ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳ ₹1000 ಪ್ರೋತ್ಸಾಹ ಧನ: ಸಿಎಂ ಸಿದ್ದರಾಮಯ್ಯ

ಸಾಮಾಜಿಕ ಸಬಲೀಕರಣಕ್ಕಾಗಿ ಶೇ.40-74 ವಿಕಲಚೇತನರಿಗೆ 800 ರೂ. ಹಾಗೂ ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯತೆವುಳ್ಳವರಿಗೆ 1,400 ರೂ. ಮತ್ತು ತೀವ್ರತರ ಮನೋವೈಕಲ್ಯತೆ ಇರುವ ವ್ಯಕ್ತಿಗಳಿಗೆ  ಪ್ರತಿ ತಿಂಗಳು 2000 ರೂ. ಮಾಸಾಶನ ನೀಡಲಾಗುತ್ತಿದೆ.

Written by - Puttaraj K Alur | Last Updated : Dec 3, 2024, 08:25 PM IST
  • ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತ ಹೆಚ್ಚಿಸಲು ಕ್ರಮ
  • ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳು 1000 ರೂ. ಭತ್ಯೆ ನೀಡುವ ಯೋಜನೆ
  • ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆ ಎಂದ ಸಿಎಂ ಸಿದ್ದರಾಮಯ್ಯ
ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳ ₹1000 ಪ್ರೋತ್ಸಾಹ ಧನ: ಸಿಎಂ ಸಿದ್ದರಾಮಯ್ಯ title=
ವಿಕಲಚೇತನರ ಸಬಲೀಕರಣಕ್ಕೆ ಬದ್ಧ!

CM Siddaramaiah: ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚಿಸುವಂತೆ ಕೋರಿ ಸರ್ಕಾರದಿಂದ ಪತ್ರ ಬರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ʼವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆʼ ಎಂದು ಹೇಳಿದರು. 

ಸಾಮಾಜಿಕ ಸಬಲೀಕರಣಕ್ಕಾಗಿ ಶೇ.40-74 ವಿಕಲಚೇತನರಿಗೆ 800 ರೂ. ಹಾಗೂ ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯತೆವುಳ್ಳವರಿಗೆ 1,400 ರೂ. ಮತ್ತು ತೀವ್ರತರ ಮನೋವೈಕಲ್ಯತೆ ಇರುವ ವ್ಯಕ್ತಿಗಳಿಗೆ  ಪ್ರತಿ ತಿಂಗಳು 2000 ರೂ. ಮಾಸಾಶನ ನೀಡಲಾಗುತ್ತಿದೆ. ವಿಕಲಚೇತನರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿ ರೂ. ಮಂಜೂರು ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಇಡಿ ಕಚೇರಿಗೆ ಹಾಜರಾದ IAS ಅಧಿಕಾರಿ ದೀಪಾ ಚೋಳನ್‌

ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಸಂವಿಧಾನದಲ್ಲಿ ಎಲ್ಲರೂ ಬದುಕುವ, ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸಿದ್ದೇವೆʼ ಎಂದು ಹೇಳಿದರು. 

ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಪ್ರತಿ ಮಾಹೆ 1000 ರೂ.ಗಳ ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯ ಘೋಷಿಸಿದೆ, ಇದನ್ನು ಪ್ರಸಕ್ತ ಸಾಲಿನಿಂದಲೇ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 7 ಜಿಲ್ಲೆಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಪ್ರಾರಂಭಿಸಲು 2023-24ನೇ ಸಾಲಿನ ಆಯವ್ಯಯದ ಘೋಷಣೆಯಂತೆ ಶಾಲೆಗಳನ್ನು ತೆರೆಯಲಾಗಿದೆ. ಇನ್ನೂ 13 ಹೊಸ ಶಾಲೆಗಳನ್ನು ಪ್ರಸಕ್ತ ಸಾಲಿನಲ್ಲಿ ಅನುದಾನಕ್ಕೆ ಒಳಪಡಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ: ದಾವಣಗೆರೆಯಲ್ಲಿ ಸಮಾವೇಶ ನಡೆಸಲು ಬಿಎಸ್‌ವೈ ಬಣ ಸಿದ್ಧತೆ

ಮಕ್ಕಳ ಕನಸುಗಳಿಗೆ ಬಣ್ಣ ತುಂಬೋಣ

ದೈಹಿಕ ಅಥವಾ ಮಾನಸಿಕ ನ್ಯೂನ್ಯತೆಯಿಂದ ಬಳಲುವ ಮಕ್ಕಳನ್ನು ತಾತ್ಸಾರ ದೃಷ್ಟಿಯಿಂದ ನೋಡದೆ, ಆ ನಿಷ್ಕಲ್ಮಶ ಜೀವಗಳಿಗೆ ಬೊಗಸೆಯಷ್ಟು ಪ್ರೀತಿ ನೀಡಿ ನೋಡಿ, ಮರಳಿ ಬೆಟ್ಟದಷ್ಟು ಪ್ರೀತಿ ತೋರುತ್ತಾರೆ. ಪ್ರತಿ ಮಗುವೂ ಪ್ರತಿಭಾಶಾಲಿಯೇ, ಅವರ ಪ್ರತಿಭೆಯನ್ನು ಗುರುತಿಸಿ, ಬೆಂಬಲಿಸುವ ಕೆಲಸ ನಮ್ಮದಾಗಬೇಕು. ವಿಶೇಷ ಚೇತನರನ್ನು ಸಮಾಜದ ಆಸ್ತಿಯಾಗಿ ಪರಿವರ್ತಿಸುವ ಹೊಣೆ ಮಕ್ಕಳ ಪೋಷಕರ ಜೊತೆಗೆ ನಮ್ಮೆಲ್ಲರದ್ದು. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಶ್ರಮಿಸೋಣ, ಮಕ್ಕಳ ಕನಸುಗಳಿಗೆ ಬಣ್ಣ ತುಂಬೋಣವೆಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News