ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ: ಸಿಎಂ ಬೊಮ್ಮಾಯಿ

Karnataka Assembly Election 2023: ಸಿದ್ಧರಾಮಯ್ಯರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅವರು ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡಿದ್ದಾರೆ. ಅವರ ಮೇಲಿನ ಪ್ರಕರಣಗಳ ಕುರಿತು ಲೋಕಾಯುಕ್ತ ತನಿಖೆಗೆ ಸಹ ನೀಡಲಾಗಿದೆ ಎಂದು ಹೇಳಿದರು.

Written by - Prashobh Devanahalli | Edited by - Puttaraj K Alur | Last Updated : Apr 25, 2023, 03:17 PM IST
  • ಪ್ರಧಾನಿ ಮೋದಿ & ಅಮಿತ್ ಶಾ ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ
  • ಅಮಿತ್ ಶಾ ಅವರು ಚುನಾವಣಾ ವಿಚಾರವಾಗಿ ಕೆಲ‌ವು ಸಲಹೆ ಸೂಚನೆಗಳನ್ನು ನೀಡಿದ್ದಾರೆ
  • ಸಿದ್ದರಾಮಯ್ಯನವರು ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡಿದ್ದಾರೆಂದ ಸಿಎಂ ಬೊಮ್ಮಾಯಿ
ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ: ಸಿಎಂ ಬೊಮ್ಮಾಯಿ title=
ಸಿದ್ದರಾಮಯ್ಯ ವಿರುದ್ಧ ಸಿಎಂ ಬೊಮ್ಮಾಯಿ ಗುಡುಗು

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಹಾಗೂ  ಅಮಿತ್ ಶಾ ಅವರು ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲವೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಯವಾಹಿನಿ’ ರೋಡ್ ಶೋ ಕಾರ್ಯಕ್ರಮಕ್ಕೆ ಜನಬೆಂಬಲ ವ್ಯಕ್ತವಾಗುತ್ತಿದೆ. ಜನರ ಉತ್ಸಾಹವೇ ರಾಜ್ಯದ ತುಂಬಾ ಬಿಜೆಪಿ ಅಲೆ ಇರುವುದಕ್ಕೆ ಸಾಕ್ಷಿಯಾಗಿದೆ ಎಂದರು.

ಅಮಿತ್ ಶಾ ಸಲಹೆ ಸೂಚನೆ

ಅಮಿತ್ ಶಾ ಅವರು ಚುನಾವಣಾ ವಿಚಾರವಾಗಿ ಕೆಲ‌ವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಪ್ರಧಾನಿಯಿಂದ ಹಿಡಿದ ಪ್ರಮುಖರ ಕಾರ್ಯಕ್ರಮಗಳ ಮರು ಅವಲೋಕನ ಮಾಡಲು ಹೇಳಿದ್ದು, ಕೆಲವು ಕಾರ್ಯಕ್ರಮಗಳನ್ನು ಇಂದು ರಾತ್ರಿ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: ಸೆಂಟ್ರಲ್ ಕ್ಷೇತ್ರದಿಂದ 35 ಸಾವಿರ ಅಂತರದಲ್ಲಿ ಗೆಲ್ಲಲು ಅಮಿತ್ ಶಾ ಸೂಚನೆ: ಅರವಿಂದ ಬೆಲ್ಲದ್

ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡಿರುವ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರಿಗೆ ಚಾಲೆಂಜ್ ಮಾಡಿದ್ದೇನೆ. ನನ್ನ ಮೇಲೆ ಮಾಡಿರುವ ಆರೋಪ ಸಾಬೀತು ಮಾಡಲಿ. ನನ್ನ ಮೇಲೆ ಸುಮ್ಮನೆ ಆರೋಪ ಮಾಡುತ್ತಿರುವುದು ಜನರಿಗೆ ಗೊತ್ತಿದೆ. ಸಿದ್ಧರಾಮಯ್ಯರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಸಿದ್ದರಾಮಯ್ಯನವರು ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡಿದ್ದಾರೆ. ಅವರ ಮೇಲಿನ ಪ್ರಕರಣಗಳ ಕುರಿತು ಲೋಕಾಯುಕ್ತ ತನಿಖೆಗೆ ಸಹ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಶೆಟ್ಟರ್ ಕ್ಷಮೆ ಕೇಳುವ ಪ್ರಮೇಯವೇ ಬಂದಿಲ್ಲ: ಕೇಂದ್ರ ಸಚಿವ ಜೋಶಿ

ಭ್ರಷ್ಟಾಚಾರದ ಅವಿಭಾಜ್ಯ ಅಂಗ ಕಾಂಗ್ರೆಸ್ ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್. ಭ್ರಷ್ಟಾಚಾರದ ಅವಿಭಾಜ್ಯ ಅಂಗ ಕಾಂಗ್ರೆಸ್, ಅವರು ಮಾತನಾಡುವುದು ಹಾಸ್ಯಾಸ್ಪದವಾಗಿ ಕಾಣಿಸುತ್ತದೆ. ಅವರ ಎಷ್ಟು ಜನ ನಾಯಕರು ಜೈಲಿಗೆ ಹೋಗಿದ್ದಾರೆ? ಜಾಮೀನಿನ ಮೇಲೆ ಹೊರ ಬಂದಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಟೀಕಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News