ಬೆಂಗಳೂರು: ಇದು ಇಂದಿರಾ ಭವನದಲ್ಲಿ ಭಾರತ ಜೋಡೋ ಸಭಾಂಗಣ. ಈ ಚುನಾವಣೆ ಭಾರತ ಜೋಡೋ ಚುನಾವಣೆಯಾಗಿದ್ದು, ಫಲಿತಾಂಶ ಬಂದಿದೆ. ಇದು ವೇದಿಕೆ ಮೇಲಿರುವವರ ಗೆಲುವು ಮಾತ್ರವಲ್ಲ. ರಾಜ್ಯದ ಎಲ್ಲಾ ಜನರ ಗೆಲುವು. ರಾಜ್ಯದಲ್ಲಿ ನಾಲ್ಕು ವರ್ಷಗಳಿಂದ ಹಿಡಿದಿದ್ದ ಗ್ರಹಣ ಬಿಟ್ಟಿದೆ. ಜನರ ಕಣ್ಣಿರು ಒರೆಸಲಾಗಿದೆ. ಜನರ ಮುಖದಲ್ಲಿ ನಗು ಅರಳುತ್ತಿದೆ. ಈ ಗ್ರಹಣ ಬಿಡಿಸಿದ ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ನಮಗೆ ಮಾರ್ಗದರ್ಶನ ನೀಡಿದ ಖರ್ಗೆ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸುರ್ಜೆವಾಲ, ವೇಣುಗೋಪಾಲ್ ಹಾಗೂ ರಾಜ್ಯದ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇದು ಭ್ರಷ್ಟಾಚಾರ ವಿರುದ್ಧದ ಗೆಲುವು. 40% ಕಮಿಷನ್, ಬೆಲೆ ಏರಿಕೆ, ರೈತರ ಸಂಕಷ್ಟಗಳ ವಿರುದ್ಧ, ಗೃಹಿಣಿಯರ ಕಣ್ಣೀರಿನ ವಿರುದ್ಧ, ಯುವ ಸಮುದಾಯದ ನಿರುದ್ಯೋಗ ಸಮಸ್ಯೆ ವಿರುದ್ಧದ ಗೆಲುವು. ಕಾಂಗ್ರೆಸ್ ಗ್ಯಾರಂಟಿಗಳ ಪರ ಗೆಲುವು. ಇನ್ನು ಮುಂದೆ ಗೃಹಜ್ಯೋತಿ ಬೆಳಗಲಿದೆ. ಸರ್ಕಾರ ಬಂದ ಮೊದಲ ಸಚಿವ ಸಂಪುಟದಲ್ಲಿ ಈ ಯೋಜನೆ ಜಾರಿಯಾಗಲಿದೆ. ಯುವನಿಧಿಯು ಯುವ ಸಮುದಾಯಕ್ಕೆ ಆತ್ಮವಿಶ್ವಾಸ ತುಂಬಲಿದೆ. ಅನ್ನಭಾಗ್ಯ ಬಡವರ ಹೊಟ್ಟೆ ತುಂಬಿಸಲಿದೆ. ಮಹಿಳೆಯರು ಸುಖವಾಗಿ ಬಸ್ ಪ್ರಯಾಣ ಮಾಡಲಿದ್ದಾರೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ನೆಮ್ಮೆದಿಯ ಉಸಿರು ಬಿಡಲಿದ್ದಾರೆ. ಕೊಟ್ಟ ಮಾತಿನಂತೆ ಈ ಯೋಜನೆಗಳನ್ನು ಜಾರಿ ಮಾಡೇ ಮಾಡುತ್ತೇವೆ" ಎಂದು ಹೇಳಿದರು.
ಇದನ್ನೂ ಓದಿ: Mudigere Assembly Election Result 2023: ನಯನ ಮೋಟಮ್ಮ ʼಕೈʼ ಹಿಡಿದ ಮೂಡಿಗೆರೆ ಮತದಾರರು
ನನಗೆ ಪಕ್ಷದ ರಾಜ್ಯ ಅಧ್ಯಕ್ಷನಾಗಿ ಜವಾಬ್ದಾರಿ ನೀಡಿದ ನಂತರ ಎಲ್ಲ ನಾಯಕರು ನನಗೆ ಜತೆಜತೆಯಾಗಿ ಸಹಕಾರ ಕೊಟ್ಟು ಈ ಯಶಸ್ಸಿಗೆ ಕಾರಣರಾಗಿದ್ದಾರೆ. ಏನಾದರೂ ಮಾಡಿ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆದ್ದು ಅಧಿಕಾರಕ್ಕೆ ತರುತ್ತೇವೆ ಎಂದು ಸೋನಿಯಾ ಗಾಂಧಿ ಅವರಿಗೆ ಮಾತು ಕೊಟ್ಟಿದ್ದೆವು. ನಮ್ಮ ಮೇಲೆ ಜನ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಕೆಲಸ ಮಾಡೋಣ. ನಾಳೆ ಸಂಜೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ನಮ್ಮ ಪದ್ಧತಿಯಂತೆ ಚರ್ಚೆ ಮಾಡಿ ನಂತರ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬಿಡುತ್ತೇವೆ. ಮಾಧ್ಯಮ ಮಿತ್ರರು ಅನಗತ್ಯ ಗೊಂದಲಕ್ಕೆ ಅವಕಾಶ ಮಾಡಿಕೊಡಬೇಡಿ. ಇಲ್ಲಿ ಯಾವ ವ್ಯಕ್ತಿ ಪೂಜೆಗೂ ಅವಕಾಶವಿಲ್ಲ, ಕೇವಲ ಪಕ್ಷ ಪೂಜೆಗೆ ಮಾತ್ರ ಅವಕಾಶ.ನಮಗೆ ರಾಷ್ಟ್ರೀಯ ನಾಯಕರಿಂದ ತಾಲೂಕು ಮಟ್ಟದ ನಾಯಕರವರೆಗೆ ಎಲ್ಲರೂ ಸಹಕಾರ ನೀಡಿದ್ದು, ಅವರಿಗೆ ಧನ್ಯವಾದಗಳು ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