ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವದರಿಂದಾಗಿ, ಮಕ್ಕಳನ್ನು ಚುನಾವಣಾ ಪ್ರಚಾರ ಕಾರ್ಯದಲ್ಲಿ ಬಳಸಿಕೊಂಡು, ಮಕ್ಕಳನ್ನು ಶೋಷಿಸುವದನ್ನು ತಡೆಗಟ್ಟುವಂತೆ ಕೋರಿರುತ್ತಾರೆ.

Written by - Zee Kannada News Desk | Last Updated : Apr 21, 2023, 09:26 AM IST
  • ಮಕ್ಕಳ ಬೆಳವಣೆಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಮಕ್ಕಳು ಭಾಗವಹಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುತ್ತದೆ”.
  • ಈ ಕುರಿತು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿರುತ್ತಾರೆ.
 ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ title=
ಸಾಂದರ್ಭಿಕ ಚಿತ್ರ

ಕೊಪ್ಪಳ: ಮಕ್ಕಳಿಂದ ಚುನಾವಣಾ ಪ್ರಚಾರ ಮಾಡಿಸಿದ ಹಾಗೂ ಮಕ್ಕಳನ್ನು ಪ್ರಚಾರ ಕಾರ್ಯದಲ್ಲಿ ಬಳಸಿಕೊಂಡ ವಿವಿಧ ರಾಜಕೀಯ ಪಕ್ಷಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದ್ದರಿಂದ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪದ್ಮಾವತಿ ಜಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ವರುಣ ಬಳಿಕ ಚಾಮರಾಜನಗರದಲ್ಲಿ 2ನೇ ಸುತ್ತಿನ ಮತಬೇಟೆ

ಭಾರತ ಸರಕಾರವು ವಿಶ್ವಸಂಸ್ಥೆಯು ಅನುಮೋದಿತ “ಮಕ್ಕಳ ಹಕ್ಕುಗಳ ಒಡಂಬಡಿಕೆಗೆ 11 ಡಿಸೆಂಬರ 1992ರಲ್ಲಿ ಒಪ್ಪಿ ಅನುಮೋದಿಸಿರುತ್ತದೆ”. ಈ ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ)-2015ರನ್ವಯ ‘18 ವರ್ಷದೊಳಗಿನ ಎಲ್ಲಾ ಮಾನವಜೀವಿಗಳು ಮಕ್ಕಳು ಎಂದು ಪರಿಗಣಿತವಾಗಿದೆ’.ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ 32 ಮತ್ತು 36ರಲ್ಲಿ “ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ, ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣೆಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಮಕ್ಕಳು ಭಾಗವಹಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುತ್ತದೆ”.

ಇದನ್ನೂ ಓದಿ-ʼಲಿಂಗಾಯತ ಸಿಎಂʼ ಘೋಷಣೆ ಬಗ್ಗೆ ಯಾವುದೇ ನಿರ್ಣಯ ಆಗಿಲ್ಲ : ಸಿಎಂ ಸ್ಪಷ್ಟನೆ

ಅಧ್ಯಕ್ಷರು, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ನವದೆಹಲಿ ರವರು ‘ಚುನಾವಣಾ ಕಾರ್ಯಗಳಲ್ಲಿ ಮತ್ತು ಯಾವುದೇ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದು, ಚುನಾವಣಾಧಿಕಾರಿಗಳು, ಮುಖ್ಯ ಚುನಾವಣಾಧಿಕಾರಿಗಳ ಕಾರ್ಯಾಲಯ, ನವದೆಹಲಿರವರು, ಈ ಕುರಿತು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿರುತ್ತಾರೆ. ಅಧ್ಯಕ್ಷರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು ರವರು ಬೇಸಿಗೆ ರಜೆಗಳು ಪ್ರಾರಂಭವಾಗಿದ್ದು, ಅಲ್ಲದೇ ರಾಜ್ಯದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವದರಿಂದಾಗಿ, ಮಕ್ಕಳನ್ನು ಚುನಾವಣಾ ಪ್ರಚಾರ ಕಾರ್ಯದಲ್ಲಿ ಬಳಸಿಕೊಂಡು, ಮಕ್ಕಳನ್ನು ಶೋಷಿಸುವದನ್ನು ತಡೆಗಟ್ಟುವಂತೆ ಕೋರಿರುತ್ತಾರೆ.

ಈ ಎಲ್ಲಾ ಕಾರಣದಿಂದಾಗಿ ಬಾಲ ಕಾರ್ಮಿಕ ಪದ್ಧತಿ ನಿಷೇಧ-1986 ಮತ್ತು ಹದಿ ಹರೆಯದ ಮಕ್ಕಳ ದುಡಿಮೆ ನಿಯಂತ್ರಣ ತಿದ್ದುಪಡಿ ಕಾಯ್ದೆ-2016 ಕಾಯ್ದೆಯನ್ವಯ 14 ವರ್ಷದೊಳಗಿನ ಮಕ್ಕಳು ಯಾವುದೇ ದುಡಿಮೆ ಕಾರ್ಯದಲ್ಲಿ ಅಥವಾ ದುಡಿಮೆ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವದನ್ನು ನಿಷೇಧಿಸಿದೆ ಮತ್ತು 18 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವದನ್ನು ನಿಷೇಧಿಸಿಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News