ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಭರ್ಜರಿ ವರ್ಗಾವಣೆ ಪರ್ವ ಆರಂಭವಾಗಿದ್ದು, ಇಬ್ಬರು ಡಿವೈಎಸ್‌ಪಿ ಸೇರಿದಂತೆ ಒಟ್ಟು 179 ಮಂದಿ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ದಿನಗಳಿಂದ ಬಾಕಿ ಉಳಿದಿದ್ದ ವರ್ಗಾವಣೆ ಪ್ರಕ್ರಿಯೆ ಇದೀಗ ಶುರುವಾಗಿದೆ.
ಇದನ್ನು ಓದಿ: ಪಿಎಸ್ಐ ನೇಮಕಾತಿ ಅಕ್ರಮ ಆಡಿಯೋ... ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ
ಸಚಿವ ಸಂಪುಟ ಪುನರ್‌ರಚನೆ ಮುನ್ನವೇ ಭಾರೀ ವರ್ಗಾವಣೆ ಪ್ರಕ್ರಿಯೆ ಶುರುವಾಗಿದ್ದು, ಈ ಪ್ರಕ್ರಿಯೆಯಲ್ಲಿ ಭಾರೀ ಹಣದ ವಹಿವಾಟು ನಡೆದಿರುವ ಸಂಶಯ ವ್ಯಕ್ತವಾಗಿದೆ. ಇತ್ತೀಚೆಗಯೆಷ್ಟೇ ಎರಡು ಹಂತದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ನಡೆದಿತ್ತು.
ಇನ್ನು ಮೊದಲ ಹಂತದಲ್ಲಿ 21 ಹಿರಿಯ ಐಎಎಸ್ ಅಧಿಕಾರಿಗಳು, 2ನೇ ಹಂತದಲ್ಲಿ 41 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಆದರೆ ಐಎಎಸ್ ವರ್ಗಾವಣೆಯಲ್ಲಿಯೂ ಕೋಟ್ಯಾಂತರ ರೂ. ವಹಿವಾಟು ನಡೆದಿರುವ ಆರೋಪ ಕೇಳಿಬಂದಿದೆ.
ಇದನ್ನು ಓದಿ: ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ಪಶ್ಚಿಮ ರಾಷ್ಟ್ರದಿಂದ ಬಂದಿರೋ ಇ-ಮೇಲ್..!
ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಿಎಸ್‌ಐ ಅಕ್ರಮ ಪ್ರಕರಣದ ಕುರಿತು ಮಾತನಾಡಿ "ಶಾಸಕ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ನಾನು ಕೇಳಿಲ್ಲ. ಯಾವ ಮೆಟೀರಿಯಲ್ ಇದ್ದರೂ ತನಿಖೆಯಾಗುತ್ತದೆ. ಇಬ್ಬರ ನಡುವೆ ಮಾತುಕತೆಯಾಗಿದೆ. ಅವರಿಬ್ಬರು ಯಾರು, ಅವರ ಅರ್ಹತೆ ಏನು ಎನ್ನುವುದು ತನಿಖೆಯಲ್ಲಿ ತಿಳಿಯುತ್ತದೆ. ಆಡಿಯೋವನ್ನು ಸಹ ತನಿಖೆಗೆ ಒಳಪಡಿಸಿ ಯಾರೇ ತಪ್ಪಿತಸ್ಥರಿದ್ದರೂ, ಯಾವುದೇ ಬ್ಯಾಚ್ ಆಗಿದ್ದರೂ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.