Shivamogga Karnataka Election Result 2023: ಮಲೆನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಸಮಬಲ; ಶಿಕಾರಿಪುರ ಕ್ಷೇತ್ರ ಉಳಿಸಿಕೊಂಡ ವಿಜಯೇಂದ್ರ

Shivamogga Karnataka Election Result 2023: ಶಿವಮೊಗ್ಗ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಬಿಜೆಪಿ, ಮೂರು ಕಾಂಗ್ರೆಸ್ ಹಾಗು ಒಂದು ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಸೊರಬ, ಶಿಕಾರಿಪುರ, ತೀರ್ಥಹಳ್ಳಿ ಮತ್ತು ಸಾಗರದಲ್ಲಿ ತೀವ್ರ ಪೈಪೋಟಿ ನಡೆದಿತ್ತು.

Written by - Bhavishya Shetty | Last Updated : May 13, 2023, 03:57 PM IST
    • ಶಿವಮೊಗ್ಗ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಬಿಜೆಪಿ, ಮೂರು ಕಾಂಗ್ರೆಸ್ ಹಾಗು ಒಂದು ಜೆಡಿಎಸ್ ಗೆಲುವು
    • ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಹೊರಬಿದ್ದಿದೆ
    • ಶಿಕಾರಿಪುರದಲ್ಲಿ ಬಿ.ವೈ ವಿಜಯೇಂದ್ರಗೆ ತೀವ್ರ ಪೈಪೋಟಿ ನೀಡಿದ ಪಕ್ಷೇತರ ಅಭ್ಯರ್ಥಿ
Shivamogga Karnataka Election Result 2023: ಮಲೆನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಸಮಬಲ; ಶಿಕಾರಿಪುರ ಕ್ಷೇತ್ರ ಉಳಿಸಿಕೊಂಡ ವಿಜಯೇಂದ್ರ title=
Shivamogga Election Result 2023

Shivamogga Karnataka Assembly Election Result 2023: ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಜಿಲ್ಲಾ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಹೊರಬಿದ್ದಿದೆ. ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಮೂರು ಬಿಜೆಪಿ, ಮೂರು ಕಾಂಗ್ರೆಸ್ ಹಾಗು ಒಂದು ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಶಿಕಾರಿಪುರದಲ್ಲಿ ಪಕ್ಷೇತರ ಅಭ್ಯರ್ಥಿ ಕೊನೆವರೆಗೂ ನೀಡಿದ ತೀವ್ರ ಪೈಪೋಟಿ ಬಿ.ವೈ ವಿಜಯೇಂದ್ರರ ಗೆಲುವಿಗೆ ಅಂತರ ಕಡಿಮೆ ಮಾಡಿದರೂ ಅಂತಿಮವಾಗಿ ವಿಜಯೇಂದ್ರ ಗೆಲುವು ,ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಾಗರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ, ಹರತಾಳು ಹಾಲಪ್ಪ ಎದುರು 15,909 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಹರತಾಳು ಹಾಲಪ್ಪ 68,445 ಮತಗಳನ್ನು ಪಡೆದರೆ ಕಾಂಗ್ರೆಸ್ ನ ಬೇಳೂರು ಗೋಪಾಲಕೃಷ್ಣ 84,254 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

  • ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬಿಜೆಪಿಯ ಚನ್ನಬಸಪ್ಪ, ಕಾಂಗ್ರೆಸ್ ಅಭ್ಯರ್ಥಿ ಹೆಚ್ ಸಿ ಯೋಗೇಶ್ ವಿರುದ್ಧ 26,120 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
  • ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ ಸಂಗಮೇಶ್, ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಎದುರು 6,333 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
  • ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗಾ ಜ್ಞಾನೇಂದ್ರ, ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾತರ್ ವಿರುದ್ಧ 12,088 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
  • ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯನಾಯಕ್, ಬಿಜೆಪಿ ಅಭ್ಯರ್ಥಿ ಅಶೋಕ್ ನಾಯಕ್ ವಿರುದ್ಧ 14,814 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
  • ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧುಬಂಗಾರಪ್ಪ, ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪರನ್ನು 44,258 ಮತಗಳ ಅಂತರದಿಂದ ಸೋಲಿಸಿ ಗೆಲುವು ಸಾಧಿಸಿದ್ದಾರೆ.
  • ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರ ಸನಿಹದ ಪಕ್ಷೇತರ ಅಭ್ಯರ್ಥಿ ನಾಗರಾಜ್ ಗೌಡ ಎದುರು 10,634 ಮತಗಳ ಅಂತರಿಂದ ಗೆಲುವು ಸಾಧಿಸಿದ್ದಾರೆ.

ಶಿವಮೊಗ್ಗ ಗ್ರಾಮೀಣ-111

ಶಾರದಾ ಪೂರ್ಯನಾಯಕ್(JDS) - 85768

ಕೆ ಬಿ ಅಶೋಕ್ ನಾಯಕ್ (BJP) – 70610

========

ಭದ್ರಾವತಿ-112

ಬಿಕೆ ಸಂಗಮೇಶ್ವರ್(INC) - 65329

ಶಾರದಾ ಅಪ್ಪಾಜಿ(JDS) - 62743

========

ಶಿವಮೊಗ್ಗ-113

ಚನ್ನಬಸಪ್ಪ(BJP) - 95399

ಎಚ್ ಸಿ ಯೋಗೇಶ್ (INC) - 68071

========

ತೀರ್ಥಹಳ್ಳಿ-144

ಆರಗ ಜ್ಞಾನೇಂದ್ರ (BJP) - 83879

ಕಿಮ್ಮನೆ ರತ್ನಾಕರ್ (INC) - 71791

========

ಶಿಕಾರಿಪುರ-115

ಬಿ ವೈ ವಿಜಯೇಂದ್ರ (BJP) - 81015

ಎಸ್ ಪಿ ನಾಗರಾಜ್ (Independent) - 70371

=======

ಸಾಗರ-116

ಗೋಪಾಲಕೃಷ್ಣ ಬೇಳೂರು (INC) - 88179

ಹರತಾಳು ಹಾಲಪ್ಪ (BJP) - 72263

========

ಸೊರಬ-117

ಮಧು ಬಂಗಾರಪ್ಪ (INC) - 98232

ಕುಮಾರ್ ಬಂಗಾರಪ್ಪ (BJP) - 54311

========

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News