ಶೆಟ್ಟರ್ ಕ್ಷಮೆ ಕೇಳುವ ಪ್ರಮೇಯವೇ ಬಂದಿಲ್ಲ: ಕೇಂದ್ರ ಸಚಿವ ಜೋಶಿ

Karnataka assembly Election: ನಿನ್ನೆ ಕೇಂದ್ರ ಗೃಹ ಸಚಿವರ ಸಭೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಬೇಡಿ ಎಂಬುವಂತ ಮಾತು ಕೇಳಿ ಬಂದಿರುವ ಬೆನ್ನಲ್ಲೇ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ. 

Written by - Yashaswini V | Last Updated : Apr 25, 2023, 01:08 PM IST
  • ಚುನಾವಣೆ ಗೆಲ್ಲಬೇಕು ಎಂಬುವಂತ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆ ರೀತಿಯಲ್ಲಿ ಹೇಳಿದ್ದಾರೆ.
  • ನಮ್ಮ ಗುರಿ ಒಂದೇ ಚುನಾವಣೆ ಗೆಲ್ಲಬೇಕು.
  • ಶೆಟ್ಟರ್ ಕ್ಷಮೆಯ ಪ್ರಮೇಯವೇ ಬಂದಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ
ಶೆಟ್ಟರ್ ಕ್ಷಮೆ ಕೇಳುವ ಪ್ರಮೇಯವೇ ಬಂದಿಲ್ಲ: ಕೇಂದ್ರ ಸಚಿವ ಜೋಶಿ title=

Karnataka assembly Election 2023: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕ್ಷಮೆ ಕೇಳಿಲ್ಲ. ನಾವು ಕೇಳು ಅಂತ ಕೂಡ ಹೇಳಿಲ್ಲ. ಕ್ಷಮೆ ಕೇಳುವ ಪ್ರಮೇಯವೇ ಬಂದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಿನ್ನೆ ಕೇಂದ್ರ ಗೃಹ ಸಚಿವರ ಸಭೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಬೇಡಿ ಎಂಬುವಂತ ಮಾತು ಕೇಳಿ ಬಂದಿರುವ ಬೆನ್ನಲ್ಲೇ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಚುನಾವಣೆ ಗೆಲ್ಲಬೇಕು ಎಂಬುವಂತ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆ ರೀತಿಯಲ್ಲಿ ಹೇಳಿದ್ದಾರೆ. ನಮ್ಮ ಗುರಿ ಒಂದೇ ಚುನಾವಣೆ ಗೆಲ್ಲಬೇಕು. ಶೆಟ್ಟರ್ ಕ್ಷಮೆಯ ಪ್ರಮೇಯವೇ ಬಂದಿಲ್ಲ ಎಂದರು.

ಇದನ್ನೂ ಓದಿ- ಸೆಂಟ್ರಲ್ ಕ್ಷೇತ್ರದಿಂದ 35 ಸಾವಿರ ಅಂತರದಲ್ಲಿ ಗೆಲ್ಲಲು ಅಮಿತ್ ಶಾ ಸೂಚನೆ: ಅರವಿಂದ ಬೆಲ್ಲದ್

ಮುಸ್ಲಿಂ ಮೀಸಲಾತಿ ವಿಚಾರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದು, ಈ ಕುರಿತು ಸಂಬಂಧಪಟ್ಟ ವಕೀಲರ ಜೊತೆಗೆ ಮಾತನಾಡಿದ್ದೇನೆ. ಯಾವುದೇ ರೀತಿಯಲ್ಲಿ ಸ್ಟೇಯ್ ಕೊಟ್ಟಿಲ್ಲ. ಇನ್ನೂ ಕೂಡ ವಿಚಾರಣೆ ಹಂತದಲ್ಲಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ- "ನನ್ನನ್ನು ಸೋಲಿಸಿದವರನ್ನು ಕಣ್ಣೀರು ಹಾಕಿಸಿದಾಗ ಮಾತ್ರ ನನ್ನ ಆತ್ಮಕ್ಕೆ ಶಾಂತಿ ಸಿಗುತ್ತದೆ"

ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆಯಿಂದ ಬಿಜೆಪಿ ಅಭ್ಯರ್ಥಿಗಳು ಸೂಕ್ತ ಬಹುಮತದೊಂದಿಗೆ ಆರಿಸಿ ಬರುವ ಮೂಲಕ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಅವರು ಭರವಸೆ ನೀಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News