ಬೆಂಗಳೂರು : ವಿಧಾನಸೌಧದಲ್ಲಿ ಸಚಿವ ಬರ ಘೋಷಣೆ ಕುರಿತು ಸಂಪುಟ ಉಪಸಮಿತಿ ಸಭೆಯಲ್ಲಿ 62 ತಾಲುಕುಗಳನ್ನ ಬರ ಘೋಷಣೆ ಮಾಡಲು ಅರ್ಹ ಎಂದು ಶಿಫಾರಸ್ಸು ಮಾಡಲಾಗಿದೆ.
ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ರಾಜ್ಯದಲ್ಲಿ ಆರಂಭದಲ್ಲಿಯೇ 2023ರ ಮಂಗಾರು ದುರ್ಬಲಗೊಂಡು, ಜೂನ್ ತಿಂಗಳಿನಲ್ಲಿ ಶೇ. 56ರಷ್ಟು ಮಳೆ ಕೊರತೆಯಾಗಿತ್ತು, ನಂತರ ಜುಲೈ ತಿಂಗಳಿನಲ್ಲಿ ಉತ್ತಮವಾಗಿ ಮಳೆಯಾದರೂ, ಆಗಸ್ಟ್ ತಿಂಗಳಿನಲ್ಲಿ ಶೇಕಡಾ 73 ರಷ್ಟು ಮಳೆ ಕೊರತೆಯಾಗಿದೆ ಎಂದು ತಿಳಿಸಿದರು.
ಜೂನ್ 1 ರಿಂದ ಸೆಪ್ಟೆಂಬರ್ 4 ರವರೆಗೆ ವಾಡಿಕೆಯಾಗಿ 711ಮಿ.ಮೀ. ಮುಂಗಾರು ಮಳೆಯಾಗಬೇಕಿದ್ದು, ವಾಸ್ತವಿಕ 526 ಮಿ.ಮೀ ಮಳೆಯಾಗಿದ್ದು, ಶೇಕಡಾ 26ರಷ್ಟು ಮಳೆ ಕೊರತೆಯಿಂದ ಬರ ಪರಿಸ್ಥಿತಿ ತಲೆದೋರಿದೆ. ಬರ ಪರಿಸ್ಥಿತಿ ಬಗ್ಗೆ ನಿಗಾ ಮತ್ತು ನಿರ್ವಹಣೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಈವರೆಗೆ 3 ಬಾರಿ ಸಭೆ ನಡೆಸಿ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಪರಾಮರ್ಶಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.
ಇದನ್ನೂ ಓದಿ- Tumakuru: ವೈದ್ಯರ ನಿರ್ಲಕ್ಷ್ಯಕ್ಕೆ ಗೃಹಿಣಿ ಬಲಿ, ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ!
ಈ ಸಂದರ್ಭದಲ್ಲಿ ಸಮೀಕ್ಷೆ ಕುರಿತಂತೆ ಮಾಹಿತಿ ಹಂಚಿಕೊಂಡ ಸಚಿವ ಕೃಷ್ಣ ಬೈರೇಗೌಡ, 22 ಆಗಸ್ಟ್ ರಂದು ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಕೇಂದ್ರ ಸರ್ಕಾರದ ಕೃಷಿ ಸಹಕಾರ ಮತ್ತು ರೈತರ ಕಲ್ಯಾಣ ಮಂತ್ರಾಲಯದ ಪರಿಷ್ಕೃತ ಬರ ಕೈಪಿಡಿ 2020ರಲ್ಲಿ ಸೂಚಿಸಲಾಗಿರುವ ಕಡ್ಡಾಯ ಮಾನದಂಡಗಳಾದ (a) ಮಳೆ ಕೊರತೆ (ಶೇಕಡಾ> 60) (b)ಸತತ 3 ವಾರಗಳ ಶುಷ್ಕ ವಾತಾವರಣ (c) ಇತರ ತತ್ಪರಿಣಾಮ ಮಾನದಂಡಗಳ (ಉಪಗ್ರಹ ಆಧಾರತ ಬೆಳೆ ಸೂಚ್ಯಂಕ, ತೇವಾಂಶ ಕೊರತೆ ಹಾಗೂ ಜಲ ಸಂಪನ್ಮೂಲ ಸೂಚ್ಯಂಕ) ಅನ್ವಯ, ರಾಜ್ಯದಲ್ಲಿ ಬರ ಪರಿಸ್ಥಿತಿ ಕಂಡುಬಂದಿರುವ 113 ತಾಲೂಕುಗಳನ್ನು ಕ್ಷೇತ್ರ ಪರಿಶೀಲನ ಹಾಗೂ ದಢೀಕರಣಕ್ಕಾಗಿ (Ground - Truthning) ಜಂಟಿ ಸಮೀಕ್ಷೆ ಕೈಗೊಂಡು ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು. 