Karnataka Election 2023 : ರಾಜ್ಯದಲ್ಲೇ ಮೊದಲ ಬಾರಿಗೆ ʼಮನೆಯಿಂದಲೇ ಮತದಾನʼಕ್ಕೆ ಅವಕಾಶ..! ಅರ್ಜಿ ಹಾಕಿ

Voting from home : ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಇದೇ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಒದಗಿಸಿದೆ. ಈ ಸೌಲಭ್ಯವನ್ನು ಯಾರು ಪಡೆಯಬಹುದು ಎಂಬ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

Written by - Krishna N K | Last Updated : Apr 22, 2023, 12:23 PM IST
  • ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
  • ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.
  • ಇದೇ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀಡಲಾಗಿದೆ.
 Karnataka Election 2023 : ರಾಜ್ಯದಲ್ಲೇ ಮೊದಲ ಬಾರಿಗೆ ʼಮನೆಯಿಂದಲೇ ಮತದಾನʼಕ್ಕೆ ಅವಕಾಶ..! ಅರ್ಜಿ ಹಾಕಿ title=

Karnataka Election 2023 : ರಾಜ್ಯದಲ್ಲಿ ಚುನಾವಣಾ ಪ್ರಚಾರ ಜೋರಾಗಿದೆ. ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ನಡುವೆ ಜಟಾಪಟಿ ಶುರುವಾಗಿದೆ. ಅಧಿಕಾರಕ್ಕೆ ಬರಲು ಎಲ್ಲಾ ಪಕ್ಷಗಳು ಅಸ್ತ್ರಗಳನ್ನು ಪ್ರಯೋಗಿಸುತ್ತಿವೆ. ಭರವಸೆಗಳ ಸುರಿಮಳೆಗೈದು ಜನರ ಮನಸ್ಸು ಗೆಲ್ಲಲು ಹರಸಾಹಸ ಪಡುತ್ತಿದ್ದಾರೆ. ಇದರ ನಡುವೆ ಟಿಕೆಟ್ ಸಿಗದ ಅತೃಪ್ತರು ಪಕ್ಷ ಬದಲಿಸಿ ಬೇರೆ ಪಕ್ಷಗಳಲ್ಲಿ ಟಿಕೆಟ್ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯುವ ಸಂಕಲ್ಪ ತೊಟ್ಟಿದ್ದರೆ, ಕಾಂಗ್ರೆಸ್ ಮೊದಲಿಗಿಂತ ಹೆಚ್ಚು ಸ್ಥಾನ ಗೆದ್ದು, ಸಿಎಂ ಗದ್ದುಗೆ ಹಿಡಿಯಲು ಹವಣಿಸುತ್ತಿದೆ.

ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಇದೇ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಒದಗಿಸಿದೆ. ರಾಜ್ಯಾದ್ಯಂತ 80 ವರ್ಷ ಮೇಲ್ಪಟ್ಟ 60 ಸಾವಿರ ಹಿರಿಯ ನಾಗರಿಕರು ಹಾಗೂ 20 ಸಾವಿರದವರೆಗೆ ವಿಶೇಷ ಅಂಗವಿಕಲರು ಮನೆಯಿಂದಲೇ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ. ಬೆಂಗಳೂರು ನಗರದಲ್ಲಿಯೇ 8,500ಕ್ಕೂ ಹೆಚ್ಚು ಹಿರಿಯ ನಾಗರಿಕರು ಹಾಗೂ 100ಕ್ಕೂ ಹೆಚ್ಚು ಅಂಗವಿಕಲರು ಮನೆಯಿಂದಲೇ ಮತದಾನ ಮಾಡಲಿದ್ದಾರೆ. ಅಂತಿಮ ಮತದಾರರ ಪಟ್ಟಿಯನ್ನು ಇನ್ನೂ ಸಿದ್ಧಪಡಿಸಲಾಗುತ್ತಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ಇದನ್ನ ಓದಿ : Karnataka Election 2023 Videos: ಶಂಕರಪಾಟೀಲ್ ಮುನೇನಕೊಪ್ಪ ಭರ್ಜರಿ ಕಾಂಪೇನ್‌

ಅರ್ಜಿಗಳನ್ನು ಪರಿಶೀಲಿಸಿದ ನಂತರ, ಚುನಾವಣಾಧಿಕಾರಿಗಳು ಮನೆಯಿಂದಲೇ ಮತದಾನದ ಸೌಲಭ್ಯವನ್ನು ಒದಗಿಸಲು ನಿರ್ಧರಿಸುತ್ತಾರೆ. ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ಮುಂಚಿತವಾಗಿ ನೀಡಲಾಗುವುದು. ಈ ವರ್ಷದ ಮಾರ್ಚ್ ವೇಳೆಗೆ, ಕರ್ನಾಟಕದ ಮತದಾರರ ಪಟ್ಟಿಯಲ್ಲಿ 80 ರಿಂದ 99 ವರ್ಷ ವಯಸ್ಸಿನ 12.2 ಲಕ್ಷ ಹಿರಿಯ ನಾಗರಿಕರು ಮತ್ತು 5.6 ಲಕ್ಷ ವಿಕಲಚೇತನರು ಇದ್ದಾರೆ. 100 ವರ್ಷ ಮೇಲ್ಪಟ್ಟ 16,000 ಮತದಾರರಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮತದಾನ ಕೇಂದ್ರಕ್ಕೆ ಬರಲು ಸಾಧ್ಯವಾಗದ ವೃದ್ಧರು ಮತ್ತು ಅಂಗವಿಕಲರು ಮನೆಯಿಂದಲೇ ಮತದಾನದ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News