ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; 12 ಸಾವು

ವೇಗವಾಗಿ ಬರುತ್ತಿದ್ದ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

Last Updated : Mar 6, 2020, 12:02 PM IST
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; 12 ಸಾವು title=

ತುಮಕೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೈಲಾಡಕರೆ ಗ್ರಾಮದಲ್ಲಿ ಶುಕ್ರವಾರ (ಮಾರ್ಚ್ 6, 2020) ರಸ್ತೆ ಅಪಘಾತದಲ್ಲಿ ಒಂದು ವರ್ಷದ ಬಾಲಕ ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ. ವೇಗದ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಟವೇರಾ ಹಾಗೂ ಬ್ರೀಜಾ ಕಾರುಗಳ ಮಧ್ಯೆ ಈ ಅಪಘಾತ ಸಂಭವಿಸಿದೆ

ವರದಿಗಳ ಪ್ರಕಾರ, ನಾಲ್ಕು ಪ್ರಯಾಣಿಕರು ಬ್ರೀಜಾ ಕಾರಿನಲ್ಲಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದು, ಹೊಸೂರು ಮೂಲಕ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟವೆರಾ ಕಾರಿಗೆ ಡಿಕ್ಕಿ ಹೊಡೆದಿದೆ. ಟವೆರಾದಲ್ಲಿದ್ದ ಪ್ರಯಾಣಿಕರು ತಮಿಳುನಾಡಿನ ನಿವಾಸಿಗಳು ಎಂದು ಹೇಳಲಾಗಿದೆ.

ಕಾರುಗಳ ಮಧ್ಯೆ ರಾಷ್ಟ್ರೀಯ ಹೆದ್ದಾರಿ 75 ರ ಸಮೀಪ ನೆನ್ನೆ ಮದ್ಯ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದ ಈ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 12 ಮಂದಿ ಮೃತಪಟ್ಟಿದ್ದರೆ, ಐದು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.  ಗಾಯಾಳುಗಳನ್ನ ಸಮೀಪದ ಕುಣಿಗಲ್ ಹಾಗೂ ಬೆಂಗಳೂರು ಅಸ್ಪತ್ರೆಗಳಿಗೆ ಸಾಗಿಸಲಾಗಿದೆ.

ನಾಲ್ವರು ಯುವಕರಿದ್ದ ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ಮುಂದಿನ ಕಾರಿಗೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Trending News