ದಾವಣಗೆರೆ : ವಿಷ ಆಹಾರ ಸೇವಿಸಿ ಮೊರಾರ್ಜಿ ವಸತಿ ಶಾಲೆಯ (Morarji residential school) 95 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ದಾವಣಗೆರೆ (Davanagere) ಜಿಲ್ಲೆ ಜಗಳೂರು ಪಟ್ಟಣದ ಅಲ್ಪ ಸಂಖ್ಯಾತರ ಮೊರಾರ್ಜಿ ಬಾಲಕಿಯ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಅಸ್ವಸ್ಥ ಮಕ್ಕಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ತಾಲೂಕು ವೈಧ್ಯಾಧಿಕಾರಿ ಡಾ. ನಾಗರಾಜ್ ಭೀತಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾತ್ರಿ ಅನ್ನ ಸಾಂಬಾರ್ (Anna sambar) ಮತ್ತು ಬೆಳಿಗ್ಗೆ ಚಿತ್ರಾನ್ನ ಸೇವಿಸಿದ್ದ ಮಕ್ಕಳು ಅಸ್ವಸ್ಥರಾಗಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದ ಅಲ್ಪ ಸಂಖ್ಯಾತರ ಮೊರಾರ್ಜಿ ಬಾಲಕಿಯ ವಸತಿ ಶಾಲೆಯಲ್ಲಿ ( Morarji vasati shale) ಘಟನೆ ನಡೆದಿದೆ. ಅನ್ನ (rice) ಸೇವಿಸಿದ ನಂತರ ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ಅನ್ನ ಸೇವಿಸಿದ ನಂತರ ಮಕ್ಕಳಲ್ಲಿ ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಂಡಿದೆ. 95 ಮಕ್ಕಳು ಆಹಾರ ಸೇವಿಸಿ ಅಸ್ವಸ್ಥರಾಗಿದ್ದು, ಇವರಲ್ಲಿ 50 ಮಕ್ಕಳನ್ನು ಜಗಳೂರು ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಉಳಿದ ಮಕ್ಕಳಿಗೆ ಮೊರಾರ್ಜಿ ವಸತಿ ಶಾಲೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ : ಇಂದಿನಿಂದ ಕನ್ನಡ ನಾಡು-ನುಡಿ- ವಿಚಾರ ಸಂಕಿರಣ ಮತ್ತು ಕವಿಗೋಷ್ಠಿ
ಆಹಾರ (Food) ಸೇವಿಸಿದ ನಂತರ ಮಕ್ಕಳು ಅಸ್ವಸ್ಥರಾಗಿರುವ ವಿಷಯ ತಿಳಿಯುತ್ತಿದ್ದಂತೆಯೇ, ಸ್ಥಳಕ್ಕೆ ತಾಲೂಕು ವೈಧ್ಯಾಧಿಕಾರಿ ಡಾ. ನಾಗರಾಜ್, ಮಕ್ಕಳ ತಜ್ಞ ಜಯಕುಮಾರ್, ತಹಶೀಲ್ದಾರ್ ಶಶಿಧರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳು ಸೇವಿಸಿದ ಆಹಾರವನ್ನ ಪರೀಕ್ಷೆಗೆ (food testing) ಕಳುಹಿಸಲಾಗಿದೆ. ಒಟ್ಟು 107 ವಿದ್ಯಾರ್ಥಿಗಳಲ್ಲಿ ಆಹಾರ ಸೇವಿಸಿದ ನಂತರ 95 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ಇದನ್ನೂ ಓದಿ : ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.