ಭೀಕರ ರಸ್ತೆ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

ಧರ್ಮಸ್ಥಳದಿಂದ ಹಾಸನದ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ನಿದ್ದೆ ಮಂಪರಿನಲ್ಲಿದ್ದ ಕಾರು ಚಾಲಕ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

Last Updated : Mar 10, 2019, 01:56 PM IST
ಭೀಕರ ರಸ್ತೆ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು title=

ಸಕಲೇಶಪುರ: ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸು ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಮಾರನಹಳ್ಳಿ ಬಳಿ ಭಾನುವಾರ ನಡೆದಿದೆ.

ಧರ್ಮಸ್ಥಳದಿಂದ ಹಾಸನದ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ನಿದ್ದೆ ಮಂಪರಿನಲ್ಲಿದ್ದ ಕಾರು ಚಾಲಕ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಯಶವಂತಪುರ ಮೂಲದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಮೃತರನ್ನು ಜಗದೀಶ್(30), ಗೌರಮ್ಮ(45), ಚಿನ್ನಯ್ಯ (50) ಹಾಗೂ ಭುವನೇಶ್(6) ಎಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. 
 

Trending News