Praveen Nettaru: ನಾಳೆ ಪ್ರವೀಣ್ ನೆಟ್ಟಾರು ಕನಸಿನ ಮನೆಯ ಗೃಹಪ್ರವೇಶ

Praveen Nettaru Dream Home: ಪ್ರವೀಣ್ ನೆಟ್ಟಾರು ಕನಸು ನನಸು ಮಾಡುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಅವರ ಕುಟುಂಬಸ್ಥರ ಜೊತೆಗೆ ಈ ಹಿಂದೆ ಮಾತುಕತೆ ನಡೆಸಿದ್ದರು. ಬಳಿಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ​

Written by - Zee Kannada News Desk | Last Updated : Apr 26, 2023, 03:02 PM IST
  • ಪ್ರವೀಣ್ ನೆಟ್ಟಾರು ಕನಸಿನ ಮನೆ ‘ಪ್ರವೀಣ್ ನಿಲಯ’ ಗೃಹಪ್ರವೇಶಕ್ಕೆ ಸಿದ್ಧವಾಗಿದೆ
  • ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಟ್ಟಾರಿನಲ್ಲಿ ಗೃಹಪ್ರವೇಶ ಕಾರ್ಯಕ್ರಮ
  • ಶ್ರೀಗಣಪತಿ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಗೃಹ ಪ್ರವೇಶ ನೆರವೇರಲಿದೆ
Praveen Nettaru: ನಾಳೆ ಪ್ರವೀಣ್ ನೆಟ್ಟಾರು ಕನಸಿನ ಮನೆಯ ಗೃಹಪ್ರವೇಶ  title=
‘ಪ್ರವೀಣ್ ನಿಲಯ’ ಗೃಹಪ್ರವೇಶಕ್ಕೆ ಸಿದ್ಧ

ಸುಳ್ಯ: ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ‘ಪ್ರವೀಣ್ ನಿಲಯ’ ಗೃಹಪ್ರವೇಶಕ್ಕೆ ಸಿದ್ಧವಾಗಿದೆ. ನಾಳೆ ಅಂದರೆ ಎಪ್ರಿಲ್ 27ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರಿನಲ್ಲಿ ಗೃಹಪ್ರವೇಶ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: Karnataka Election 2023: ಬಿಜೆಪಿ ನನ್ನನ್ನು ಸೋಲಿಸುವ ಅಭಿಯಾನ ನಡೆಸುತ್ತಿದೆ- ಜಗದೀಶ್ ಶೆಟ್ಟರ್

ಶ್ರೀಗಣಪತಿ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಗೃಹ ಪ್ರವೇಶ ನೆರವೇರಲಿದೆ. ಇದೇ ವೇಳೆ ಬೆಳಗ್ಗೆ 11 ಗಂಟೆಯಿಂದ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಅದೇ ದಿನ ರಾತ್ರಿ 7ರಿಂದ ಶ್ರೀ ಕಲ್ಲುರ್ಟಿ ದೈವದ ನೇಮೋತ್ಸವ ನಡೆಯಲಿದೆ. ಪ್ರವೀಣ್ ನೆಟ್ಟಾರು ಮನೆಯ ಸದಸ್ಯರ ನಕ್ಷೆಯಂತೆ ಮನೆ ನಿರ್ಮಾಣ ಮಾಡಲಾಗಿದೆ. ಪ್ರವೀಣ್ ನೆಟ್ಟಾರು ಕುಟಂಬ ವಾಸವಾಗಿದ್ದ ಜಾಗದಲ್ಲೇ ನೂತನ ಮನೆ ನಿರ್ಮಿಸಲಾಗಿದೆ.

ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ರದ್ದತಿಗೆ ತಡೆಯಾಜ್ಞೆ: ಬಿಜೆಪಿ ಸರ್ಕಾರಕ್ಕೆ ‘ಸುಪ್ರೀಂ’ ಕಪಾಳಮೋಕ್ಷ! –ಸಿದ್ದರಾಮಯ್ಯ

 2,700 ಚದರ ಅಡಿ ಇರುವ ಈ ಮನೆಗೆ ಅಂದಾಜು 60 ಲಕ್ಷ ರೂ. ಖರ್ಚು ಮಾಡಲಾಗಿದೆ. ಈ ಮನೆಯ ಸಂಪೂರ್ಣ ವೆಚ್ಚವನ್ನು ಬಿಜೆಪಿಯೇ ಭರಿಸಿದೆ ಎಂಬ ಮಾತುಗಳು ಕೇಳಿ ಬಂದಿವೆ. ಪ್ರವೀಣ್ ನೆಟ್ಟಾರು ಕನಸು ನನಸು ಮಾಡುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಪ್ರವೀಣ್ ನೆಟ್ಟಾರು ಅವರ ಕುಟುಂಬಸ್ಥರ ಜೊತೆಗೆ ಈ ಹಿಂದೆ ಮಾತುಕತೆ ನಡೆಸಿದ್ದರು. ಬಳಿಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಅದರಂತೆ ಇದೀಗ ಪ್ರವೀಣ್ ಅವರ ಕನಸಿನ ಮನೆ ಗೃಹಪ್ರವೇಶಕ್ಕೆ ಸಿದ್ಧವಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News