Election 2023: ಪ್ರಚಾರಕ್ಕೆ ತೆರಳಿದ್ದ BJP ಅಭ್ಯರ್ಥಿ ಅವಿನಾಶ್ ಜಾಧವ್ ಕಾರಿನ ಮೇಲೆ ಕಲ್ಲು ತೂರಾಟ!

Karnataka Assembly Election 2023: ಶಾಸಕ‌ ಅವಿನಾಶ್ ಜಾಧವ್ ಅವರ ಕಾರಿನ ಮೇಲೆ  ಕಲ್ಲು ತೂರಾಟ ನಡೆಸಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಇದು ಕಾಂಗ್ರೆಸ್ ಕಾರ್ಯಕರ್ತರು ಮಾಡಿರುವ ಕೃತ್ಯವೆಂದು ಅವಿನಾಶ್ ಜಾದವ್ ಆರೋಪಿಸಿದ್ದಾರೆ. ​

Written by - Zee Kannada News Desk | Last Updated : Apr 16, 2023, 10:07 AM IST
  • ಚುನಾವಣಾ ಪ್ರಚಾರ ವೇಳೆ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಕಾರಿನ ಮೇಲೆ ಕಲ್ಲು ತೂರಾಟ
  • ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ ನಡೆದಿರುವ ಘಟನೆ
  • ಘಟನೆಯಲ್ಲಿ ಅವಿನಾಶ್ ಜಾಧವ್ ಕಾರು ಸೇರಿದಂತೆ 6 ಕಾರುಗಳು ಜಖಂಗೊಂಡಿವೆ
Election 2023: ಪ್ರಚಾರಕ್ಕೆ ತೆರಳಿದ್ದ BJP ಅಭ್ಯರ್ಥಿ ಅವಿನಾಶ್ ಜಾಧವ್ ಕಾರಿನ ಮೇಲೆ ಕಲ್ಲು ತೂರಾಟ! title=
ಬಿಜೆಪಿ ಅಭ್ಯರ್ಥಿ ಕಾರಿನ ಮೇಲೆ ಕಲ್ಲು ತೂರಾಟ!

ಕಲಬುರಗಿ: ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಅಭ್ಯರ್ಥಿ, ಚಿಂಚೋಳಿ ಶಾಸಕ ಅವಿನಾಶ್ ಜಾಧವ್ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಚಂದನಕೇರಾ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ್ದ ವೇಳೆ ಅವಿನಾಶ್ ಜಾಧವ್ ಕಾರಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಅವಿನಾಶ್ ಜಾಧವ್ ಕಾರು ಸೇರಿದಂತೆ 6 ಕಾರುಗಳು ಜಖಂಗೊಂಡಿವೆ.

ಇದನ್ನೂ ಓದಿ: ಕೊನೆಗೂ ಬಿಜೆಪಿಗೆ ಗುಡ್ ಬೈ ಹೇಳಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಕಲ್ಲು ತೂರಾಟದಿಂದ ಕಾರುಗಳ ಗ್ಲಾಸ್ ಪುಡಿ ಪುಡಿಯಾಗಿವೆ. ಘಟನೆಯಲ್ಲಿ ಶಾಸಕ ಅವಿನಾಶ್ ಜಾಧವ್ ಬೆಂಬಲಿಗರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅವಿನಾಶ್ ಜಾಧವ್‍ಗೆ ಯಾವುದೇ ರೀತಿಯ ಗಾಯಗಳಾಗಿಲ್ಲವೆಂದು ತಿಳಿದುಬಂದಿದೆ.

ಶಾಸಕ‌ ಅವಿನಾಶ್ ಜಾಧವ್ ಅವರ ಕಾರಿನ ಮೇಲೆ  ಕಲ್ಲು ತೂರಾಟ ನಡೆಸಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಇದು ಕಾಂಗ್ರೆಸ್ ಕಾರ್ಯಕರ್ತರು ಮಾಡಿರುವ ಕೃತ್ಯವೆಂದು ಅವಿನಾಶ್ ಜಾದವ್ ಆರೋಪಿಸಿದ್ದಾರೆ. ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನತ್ತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಚಿತ್ತ...!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News