ಕಟ್ಟಡ ದುರಂತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ಪರಿಹಾರ: ಕೆ.ಜೆ. ಜಾರ್ಜ್

ಬೆಂಗಳೂರಿನ ಈಜೀಪುರದಲ್ಲಿ ಸಂಭವಿಸಿದ ಅವಘಡದಲ್ಲಿ ಆರು ಮಂದಿ ಮೃತ.

Last Updated : Oct 16, 2017, 02:30 PM IST
ಕಟ್ಟಡ ದುರಂತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ಪರಿಹಾರ: ಕೆ.ಜೆ. ಜಾರ್ಜ್ title=
Pic: ANI

ಬೆಂಗಳೂರು: ಬೆಂಗಳೂರಿನ ಈಜೀಪುರದಲ್ಲಿ ಸಿಲಿಂಡರ್ ನಿಂದಾಗಿ ಕಟ್ಟಡ ಕುಸಿದು ಆರು ಜನರನ್ನು ಬಲಿತೆಗೆದುಕೊಂಡಿದೆ. ಈ ಘಟನೆಯಲ್ಲಿ ಮೃತಪಟ್ಟಿರುವವರಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಲಾ ಐದು ಲಕ್ಷ ಪರಿಹಾರ ಘೋಷಿಸಿದ್ದಾರೆ.

ಬೆಳಿಗ್ಗೆ ಏಳು ಗಂಟೆ ಸುಮಾರಿಗೆ ಸ್ಪೋಟ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 20 ವರ್ಷದ ಕಟ್ಟಡವು ಬೆಂಗಳೂರಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿಥಿಲಗೊಂಡಿತ್ತು. ಇದರಿಂದಾಗಿ ಈ ದುರ್ಘಟನೆ ಸಂಭವಿಸಿರಬಹುದು ಎಂದು ತಿಳಿದುಬಂದಿದೆ.
  
ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಿಬ್ಬಂದಿ ಅವಶೇಷಗಳಡಿ ಸಿಲುಕಿರುವ ಜನರ ರಕ್ಷಣಾ ಕಾರ್ಯದಲ್ಲಿ ನಡೆಸಿದರು. ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಾಯದಲ್ಲಿ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ. ಮೃತರಾದ ಇಬ್ಬರನ್ನು ಕಲಾವತಿ (68) ಮತ್ತು ರವಿಚಂದ್ರನ್ (30) ಎಂದು ಗುರುತಿಸಲಾಗಿದೆ.

ಗೃಹ ಸಚಿವ ರಾಮಲಿಂಗ ರೆಡ್ಡಿ ಮಾತನಾಡಿ, ಕಟ್ಟಡ ಕುಸಿತದಿಂದಾಗಿ ಆರು ಜನ ಮೃತಪಟ್ಟಿದ್ದಾರೆ. ಈ ಕಟ್ಟಡವು ಗಣೇಶ್ ಹೆಸರಿನ ವ್ಯಕ್ತಿಗೆ ಸೇರಿದ್ದಾಗಿದೆ ಎಂದು ತಿಳಿಸಿದ್ದಾರೆ. ಗಣೇಶ್ ಈ ಕಟ್ಟಡವನ್ನು ನಾಲ್ಕು ಕುಟುಂಬಗಳಿಗೆ ಬಾಡಿಗೆ ನೀಡಿದ್ದಾರೆ ಎಂದು ಅವರು ಹೇಳಿದರು. "ಎರಡು ಕುಟುಂಬಗಳು ನೆಲ ಮಹಡಿಯಲ್ಲಿ ವಾಸಿಸುತ್ತಿದ್ದವು, ಒಂದು ಕುಟುಂಬವು ಮೊದಲ ಮಹಡಿಯಲ್ಲಿ ವಾಸಿಸುತ್ತಿದ್ದರು. ಕಲಾವತಿ ಮತ್ತು ರವಿಚಂದ್ರನ್ ಮೊದಲ ಮಹಡಿಯಲ್ಲಿ ವಾಸಿಸುತ್ತಿದ್ದರು. ಇಬ್ಬರೂ ಸ್ಥಳದಲ್ಲೇ ನಿಧನರಾದರು ಮತ್ತು ಅಪಘಾತದಲ್ಲಿ ಇಬ್ಬರು ಮಕ್ಕಳು ಗಾಯಗೊಂಡರು. ಆದಾಗ್ಯೂ ಅವರು ಸುರಕ್ಷಿತರಾಗಿದ್ದಾರೆ. ಕೆಳ ಮಹಡಿಯಲ್ಲಿ ವಾಸಿಸುವ ಕುಟುಂಬದ ಸದಸ್ಯರು ಭಗ್ನಾವಶೇಷಗಳಲ್ಲಿ ಸಿಕ್ಕಿಬಿದ್ದ ಭೀತಿಗೆ ಒಳಗಾಗಿದ್ದಾರೆ ಎಂದು ತಿಳಿಸಿದರು.

 

ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಎಫ್ ಸಿಬ್ಬಂದಿಗಳ ಕನಿಷ್ಠ 40 ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿಯೇ ಇದ್ದರು. ಕಟ್ಟಡದಲ್ಲಿ ಸಿಕ್ಕಿಬಿದ್ದ ಜನರನ್ನು ರಕ್ಷಿಸುವ ಸಂದರ್ಭದಲ್ಲಿ ಕಟ್ಟಡದ ಮೇಲ್ಚಾವಣಿ ಕುಸಿದು ಅಗ್ನಿಶಾಮಕ ದಳದ ಮೂವರು ಸಿಬ್ಬಂದಿಗಳಿಗೂ  ಸಣ್ಣ ಪುಟ್ಟ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರು ಸತ್ತವರ ಕುಟುಂಬಗಳಿಗೆ ಐದು ಲಕ್ಷ ನೀಡಲಾಗುವುದು ಮತ್ತು ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದರು. ಅದೇ ಸಮಯದಲ್ಲಿ, ಅವರು ಈ ಘಟನೆಯಲ್ಲಿ ಅವರ ಹೆತ್ತವರು ಸಾವನ್ನಪ್ಪಿದ ಹುಡುಗಿಯ ಜವಾಬ್ದಾರಿಯನ್ನು ಸರ್ಕಾರವೇ  ತೆಗೆದುಕೊಳ್ಳಲಿದೆ ಮತ್ತು ಆಕೆಯ ಪೌಷ್ಟಿಕತೆ ಸೇರಿದಂತೆ ಎಲ್ಲಾ ವೆಚ್ಚಗಳನ್ನು ಭರಿಸಲು  ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.

 

 

 

Trending News