಕಡೆ ಇದೂ ಇಲ್ಲ. ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ’ ಎಂದು ಬಿಜೆಪಿ ಟೀಕಿಸಿದೆ.

ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಗಳಿಗೆ ಹೆಚ್ಚು ಜನರನ್ನು ಕರೆತರಬೇಕು. 500 ರೂ. ನೀಡಿ ಜನರನ್ನು ಸೇರಿಸುವ ವ್ಯವಸ್ಥೆ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು. ಬೆಳಗಾವಿಯ ಪ್ರಜಾಧ್ವನಿ ಸಮಾವೇಶ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಸಿದ್ದರಾಮಯ್ಯ ಮಾತನಾಡಿದ್ದ ವಿಡಿಯೋ ಸಖತ್ ವೈರಲ್ ಆಗಿದೆ. ಸಿದ್ದರಾಮಯ್ಯರ ಮಾತುಗಳಿಗೆ ವ್ಯಾಪಕ ಜನಾಕ್ರೋಶ ಸಹ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಅಯ್ಯೋ ವಿಧಿಯೇ: ತಾಯಿ ಮೃತಪಟ್ಟಿರೋದು ಗೊತ್ತಾಗದೆ ಮೃತದೇಹದ ಜೊತೆ ಎರಡು ದಿನ ಕಳೆದ ಬಾಲಕ..

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News