ಹಾಲಿನ ಪ್ರೋತ್ಸಾಹ ಧನ ಲೀಟರ್ ಗೆ 1.50 ರೂ.ಕಡಿತ

ಹಾಲಿನ ಪ್ರೋತ್ಸಾಹ ಧನ ಲೀಟರ್ ಗೆ 1.50 ರೂ.ದಷ್ಟು ಕಡಿತ ಮಾಡಲು ಈಗ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆದೇಶ ಹೊರಡಿಸಿದೆ.ಈ ಪರಿಷ್ಕೃತ  ಆದೇಶ ಜೂನ್ 1 ರಿಂದ ಜಾರಿಗೆ ಬರಲಿದೆ ಎನ್ನಲಾಗಿದೆ.

Written by - Manjunath Naragund | Last Updated : May 31, 2023, 02:18 PM IST
  • ಏಪ್ರಿಲ್ ತಿಂಗಳ ಆರಂಭದಲ್ಲಿ ಪ್ರತಿದಿನ 13.50 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು,
  • ಈಗ ಅದು 16 ಲಕ್ಷ ಲೀಟರ್ ಗೆ ತಲುಪುವ ಮೂಲಕ ದಿನದಲ್ಲಿ ಸುಮಾರು 2.50 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದೆ.
  • ಇದರಿಂದಾಗಿ ಈಗ ಲೀಟರ್ ಗೆ 1.50 ರೂಪಾಯಿ ಕಡಿತಗೊಳಿಸಲು ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆಡಳಿತ ಮಂಡಳಿ ತಿರ್ಮಾನಿಸಿದೆ.
ಹಾಲಿನ ಪ್ರೋತ್ಸಾಹ ಧನ ಲೀಟರ್ ಗೆ 1.50 ರೂ.ಕಡಿತ title=

ಬೆಂಗಳೂರು: ಹಾಲಿನ ಪ್ರೋತ್ಸಾಹ ಧನ ಲೀಟರ್ ಗೆ 1.50 ರೂ.ದಷ್ಟು ಕಡಿತ ಮಾಡಲು ಈಗ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆದೇಶ ಹೊರಡಿಸಿದೆ.ಈ ಪರಿಷ್ಕೃತ  ಆದೇಶ ಜೂನ್ 1 ರಿಂದ ಜಾರಿಗೆ ಬರಲಿದೆ ಎನ್ನಲಾಗಿದೆ.

ಇದನ್ನೂ ಓದಿ:  ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ನೀರಿಗೆ ಬರ, ಟ್ಯಾಂಕರ್ ಗೆ ಮೊರೆ!

ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಏ. 1ರಿಂದ ಮೇ. 31 ರವರೆಗೆ ಬೇಸಿಗೆಯ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ 2.85 ರೂಪಾಯಿ ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು.ಈಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇಲಾಗಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದಾಗಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರೋತ್ಸಾಹಧನವನ್ನು ಕಡಿತಗೊಳಿಸಲಾಗಿದೆ.

ಇದನ್ನೂ ಓದಿ: NIA Raid: ಭಯೋತ್ಪಾದಕ ಕೃತ್ಯಕ್ಕೆ ಹಣ ಬಳಕೆ ಆರೋಪ: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ NIA ದಾಳಿ

ಏಪ್ರಿಲ್ ತಿಂಗಳ ಆರಂಭದಲ್ಲಿ ಪ್ರತಿದಿನ 13.50 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು, ಈಗ ಅದು 16 ಲಕ್ಷ ಲೀಟರ್ ಗೆ ತಲುಪುವ ಮೂಲಕ ದಿನದಲ್ಲಿ ಸುಮಾರು 2.50 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದೆ.ಇದರಿಂದಾಗಿ ಈಗ ಲೀಟರ್ ಗೆ 1.50 ರೂಪಾಯಿ ಕಡಿತಗೊಳಿಸಲು ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆಡಳಿತ ಮಂಡಳಿ ತಿರ್ಮಾನಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News