ಬೆಳಗಾವಿ: ಕೆಎಸ್ಆರ್ಟಿಸಿ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, ನಾಲ್ವರು ಗಂಭಿರವಾಗಿ ಗಾಯಗೊಂದಿರುವ ಘಟನೆ ಬೆಳಗಾವಿ ಜಿಲ್ಲೆಯ ಬಡೇಕೊಲ್ಲ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಬೆಳಗಾವಿಯಿಂದ ಉಡುಪಿಗೆ ತೆರಳುತ್ತಿದ್ದ ಉಡುಪಿ ಡಿಪೋಗೆ ಸೇರಿದ ಬಸ್ KA.19.F.3077 ಚಾಲಕನ ನಿಯಂತ್ರಣ ತಪ್ಪಿ ನಡುರಸ್ತೆಯಲ್ಲಿ ಪಲ್ಟಿಯಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.