Karnataka elections: ಆಣೆ ಪ್ರಮಾಣ ಮಾಡಿದ ಬಿಜೆಪಿ ಮುಖಂಡರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್..!

Karnataka Assembly election 2023: ಸೋಮೇಶ್ವರ ದೇವಸ್ಥಾನದಲ್ಲಿ ಎಂಎಲ್ಸಿ ಪ್ರದೀಪ್ ಶೆಟ್ಟರ್ ನೇತೃತ್ವದಲ್ಲಿ ಆಣೆ ಪ್ರಮಾಣ ಮಾಡಲಾಗಿತ್ತು. ಗುರುವಾರ ಬೆಳಗ್ಗೆ ದೇವಸ್ಥಾನದಲ್ಲಿ ಶಿರಹಟ್ಟಿ ಕ್ಷೇತ್ರದ ಆಕಾಂಕ್ಷಿಗಳಿಂದ ಆಣೆ ಪ್ರಮಾಣ ನಡೆದಿತ್ತು.

Written by - Zee Kannada News Desk | Last Updated : Apr 8, 2023, 02:17 PM IST
  • ಆಣೆ ಪ್ರಮಾಣ ಮಾಡಿದ ಬಿಜೆಪಿ ಮುಖಂಡರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ
  • ಚುನಾವಣಾ ನೀತಿ ಸಂಹಿತೆ‌ ಉಲ್ಲಂಘನೆ ಮಾಡಿದ ಬಿಜೆಪಿ ಶಾಸಕ, MLC ಸೇರಿ‌ ಟಿಕೆಟ್ ಆಕಾಂಕ್ಷಿಗಳ ವಿರುದ್ಧ FIR
  • ನೀತಿ ಸಂಹಿತೆ ಉಲ್ಲಂಘಸಿ ಐತಿಹಾಸಿ ಸೋಮೇಶ್ವರ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿದ್ದ ಆಕಾಂಕ್ಷಿಗಳು
Karnataka elections: ಆಣೆ ಪ್ರಮಾಣ ಮಾಡಿದ ಬಿಜೆಪಿ ಮುಖಂಡರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್..! title=
MLC ಸೇರಿ‌ ಟಿಕೆಟ್ ಆಕಾಂಕ್ಷಿಗಳ ವಿರುದ್ಧ FIR!

ಗದಗ: ಆಣೆ ಪ್ರಮಾಣ ಮಾಡಿದ ಬಿಜೆಪಿ ಮುಖಂಡರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಚುನಾವಣಾ ನೀತಿ ಸಂಹಿತೆ‌ ಉಲ್ಲಂಘನೆ ಮಾಡಿದ ಬಿಜೆಪಿ ಶಾಸಕ, ಎಂಎಲ್ಸಿ ಸೇರಿ‌ ಟಿಕೆಟ್ ಆಕಾಂಕ್ಷಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನೀತಿ ಸಂಹಿತೆ ಉಲ್ಲಂಘಸಿ ಐತಿಹಾಸಿ ಸೋಮೇಶ್ವರ ದೇವಸ್ಥಾನದಲ್ಲಿ ಆಕಾಂಕ್ಷಿಗಳು ಆಣೆ ಪ್ರಮಾಣ ಮಾಡಿದ್ದರು. ಪಕ್ಷಕ್ಕೆ ನಿಷ್ಠರಾಗಿರುತ್ತೇವೆ ಅಂತಾ ಪ್ರಮಾಣ ಮಾಡಿದ್ದರು.  

ಇದನ್ನೂ ಓದಿ: ಅಮುಲ್ ವಿಚಾರದಲ್ಲಿ ರಾಜಕಾರಣ ಸಲ್ಲದು: ಸಿಎಂ ಬಸವರಾಜ್ ಬೊಮ್ಮಾಯಿ

ಸೋಮೇಶ್ವರ ದೇವಸ್ಥಾನದಲ್ಲಿ ಎಂಎಲ್ಸಿ ಪ್ರದೀಪ್ ಶೆಟ್ಟರ್ ನೇತೃತ್ವದಲ್ಲಿ ಆಣೆ ಪ್ರಮಾಣ ಮಾಡಲಾಗಿತ್ತು. ಗುರುವಾರ ಬೆಳಗ್ಗೆ ದೇವಸ್ಥಾನದಲ್ಲಿ ಶಿರಹಟ್ಟಿ ಕ್ಷೇತ್ರದ ಆಕಾಂಕ್ಷಿಗಳಿಂದ ಆಣೆ ಪ್ರಮಾಣ ನಡೆದಿತ್ತು.

ಎಂಎಲ್ಸಿ ಪ್ರದೀಪ್ ಶೆಟ್ಟರ್, ಟಿಕೆಟ್ ಆಕಾಂಕ್ಷಿಗಳಾದ ಶಾಸಕ ರಾಮಣ್ಣ ಲಮಾಣಿ, ಡಾ.ಚಂದ್ರು ಲಮಾಣಿ, ಭೀಮಸಿಂಗ್ ರಾಠೋಡ, ಗುರುನಾಥ್ ದಾನಪ್ಪನವರ್ & ಉಷಾ ದಾಸರ್ ಅವರು ಆಣೆ ಪ್ರಮಾಣದ ಮಾಡಿದ್ದರು.

ಇದನ್ನೂ ಓದಿ: Karnataka elections: ಕಾಂಗ್ರೆಸ್ 130ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ-ಸಿದ್ದರಾಮಯ್ಯ

ಇವರ ವಿರುದ್ಧ ಇದೀಗ ಧಾರ್ಮಿಕ ಸ್ಥಳಗಳ ದುರುಪಯೋಗ 1988ರ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News