Karnataka Budget 2023: ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯರಿಂದ ಬಂಪರ್ ಕೊಡುಗೆ

Karnataka Budget 2023: 2023-24ರ ಕರ್ನಾಟಕ ಬಜೆಟ್‍ನಲ್ಲಿ ಸಿಎಂ‌ ಸಿದ್ದರಾಮಯ್ಯ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ಸಮಗ್ರ ಅರಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಮೀಸಲಿಟ್ಟಿದ್ದಾರೆ. ​

Written by - Prashobh Devanahalli | Edited by - Puttaraj K Alur | Last Updated : Jul 7, 2023, 02:20 PM IST
  • ಬಜೆಟ್‍ನಲ್ಲಿ ಸಿಎಂ‌ ಸಿದ್ದರಾಮಯ್ಯ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ
  • ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಮೀಸಲಿಟ್ಟಿದ್ದಾರೆ
  • ಬೆಂಗಳೂರಿನ ಮೂಲ ಸೌಕರ್ಯಕ್ಕಾಗಿ 3 ವರ್ಷಕ್ಕೆ 6 ಸಾವಿರ ಕೋಟಿ ವೆಚ್ಚದ 'ಅಮೃತ್ ನಗರೋತ್ಥಾನ' ಯೋಜನೆ
Karnataka Budget 2023: ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯರಿಂದ ಬಂಪರ್ ಕೊಡುಗೆ   title=
ಬೆಂಗಳೂರಿಗೆ ಬಂಪರ್ ಕೊಡುಗೆ

ಬೆಂಗಳೂರು: 2023-24ರ ಕರ್ನಾಟಕ ಬಜೆಟ್‍ನಲ್ಲಿ ಸಿಎಂ‌ ಸಿದ್ದರಾಮಯ್ಯ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ಸಮಗ್ರ ಅರಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಮೀಸಲಿಟ್ಟಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬೆಂಗಳೂರು ನಗರದ ಮೂಲಭೂತ ಸೌಕರ್ಯಕ್ಕಾಗಿ 3 ವರ್ಷದಲ್ಲಿ 6 ಸಾವಿರ ಕೋಟಿ ರೂ. ವೆಚ್ಚದ 'ಅಮೃತ್ ನಗರೋತ್ಥಾನ' ಯೋಜನೆ ಅನುಷ್ಠಾನಕ್ಕೆ ನಿರ್ಧರಿಸಿದ್ದಾರೆ‌.

ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕೆ ಬಾಕಿಯಿರುವ 1,297 ಎಕರೆ ಭೂಸ್ವಾಧೀನ ಪೂರ್ಣಗೊಳಿಸಿ, ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕಿದೆ. 1500 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ನಗರದ ವಿವಿಧ ಸ್ಥಳಗಳಲ್ಲಿರುವ ಹಳೆಯ 20 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಪುನರುಜ್ಜೀವನ ಮತ್ತು ಉನ್ನತೀಕರಣಕ್ಕೆ ನಿರ್ಧಾರ ಮಾಡಲಾಗಿದೆ.‌

312 ಕೋಟಿ ರೂ. ವೆಚ್ಚದ ತಿಪ್ಪಗೊಂಡನಹಳ್ಳಿ ಜಲಾಶಯ ಪುನಶ್ಚೇತನ ಕಾಮಗಾರಿ 2022-23ನೇ ಸಾಲಿನಲ್ಲಿ ಮುಕ್ತಾಯಗೊಳಿಸಲು ಕ್ರಮ. J-100 ಸಿಟಿಜನ್ ವಾಟರ್ ವೇ ಯೋಜನೆಯಡಿ 195 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೆ.ಆರ್.ಮಾರುಕಟ್ಟೆ ಜಂಕ್ಷನ್‍ನಿಂದ ಬೆಳ್ಳಂದೂರು ಕೆರೆಯವರೆಗೆ. ಕೋರಮಂಗಲ ರಾಜಕಾಲುವೆಯ ಅಭಿವೃದ್ಧಿಗೆ ನಿರ್ಧಾರ. ಬೃಹತ್ ಮಳೆ ನೀರುಗಾಲುವೆ ಹಾಗೂ ರಾಜಕಾಲುವೆ ಅಭಿವೃದ್ಧಿಗೆ ಅಮೃತ್ ನಗರೋತ್ಥಾನ ಯೋಜನೆಗೆ 1500 ಕೋಟಿ ರೂ. ಮೀಸಲು.

ಇದನ್ನೂ ಓದಿ: Karnataka Budget: ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೃಷಿ-ತೋಟಗಾರಿಕೆಗೆ ನೀಡಿದ್ದೇನು?

