ರೈತ ಉತ್ಪಾದಕರ ಸಂಸ್ಥೆಗಳ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನ: ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ರೈತ ಉತ್ಪಾದಕರ ಸಂಸ್ಥೆಗಳ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

Written by - Manjunath N | Last Updated : Jan 20, 2024, 11:37 PM IST
  • ಉಪ ಕೃಷಿ ನಿರ್ದೇಶಕರ, ಸಹಾಯಕ ಕೃಷಿ ನಿರ್ದೇಶಕರ, ರೈತ ಸಂಪರ್ಕ ಕೇಂದ್ರದ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
  • ಸೂಕ್ತ ಅರ್ಜಿಗಳಿಗೆ ನಿಯಮಾನುಸಾರ ಬಡ್ಡಿ ಸಹಾಯಧನವನ್ನು ಸಂಬಂಧಿಸಿದ ರೈತ ಉತ್ಪಾದಕರ ಸಂಸ್ಥೆಗಳ ಸಾಲದ ಖಾತೆಗೆ ಪಾವತಿಸಲಾಗುವುದು
ರೈತ ಉತ್ಪಾದಕರ ಸಂಸ್ಥೆಗಳ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನ: ಅರ್ಜಿ ಆಹ್ವಾನ title=

ಬಳ್ಳಾರಿ: ಕೃಷಿ ಇಲಾಖೆ ವತಿಯಿಂದ ರೈತ ಉತ್ಪಾದಕರ ಸಂಸ್ಥೆಗಳ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

2023-24ನೇ ಸಾಲಿನ ಆಯವ್ಯಯದಲ್ಲಿ ರೈತ ಉತ್ಪಾದಕರ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲ್ಲೂಕಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ತಲಾ ರೂ.20 ಲಕ್ಷ ವರೆಗಿನ ಸಾಲಕ್ಕೆ ಶೇ.4 ರ ಬಡ್ಡಿ ಸಹಾಯಧನ ನೀಡಲಾಗುವುದು ಎಂದು ಫೋಷಿಸಲಾಗಿದೆ ಹಾಗೂ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ.

ಇದನ್ನೂ ಓದಿ: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌‌ಗೆ ಜಾಮೀನು ಪ್ರಕರಣ

ಕೃಷಿ ಇಲಾಖೆಯು (ಜಲಾನಯನ ಅಭಿವೃದ್ಧಿ ಇಲಾಖೆ) ಜಿಲ್ಲೆಯ ಹಿಂದುಳಿದ ತಾಲ್ಲೂಕುಗಳಲ್ಲಿ ಕಂಪನಿ ಕಾಯ್ದೆ 2013 ಅಡಿಯಲ್ಲಿ ನೋಂದಾಯಿಸಿ, ಕನಿಷ್ಠ 600 ರೈತ, ಷೇರುದಾರರನ್ನು ಹೊಂದಿ, 2022-23ನೇ ಸಾಲಿನಲ್ಲಿ ವಾರ್ಷಿಕ ಕನಿಷ್ಠ ರೂ.20 ಲಕ್ಷಗಳ ವರೆಗೆ ವ್ಯಾಪಾರ ವಹಿವಾಟು ಮಾಡಿ, ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳ ಮೂಲಕ 2023ರ ಏ.01 ರಿಂದ ಗರಿಷ್ಠ ರೂ.20 ಲಕ್ಷಗಳವರೆಗೆ ರೈತ ಉತ್ಪಾದಕರ ಸಂಸ್ಥೆಗಳು ಪಡೆದ ಸಾಲಕ್ಕೆ ಶೇ.4 ರಷ್ಟು ಬಡ್ಡಿ ಸಹಾಯಧನ ನೀಡಲು ರೈತ ಉತ್ಪಾದಕರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನವಾಗಿದೆ. ಸ್ವೀಕೃತವಾದ ಸೂಕ್ತ ಅರ್ಜಿಗಳಿಗೆ ನಿಯಮಾನುಸಾರ ಬಡ್ಡಿ ಸಹಾಯಧನವನ್ನು ಸಂಬಂಧಿಸಿದ ರೈತ ಉತ್ಪಾದಕರ ಸಂಸ್ಥೆಗಳ ಸಾಲದ ಖಾತೆಗೆ ಪಾವತಿಸಲಾಗುವುದು.

ಇದನ್ನೂ ಓದಿ: ಖರ್ಗೆ ಫ್ಯಾಮಿಲಿ ವಿರುದ್ಧ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ

ಆಸಕ್ತಿಯುಳ್ಳ ಅರ್ಹ ರೈತ ಉತ್ಪಾದಕರ ಸಂಸ್ಥೆಗಳು ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರ, ಉಪ ಕೃಷಿ ನಿರ್ದೇಶಕರ, ಸಹಾಯಕ ಕೃಷಿ ನಿರ್ದೇಶಕರ, ರೈತ ಸಂಪರ್ಕ ಕೇಂದ್ರದ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News