19 ಆಗಸ್ಟ್ ರಂದು 113 ತಾಲೂಕುಗಳ ಪೈಕಿ ಜಂಟಿ ಸಮೀಕ್ಷೆಯಲ್ಲಿ ಮಾರ್ಗಸೂಚಿ ಅನ್ವಯ 62 ತಾಲೂಕುಗಳ ಬರ ಘೋಷಣೆಗೆ ಅರ್ಹವಾಗಿದೆ. ಆದರೆ, ಜಂಟಿ ಸಮಿ ಕ್ರಯ ನಂತರ ಬೆಳೆ ಪರಿಸ್ಥಿತಿ ಮತ್ತೆ ಕುಸಿದಿದೆ ಎಂದು ವರದಿಗಳು ಬಂದಿರುತ್ತವೆ. ಹಾಗಾಗಿ ಉಳಿದ 51 ತಾಲೂಕುಗಳಲ್ಲಿ ಮತ್ತೊಮ್ಮೆ ಜಂಟಿ ಸಮೀಕ್ಷೆಗೆ ಒಳವಡಿಸಲು ತೀರ್ಮಾನಿಸಿದೆ. ಇನ್ನು 9 ಸೆಪ್ಟೆಂಬರ್ ಅಂತ್ಯಕ್ಕೆ ಅರ್ಹವಾಗಿರುವ 83 ತಾಲೂಕುಗಳಲ್ಲಿ, ಕ್ಷೇತ್ರ ಪರಿಶೀಲನ ಹಾಗೂ ದಢೀಕರಣಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಸೂಚಿಸಲು ತೀರ್ಮಾನಿಸಲಾಯಿತು ಎಂದರು.
ಒಟ್ಟಾರೆ 57 ಮತ್ತು 83 ತಾಲೂಕುಗಳಲ್ಲಿ, ಕ್ಷೇತ್ರ ಪರಿಶೀಲನ ಹಾಗೂ ದಢೀಕರಣವನ್ನು ಮುಗಿಸಿ ಒಂದು ವಾರದೊಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಈ 134 ತಾಲೂಕುಗಳಲ್ಲಿ ಜಂಟಿ ಸಮೀಕ್ಷೆ ವರದಿ ಆಧಾರದ ಅನುಸಾರ ಬರ ಘೋಷಣೆ ತೀರ್ಮಾನಿಸಲಾಗಿದೆ. ಬರ ಘೋಷಣೆಯ ನಂತರ ಕೇಂದ್ರ ಸರ್ಕಾರದ ನೆರವಿಗಾಗಿ ಮನವಿ ಸಲ್ಲಿಸಲು (ಮಮೊರಾಂಡಮ್) ಸಲ್ಲಿಸಲಾಗುವುದು. ಬರ ಘೋಷಣೆಯಾದ ದಿನದಿಂದ ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ ಫೋರ್ಸ್ ರಚಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ- ರೀಲ್ಸ್ ಮಾಡುವ ಆಂಟಿಯರೇ ಟಾರ್ಗೆಟ್: ಫೇಕ್ ಐಡಿಯಲ್ಲಿ ಪಟಾಯಿಸಿ ಚಕ್ಕಂದವಾಡ್ತಿದ್ದ ಖದೀಮ ಅಂದರ್
ಬರ ಘೋಷಣೆ ನಂತರ ಕುಡಿಯುವ ನೀರು ಕೊರತೆ ಕಂಡುಬಂದ ವಸತಿ ಪುದೇಶಗಳಲ್ಲಿ ಟ್ಯಾಂಕರ್ ಮುಖಾಂತರ ಅಥವಾ ಬಾಡಿಗೆ ಬೋರ್ ವೆಲ್ ಮುಖಾಂತರ ತುರ್ತು ಕುಡಿಯುವ ನೀರು ಒದಗಿಸುವ ಖರ್ಚು ವೆಚ್ಚವನ್ನು ಎಸ್ ಡಿಆರ್ ಎಫ್ (SDRE) ಮುಖಾಂತರ ಬರಿಸಲು ಅನುಮತಿಸಿದೆ. ಹಾಲಿ ಮೇವು ಲಭ್ಯವಿದ್ದು ಮುಂದಿನ ದಿನಗಳಲ್ಲಿ ಮೇವಿನ ಕೊರತೆ ನಿಭಾಯಿಸಲು ನೀರಿನ ವ್ಯವಸ್ಥೆ ಇರುವ ರೈತರಿಗೆ ಮೇವು ಬಿತ್ತನೆ ಬೀಜದ ಕಿಟ್ ವಿತರಿಸಲು ಪಶು ಸಂಗೋಪನೆ ಇಲಾಖೆಗೆ 20 ಕೋಟಿ ರೂ. ಮೊತ್ತ ವಿತರಿಸಲು ತೀರ್ಮಾನಿಸಲಾಗಿದೆ ಎಂದವರು ಮಾಹೀಟ್ ಹಂಚಿಕೊಂಡರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.