ಸುಗಮ ಸಂಚಾರಕ್ಕಾಗಿ ಹಲವಾರು ಯೋಜನೆ ಘೋಷಣೆ

11,250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ನಮ್ಮ ಮೆಟ್ರೋ ಹಂತ-3 ಯೋಜನೆ ಜಾರಿಗೆ ಕೇಂದಕ್ಕೆ ಡಿಸಿಆರ್ ಸಲ್ಲಿಕೆ. 2022-23ನೇ ಸಾಲಿನಲ್ಲಿ 15,000 ಕೋಟಿ ರೂ ವೆಚ್ಚದಲ್ಲಿ 37 ಕಿಮೀ ಉದ್ದದ ಹೊಸ ಮೆಟ್ರೋ ಮಾರ್ಗಕ್ಕೆ ಡಿಪಿಆರ್‌ ತಯಾರಿಸಲು ಕ್ರಮ. ವೈಟ್‌ಫೀಲ್ಡ್, ಕೆ.ಆರ್.ಪುರಂ, ಬೈಯ್ಯಪ್ಪನಹಳ್ಳಿ, ಯಶವಂತಪುರ, ಜ್ಞಾನಭಾರತಿ ಮತ್ತು ಯಲಹಂಕ ರೈಲ್ವೆ ನಿಲ್ದಾಣಗಳಲ್ಲಿ 55 ಕೋಟಿ ರೂ. ವೆಚ್ಚದಲ್ಲಿ ಮೆಟ್ರೋ ನಿಲ್ದಾಣದ ಸಂಪರ್ಕ, ಕಾಮಗಾರಿ ಅನುಷ್ಠಾನ

ಬನಶಂಕರಿ ಜಂಕ್ಷನ್‌ನಲ್ಲಿ 45 ಕೋಟಿ ರೂ. ವೆಚ್ಚದಲ್ಲಿ ಸ್ಕೈ ವಾಕ್ ನಿರ್ಮಾಣ. ನೆನಗುದಿಗೆ ಬಿದ್ದಿರುವ 73 ಕಿಮೀ ಉದ್ದದ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ 21,091 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಪಾರಂಭಿಸಲು ಕ್ರಮ. ಗೊರಗುಂಟೆಪಾಳ್ಯ ಜಂಕ್ಷನ್‌ನಲ್ಲಿ ಸಿಗ್ನಲ್ ಮುಕ್ತ ವಾಹನ ಸಂಚಾರಕ್ಕೆ ಬಿಬಿಎಂಪಿ, ಬಿಡಿಎ ಮತ್ತು ಎನ್‍ಹೆಚ್‍ಎಐ ವತಿಯಿಂದ ಗ್ರೇಡ್ ಸಪರೇಟರ್ ಮತ್ತು ಮೇಲ್ಸುತುವೆ ಕಾಮಗಾರಿಗಳ ಅನುಷ್ಠಾನ. 15,267 ಕೋಟಿ ರೂ. ವೆಚ್ಚದ ಬೆಂಗಳೂರು ಉಪನಗರ ರೈಲ್ವೆ ಯೋಜನೆ ಜಾರಿಗೆ ಕ್ರಮ, ಚಿಕ್ಕಬಾಣಾವರ-ಬೈಯಪ್ಪನಹಳ್ಳಿ ಕಾರಿಡಾರ್ ಕಾಮಗಾರಿ ಶೀಘ್ರ ಪಾರಂಭ.

ಹಸಿರು ಬೆಂಗಳೂರಿಗಾಗಿ ಹಲವಾರು ಘೋಷಣೆ

NGEFನ 105 ಎಕರೆ ಪ್ರದೇಶದಲ್ಲಿ ಸಿಂಗಾಪುರ್ ಮಾದರಿಯಲ್ಲಿ ಗ್ರೀನ್ ಎಕ್ಸ್ ಪೋ ನಿರ್ಮಾಣ. ಯಲಹಂಕ ಬಳಿಯ ಹಾರಕಬಂಡೆ ಕಾವಲ್‌ನಲ್ಲಿ 350 ಎಕರೆ ವಿಸ್ತೀರ್ಣದ ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನ ಅಭಿವೃದ್ಧಿ.

ನಾಗರಿಕ ಸೇವೆಗಳು ಹೀಗಿವೆ

  • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿ ವಹಿಯಲ್ಲಿರುವ 6 ಲಕ್ಷಕ್ಕೂ ಹೆಚ್ಚು ಸ್ವತ್ತುಗಳನ್ನು ಎ ವಹಿಗೆ ದಾಖಲಿಸಲು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಅಧಿನಿಯಮಗಳಡಿ ಸೂಕ್ತ ಕಾನೂನು ಕ್ರಮ.
  • ಬೆಂಗಳೂರಿನ 4 ಭಾಗಗಳಲ್ಲಿ 500 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
  • ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಬೆಂಗಳೂರಿನ ಎಲ್ಲಾ ವಾರ್ಡುಗಳಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆ
  • ಬೆಂಗಳೂರಿನ ಆಯ್ದ 20 ಶಾಲೆಗಳನ್ನು 89 ಕೋಟಿ ರೂ.ಗಳಲ್ಲಿ ಉನ್ನತೀಕರಿಸಿ, “ಬೆಂಗಳೂರು ಪಬ್ಲಿಕ್‌ ಶಾಲೆ"ಗಳ  ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಲಾಗಿದೆ.ಇದನ್ನೂ ಓದಿ:

ಇದನ್ನೂ ಓದಿ: ಬಜೆಟ್ 2023-24: ಮದ್ಯ ಪ್ರಿಯರಿಗೆ ಬರೆ : ಶೇ 20 ಹೆಚ್ಚಳ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News