ಹುಬ್ಬಳ್ಳಿಯಲ್ಲಿ 10 ಲಕ್ಷ ರೂ. ಮೌಲ್ಯದ 52 ಕೆ.ಜಿ. ಗಾಂಜಾ ವಶ, ಓರ್ವನ ಬಂಧನ

ಬೀದರ್‌ ಜಿಲ್ಲೆಯ ಬಸವಕಲ್ಯಾಣದ ತ್ರಿಪುರನಾಥ ಗ್ರಾಮದ ಕಾರು ಚಾಲಕ ಸಿದ್ಧರಾಮ ಗುಂಡೆ (29) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

Last Updated : Jul 11, 2019, 11:29 AM IST
ಹುಬ್ಬಳ್ಳಿಯಲ್ಲಿ 10 ಲಕ್ಷ ರೂ. ಮೌಲ್ಯದ 52 ಕೆ.ಜಿ. ಗಾಂಜಾ ವಶ, ಓರ್ವನ ಬಂಧನ title=

ಹುಬ್ಬಳ್ಳಿ: ಬೀದರ್‌ನಿಂದ ಕಾರವಾರ ಮತ್ತು ಗೋವಾಕ್ಕೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಲಕ್ಷ ರೂ. ಮೌಲ್ಯದ 52.5 ಕೆ.ಜಿ. ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತ ಎಂ.ಎನ್‌.ನಾಗರಾಜ್ ಅವರು, ಬೀದರ್‌ ಜಿಲ್ಲೆಯ ಬಸವಕಲ್ಯಾಣದ ತ್ರಿಪುರನಾಥ ಗ್ರಾಮದ ಕಾರು ಚಾಲಕ ಸಿದ್ಧರಾಮ ಗುಂಡೆ (29) ಎಂಬಾತನನ್ನು ಬಂಧಿಸಲಾಗಿದ್ದು, ಗಾಂಜಾ ಸಮೇತ ಆತನ ಕಾರು ಮತ್ತು ಮೊಬೈಲ್‌ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಹುಬ್ಬಳ್ಳಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ" ಎಂದು ತಿಳಿಸಿದ್ದಾರೆ.

ಜೂನ್ 9 ರಂದು ಒಡಿಶಾದಲ್ಲಿ ಪ್ರಮುಖ ಮಾದಕ ವಸ್ತು ಕಳ್ಳಸಾಗಣೆ ನಡೆಸುತ್ತಿದ್ದ 34 ಜನರನ್ನು ಬಂಧಿಸಿದ್ದ ಪೊಲೀಸರು ಸುಮಾರು 2 ಕೋಟಿ ರೂ. ಮೌಲ್ಯದ 3,305 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದರು. ಈ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಗಾಂಜಾ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ.

Trending News