ಶಿವಮೊಗ್ಗದಲ್ಲಿ ಹರ್ಷ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಪ್ರಕರಣ ಸಂಬಂಧ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಅಂತಾ ಗೃಹ ಸಚಿವರು ಹೇಳಿದ್ದಾರೆ.

Written by - Zee Kannada News Desk | Last Updated : Feb 21, 2022, 07:13 PM IST
  • ಶಿವಮೊಗ್ಗದಲ್ಲಿ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಬಂಧನ
  • ಕೊಲೆ ಪ್ರಕಣದಲ್ಲಿ ಒಟ್ಟು ಐವರು ಭಾಗಿಯಾಗಿರುವ ಬಗ್ಗೆ ಮಾಹಿತಿ ಇದೆ ಎಂದ ಗೃಹ ಸಚಿವ
  • ಶಿವಮೊಗ್ಗದಲ್ಲಿ ನಡೆದಿರುವ ಘಟನೆ ಬಗ್ಗೆ ಸಿಎಂಗೆ ವಿವರಣೆ ಕೊಟ್ಟಿದ್ದೇನೆ ಎಂದ ಆರಗ ಜ್ನಾನೇಂದ್ರ
ಶಿವಮೊಗ್ಗದಲ್ಲಿ ಹರ್ಷ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ  title=
ಮೂವರು ಆರೋಪಿಗಳನ್ನು ಬಂಧಿಸಲಾಗಿದೆ

ಬೆಂಗಳೂರು: ಶಿವಮೊಗ್ಗದಲ್ಲಿ ಹಿಂದುಪರ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ(Shivamogga Youth Murder Case) ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ನಾನೇಂದ್ರ(Araga Jnanendra) ಹೇಳಿದ್ದಾರೆಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ. ಮಾಹಿತಿ ಪ್ರಕಾರ ಈ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳು ಭಾಗಿಯಾಗಿರುವ ಬಗ್ಗೆ ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.

ಭಜರಂಗ ದಳ(Bajrang Dal)ದ ಕಾರ್ಯಕರ್ತ ಹರ್ಷರನ್ನು ಬರ್ಬರವಾಗಿ ಹತ್ಯೆ(Youth Murder Case) ಮಾಡಲಾಗಿದೆ. ನಾವು ಹರ್ಷ ಅವರ ಪೋಷಕರು ಮತ್ತು ಸಹೋದರಿಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದೇವೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಅವರಿಗೆ ನಾವು ಭರವಸೆ ನೀಡಿದ್ದೇವೆ. ಪ್ರಕರಣ ಸಂಬಂಧ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ನಾವು ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ಹರ್ಷ ಹತ್ಯೆ ಪೂರ್ವನಿಯೋಜಿತ, ನಿರ್ದಾಕ್ಷಿಣ್ಯ ಕ್ರಮಕ್ಕೆ ಒತ್ತಾಯ: ಸಚಿವ ಕೆ.ಸುಧಾಕರ್

ಶಿವಮೊಗ್ಗದಲ್ಲಿ ನಡೆದಿರುವ ಘಟನೆ ಬಗ್ಗೆ ಸಿಎಂ(Basavaraj Bommai)ಗೆ ವಿವರಣೆ ಕೊಟ್ಟಿದ್ದೇನೆ. ಈ ಬಗ್ಗೆ ಚರ್ಚಿಸಲು ಮತ್ತೆ ಸಭೆ ಸೇರೋಣವೆಂದು ಸಿಎಂ ತಿಳಿಸಿದ್ದಾರೆ. ಹಿಜಾಬ್ ಪ್ರಕರಣಕ್ಕೂ ಇದಕ್ಕೂ ಲಿಂಕ್ ಇದ್ಯಾ ಅನ್ನೋದರ ಬಗ್ಗೆ ತನಿಖೆ ನಡೆಸುತ್ತೇವೆ. ಅರೆಸ್ಟ್ ಆಗಿರುವ ಮೂವರು ಶಿವಮೊಗ್ಗದವರು ಎಂದು ತಿಳಿದುಬಂದಿದೆ. ಇನ್ನಿಬ್ಬರು ಆರೋಪಿಗಳ ಬಗ್ಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಶಾಲಾ-ಕಾಲೇಜು ಆರಂಭ ವಿಚಾರ ಸಂಬಂಧಿಸಿದಂತೆ ಪರಿಸ್ಥಿತಿ ನೋಡಿಕೊಂಡು ಡಿಸಿ ನಿರ್ಧಾರ ತಗೆದುಕೊಳ್ಳಲಿದ್ದಾರೆ ಅಂತಾ ಗೃಹ ಸಚಿವರು ತಿಳಿಸಿದ್ದಾರೆ.

ಶವಯಾತ್ರೆ ವೇಳೆ ಕಲ್ಲು ತೂರಾಟ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ಪೊಲೀಸರು ಸಂಯಮದಿಂದ ವರ್ತಿಸಿದ್ದಾರೆ ಅಂತಾ ಹೇಳಿದ್ದಾರೆ. ಪೊಲೀಸರು ಈ ವೇಳೆ ತಾಳ್ಮೆ ವಹಿಸಿದ್ದು, ಸಂಯಮ ಮೀರಿ ವರ್ತಿಸಿ ಫೈರಿಂಗ್ ಮತ್ತು ಲಾಠಿ ಚಾರ್ಜ್ ಮಾಡಿದ್ದರೆ ಇನ್ನೂ ನಾಲ್ಕು ಹೆಣಗಳು ಬೀಳುತ್ತಿದ್ದವು ಅಂತಾ ಹೇಳುವ ಮೂಲಕ  ಸಚಿವರು ಗಲಾಟೆ ಮತ್ತು ಕಲ್ಲು ತೂರಾಟದ ಘಟನೆಯನ್ನು ಸಮರ್ಥಿಸಿಕೊಂಡರು.

ಇದನ್ನೂ ಓದಿ: HD Kumaraswamy: ‘ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣಕ್ಕೆ ಕ್ಷಮೆಯೇ ಇಲ್ಲ’

ಸದ್ಯ ಶಿವಮೊಗ್ಗ(Shivamogga)ದ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದೆ. ಬೆಂಗಳೂರಿನಿಂದ ಮತ್ತೆ 200 ಪೊಲೀಸರನ್ನು ಹೆಚ್ಚುವರಿ ಭದ್ರತೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ. ಒಟ್ಟು 1400ಕ್ಕೂ ಹೆಚ್ಚು ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿನ ಪರಿಸ್ಥಿತಿ ಬಗ್ಗೆ ಕಟ್ಟುನಿಟ್ಟಾಗಿ ನಿಗಾ ವಹಿಸುವಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ. ಕಾನೂನು ಸುವ್ಯವಸ್ಥೆ(Law & Order) ಹದಗೆಡದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮುಂದಿನ ಎರಡ್ಮೂರು ದಿನ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗುವುದು ಅಂತಾ ಸಚಿವರು ತಿಳಿಸಿದ್ದಾರೆ.   

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News