Karnataka Budget 2023: ಬೆಂಗಳೂರಿಗೆ ಬೊಮ್ಮಾಯಿ ಭರ್ಜರಿ ಗಿಫ್ಟ್

Karnataka Budget 2023-24: ರಾಜ್ಯ ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ.    

Written by - Nitin Tabib | Last Updated : Feb 17, 2023, 07:19 PM IST
  • ಈ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ.
  • ಈ ಬಾರಿಯ ತಮ್ಮ ಬಜೆಟ್ ನಲ್ಲಿ ಬೊಮ್ಮಾಯಿ ಅವರು ಬೆಂಗಳೂರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
  • ರಾಜ್ಯ ರಾಜಧಾನಿ ಬೆಂಗಳೂರಿಗೆ ಈ ಬಾರಿಯ ಬಜೆಟ್ ನಲ್ಲಿ ಸಿಕ್ಕಿದ್ದೇನು ನೋಡೋಣ ಬನ್ನಿ,
Karnataka Budget 2023: ಬೆಂಗಳೂರಿಗೆ ಬೊಮ್ಮಾಯಿ ಭರ್ಜರಿ ಗಿಫ್ಟ್  title=
ರಾಜ್ಯ ಆಯವ್ಯಯ ಪತ್ರ 2023

Karnataka Budget 2023-24: ರಾಜ್ಯ ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಬಾರಿಯ ತಮ್ಮ ಬಜೆಟ್ ನಲ್ಲಿ ಬೊಮ್ಮಾಯಿ ಅವರು ಬೆಂಗಳೂರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿಗೆ ಈ ಬಾರಿಯ ಬಜೆಟ್ ನಲ್ಲಿ ಸಿಕ್ಕಿದ್ದೇನು ನೋಡೋಣ ಬನ್ನಿ,

>> ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸರ್ಕಾರ ನಗರದ ಒಟ್ಟು 243 ವಾರ್ಡ್ ಗಳಲ್ಲಿ 27 ಸ್ಮಾರ್ಟ್ ವರ್ಚ್ಯುವಲ್ ಕ್ಲಿನಿಕ್ ಗೆ ಅನುಮೋದನೆ ನೀಡಲಾಗಿದ್ದು ಬೆಂಗಳೂರು ಹೆಲ್ತ್ ಸಿಸ್ಟಮ್ಸ್ ಅನ್ನು ಪುನರಚನೆ ಮಾಡಲು ನಿರ್ಧರಿಸಲಾಗಿದೆ.

>> ನಗರದ ಸಂಚಾರ ದಟ್ಟಣೆಯನ್ನು ಆದಷ್ಟು ಕರಾರುವಕ್ಕಾಗಿ ನಿರ್ವಹಿಸುವ ನಿಟ್ಟಿನಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಧಾರಿತ ತಡೆರಹಿತ ಸಿಗ್ನಲಿಂಗ್ ವ್ಯವಸ್ಥೆಯಿಂದ ಸಂಚಾರ ದಟ್ಟನೆ ನಿರ್ವಹಣೆಗೆ ಉದ್ದೇಶಿಸಲಾಗಿದೆ. ಇದಲ್ಲದೆ ಅತಿ ಹೆಚ್ಚು ಸಂಚಾರ ದಟ್ಟನೆ ಇರುವ 75 ಜಂಕ್ಷನ್ ಗಳ ಅಭಿವೃದ್ಧಿಗೆ 150 ಕೋಟಿ ಅನುದಾನ ಒದಗಿಸಲಾಗುವುದು.

>> ಬೆಂಗಳೂರು ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಅಮೃತ್ ನಗರೋತ್ಥಾನ ಯೋಜನೆಗೆ 6000 ಕೋಟಿ ರೂ ಅನುಷ್ಠಾನ. ಇದರಲ್ಲಿ 108 ಕಿ.ಮೀ ರಸ್ತೆಗಳಿಗೆ 273 ಕೋಟಿ ಹಾಗೂ 195 ಕಿ.ಮೀ ಉದ್ಧದ ಚರಂಡಿ ಅಭಿವ್ರುದ್ಧಿಗಾಯ 1812 ಕೋಟಿ ರೂಗಳನ್ನು ಒದಗಿಸಲಾಗಿದೆ.

>> ಜನನಿಬಿಡ ಮಾರುಕಟ್ಟೆಗಳಂತಹ ಪ್ರದೇಶದಲ್ಲಿ ಮಹಿಳೆಯರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು 50 ಕೋಟಿ ರೂ ವೆಚ್ಚದಲ್ಲಿ 250 'ಶಿ ಟಾಯ್ಲೆಟ್' ಗಳನ್ನು ನಿರ್ಮಿಸಲಾಗುವುದು. ಈ ಟಾಯ್ಲೆಟ್ ಗಳು ಮೊಬೈಲ್ ಚಾರ್ಜಿಂಗ್, ತುರ್ತು ಎಸ್ಓಎಸ್ ಗಳಂತಹ ಸೌಲಭ್ಯಗಳು ಒಳಗೊಂಡಿರಲಿವೆ.

>>ಕನ್ನಡ ತಾಯಿ ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅನ್ನು ಬೆಂಗಳೂರಿನಲ್ಲಿ ಅಭಿವೃದ್ಧಿ ಪಡಿಸಲಾಗುವುದು.

ಇದನ್ನೂ ಓದಿ-ರಾಜ್ಯ ಬಜೆಟ್ 2023-24: ಪ್ರತಿ ಗ್ರಾಮ ಪಂಚಾಯಿತಿ ಸಶಕ್ತಿಗೆ ₹780 ಕೋಟಿ ಅನುದಾನ

>> ಬೆಂಗಳೂರಿನಲ್ಲಿ 500 ಹಾಸಿಗೆಗಳ ವ್ಯವಸ್ಥೆ ಇರುವ ಶ್ರೀ ಅಟಲ್ ಬಿಹಾರಿ  ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ  ಸಂಶೋಧನಾ ಸಂಸ್ಥೆ ನಿರ್ಮಾಣಕ್ಕೆ ಅನುಮೋದನೆ

ಇದನ್ನೂ ಓದಿ-Karnataka Budget 2023 : ಶಾಲಾ - ಕಾಲೇಜು ವಿದ್ಯಾರ್ಥಿನಿಯರಿಗೆ ಫ್ರೀ ಬಸ್‌ ಪಾಸ್‌
 
>> ಜಯದೇವ್ ಸಂಸ್ಥೆಯ ಅಡಿಯಲ್ಲಿ 263 ಕೋಟಿ ರೂ ವೆಚ್ಚದಲ್ಲಿ ವಿವಿಧ ಸಾಮರ್ಥ್ಯಗಳ ಚಿಕಿತ್ಸಾ ಕೇಂದ್ರಗಳ ಸ್ಥಾಪನೆಗ ಅನುಮೊದನೆ

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News