Karnataka Election 2023: ಮಹದೇವಪುರ ಕ್ಷೇತ್ರಕ್ಕೆ ಅರವಿಂದ ಲಿಂಬಾವಳಿ ಪತ್ನಿ ಟಿಕೆಟ್ ಸಾಧ್ಯತೆ!

Karnataka Assembly Election 2023: ಅರವಿಂದ ಲಿಂಬಾವಳಿ ಅವರನ್ನು ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳುವ ಹಿನ್ನೆಲೆ ಅವರ ಪತ್ನಿಗೆ ಅದೃಷ್ಟ ಒಲಿದು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Written by - Puttaraj K Alur | Last Updated : Apr 16, 2023, 05:10 PM IST
  • ಮಹದೇವಪುರ ಕ್ಷೇತ್ರಕ್ಕೆ ಅರವಿಂದ ಲಿಂಬಾವಳಿ ಪತ್ನಿ ಮಂಜುಳಾರಿಗೆ ಟಿಕೆಟ್ ಸಾಧ್ಯತೆ
  • ಬಿಜೆಪಿಯ ಮೊದಲ ಹಾಗೂ 2ನೇ ಪಟ್ಟಿಯಲ್ಲಿ ಅರವಿಂದ ಲಿಂಬಾವಳಿ ಹೆಸರು ಕೈಬಿಡಲಾಗಿದೆ
  • ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಲಿಂಬಾವಳಿ ಪತ್ನಿ ಮಂಜುಳಾ ಹೆಸರು ಅಂತಿಮವಾಗಿದೆ
Karnataka Election 2023: ಮಹದೇವಪುರ ಕ್ಷೇತ್ರಕ್ಕೆ ಅರವಿಂದ ಲಿಂಬಾವಳಿ ಪತ್ನಿ ಟಿಕೆಟ್ ಸಾಧ್ಯತೆ! title=
ಅರವಿಂದ ಲಿಂಬಾವಳಿ ಪತ್ನಿಗೆ ಟಿಕೆಟ್?

ಮಹದೇವಪುರ: ಮಹದೇವಪುರ ಕ್ಷೇತ್ರಕ್ಕೆ ಅರವಿಂದ ಲಿಂಬಾವಳಿ ಪತ್ನಿ ಮಂಜುಳಾ ಅರವಿಂದ ಲಿಂಬಾವಳಿಗೆ ಟಿಕೆಟ್ ಘೋಷಣೆ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಬಿಜೆಪಿಯ ಮೊದಲ ಹಾಗೂ 2ನೇ ಪಟ್ಟಿಯಲ್ಲಿ ಅರವಿಂದ ಲಿಂಬಾವಳಿಯವರ ಹೆಸರನ್ನು ಕೈಬಿಡಲಾಗಿತ್ತು. ಅರವಿಂದ ಲಿಂಬಾವಳಿ ಅವರನ್ನು ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳುವ ಹಿನ್ನೆಲೆ ಅವರ ಪತ್ನಿಗೆ ಅದೃಷ್ಟ ಒಲಿದು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಬೆಳೆಸಿದ ಪಕ್ಷ ಬಿಟ್ಟು ದುಡುಕಿದ್ರಾ ಸವದಿ, ಶೆಟ್ಟರ್‌..? : ಇಬ್ಬರಿಗೂ ಬಿಜೆಪಿ ಕೊಟ್ಟ ಬಿಗ್‌ ಆಫರ್‌ ಇವು..!

ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಲಿಂಬಾವಳಿ ಪತ್ನಿ ಮಂಜುಳಾ ಹೆಸರು ಅಂತಿಮವಾಗಿದ್ದು, ಬಿಜೆಪಿಯ 3ನೇ ಪಟ್ಟಿಯಲ್ಲಿ ಮಹದೇವಪುರ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳ್ಳಲಿದೆ.

ಅರವಿಂದ ಲಿಂಬಾವಳಿಯವರು ಬಿಜೆಪಿಯಲ್ಲಿ 3 ಬಾರಿ ಶಾಸಕ ಹಾಗೂ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಬಿಜೆಪಿಯ 3ನೇ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲಿಯೇ ಘೋಷಣೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: "ಬಿಜೆಪಿಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಶೇ.50 ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ"

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News