ನಾಳೆ ಪ್ರಧಾನಿ ಮೋದಿಯಿಂದ 150 ಐ.ಟಿ.ಐ ಕಾಲೇಜುಗಳ ಲೋಕಾರ್ಪಣೆ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವರ್ಚುವಲ್ ಮೂಲಕ ಐ.ಟಿ.ಐ ಗಳ ಲೋಕಾರ್ಪಣೆಗೊಳಿಸುವರು. ರಾಜ್ಯಪಾಲರಾದ ಥಾವರ್ ಚಂದ ಗೆಹ್ಲೋಟ್ ಅವರು ಗೌರವಾನ್ವಿತ ಉಪಸ್ಥಿತಿ ವಹಿಸುವರು. 

Written by - Zee Kannada News Desk | Last Updated : Jun 19, 2022, 06:12 PM IST
  • ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವರ್ಚುವಲ್ ಮೂಲಕ ಐ.ಟಿ.ಐ ಗಳ ಲೋಕಾರ್ಪಣೆಗೊಳಿಸುವರು.
  • ರಾಜ್ಯಪಾಲರಾದ ಥಾವರ್ ಚಂದ ಗೆಹ್ಲೋಟ್ ಅವರು ಗೌರವಾನ್ವಿತ ಉಪಸ್ಥಿತಿ ವಹಿಸುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ನಾಳೆ ಪ್ರಧಾನಿ ಮೋದಿಯಿಂದ 150 ಐ.ಟಿ.ಐ ಕಾಲೇಜುಗಳ ಲೋಕಾರ್ಪಣೆ  title=

ಕೊಪ್ಪಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಕರ್ನಾಟಕ ಸರ್ಕಾರದ ವಿನೂತನ ಉದ್ಯೋಗ ಯೋಜನೆಯಡಿ ಜಾಗತಿಕ ಕೈಗಾರಿಕೆ ಹಾಗೂ ಅಸೆಂಬ್ಲಿ ಲೈನುಗಳಲ್ಲಿ ಉದ್ಯೋಗಾವಕಾಶಗಳಿಗಾಗಿ ಯುವ ಜನತೆಗೆ ಅತ್ಯಾಧುನಿಕ ತಂತ್ರಜ್ಞಾನಗಳ ತರಬೇತಿಗಾಗಿ ತಾಂತ್ರಿಕ ಕೇಂದ್ರಗಳನ್ನಾಗಿ ಉನ್ನತೀಕರಿಸಲಾಗಿರುವ 150 ಐ.ಟಿ.ಐ ಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಜೂ.20 ರಂದು ಮಧ್ಯಾಹ್ನ 01.30 ಗಂಟೆಗೆ ಗಂಗಾವತಿಯ ಆನೆಗುಂದಿ ರಸ್ತೆಯಲ್ಲಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವರ್ಚುವಲ್ ಮೂಲಕ ಐ.ಟಿ.ಐ ಗಳ ಲೋಕಾರ್ಪಣೆಗೊಳಿಸುವರು. ರಾಜ್ಯಪಾಲರಾದ ಥಾವರ್ ಚಂದ ಗೆಹ್ಲೋಟ್ ಅವರು ಗೌರವಾನ್ವಿತ ಉಪಸ್ಥಿತಿ ವಹಿಸುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.

ಇದನ್ನೂ ಓದಿ: ಕ್ರಿಕೆಟ್ ಕಾಶಿ ಲಾರ್ಡ್ಸ್ ಗ್ರೌಂಡ್ ಇಟ್ಟಿಗೆ ಮೇಲೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೆಸರು..!

ವಿಶೇಷ ಆಹ್ವಾನಿತರಾಗಿ ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್, ಉನ್ನತ ಶಿಕ್ಷಣ, ಐಟಿ & ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ.ಅಶ್ವಥ್ ನಾರಾಯಣ್ ಸಿ.ಎನ್., ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ ಅವರು ಆಗಮಿಸುವರು.

ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಪರಣ್ಣ ಈಶ್ವರಪ್ಪ ಮುನವಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ಅಮರೇಗೌಡ ಎಲ್.ಪಾಟೀಲ್ ಬಯ್ಯಾಪೂರ, ಕೆ.ರಾಘವೇಂದ್ರ ಹಿಟ್ನಾಳ, ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ. ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ, ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಯೋಜನೆ (ಕಾಡಾ) ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಬಿ.ಹೆಚ್.ಎಮ್., ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಶರಣು ಭೀಮಣ್ಣ ತಳ್ಳಿಕೇರಿ, ಗಂಗಾವತಿ ನಗರಸಭೆ ಅಧ್ಯಕ್ಷರಾದ ಮಾಲಾಶ್ರೀ ಸಂದೀಪಕುಮಾರ ಭಾಗವಹಿಸುವರು.

ಇದನ್ನೂ ಓದಿ: ಆರ್ ಆರ್ ಆರ್ ಮತ್ತು ಕೆಜಿಎಫ್ 2 ನಡುವೆ ಯಾವುದು ಫೇವರಿಟ್? ಎಂದು ಕೇಳಿದ್ದಕ್ಕೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತೇ ?

ವಿಶೇಷ ಆಹ್ವಾನಿತರಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ರಶ್ಮಿ ಮಹೇಶ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವ ಕುಮಾರ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮಂಜುಶ್ರೀ ಎನ್, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಆಗಮಿಸುವರು.

ಕಲಬುರಗಿ ವಿಭಾಗೀಯ ಕಚೇರಿಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರನಾಥ ಎಸ್. ಬಾಳ್ಳಿ, ಗಂಗಾವತಿ ಐಟಿಯ ಕಾಲೇಜಿನ ಪ್ರಾಚಾರ್ಯರಾದ ಡಿ ಕೊಟ್ರೇಶ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಎಸ್. ಶಶಿಧರ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News