Woman beaten Father in law : ಇಂದಿನ ಪೀಳಿಗೆ ಸಂಬಂಧಗಳಿಗೆ ಹೆಚ್ಚಿನ ಬೆಲೆ ನೀಡುತ್ತಿಲ್ಲ. ಸೊಸೆ, ಅಳಿಯ, ಮಗ, ಮಗಳು ತಮ್ಮ ತಂದೆ- ತಾಯಿ ಇಲ್ಲವೇ ಅತ್ತೆ -ಮಾವನ ಮೇಲೆ ಕ್ರೂರವಾಗಿ ಹಲ್ಲೆ ನಡೆಸುವ ಮಟ್ಟಕ್ಕೆ ಹೋಗಿದ್ದಾರೆ. ಇದೀಗ ಸೊಸೆಯೊಬ್ಬಳು ತನ್ನ ಮಾವನ ಮೇಲೆ ರಾಕ್ಷಸಿಯಂತೆ ಎರಗಿ ಕ್ರೂರವಾಗಿ ಹಲ್ಲೆ ನಡೆಸಿದ್ದಾಳೆ..
ಹೌದು.. ಇತ್ತೀಚೆಗಷ್ಟೇ ಕೇರಳದಲ್ಲಿ ಮಹಿಳೆಯೊಬ್ಬರು ತನ್ನ ಅತ್ತೆ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದ ವಿಚಾರ ಬಹಿರಂಗವಾಗಿತ್ತು. ಇದೀಗ ಅಂತಹುದೇ ಒಂದು ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಭಯಾನಕ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿವ ಹರಿದಾಡುತ್ತಿದೆ.
ಇದನ್ನೂ ಓದಿ: 8 ಕ್ಷೇತ್ರಗಳ ಟಿಕೆಟ್ ಬಾಕಿ.. ಬಿಜೆಪಿಗೆಷ್ಟು? ಜೆಡಿಎಸ್ಗೆಷ್ಟು?
ಪದ್ಮನಾಭ ಸುವರ್ಣ (87) ಅವರು ತಮ್ಮ ಕುಟುಂಬದೊಂದಿಗೆ ಮಂಗಳೂರಿನ ಕುಲಶೇಖರ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ಉಮಾ ಶಂಕರಿ ಎಂಬ ಸೊಸೆ ಇದ್ದಾಳೆ. ಉಮಾ ವಿದ್ಯುತ್ ಪೂರೈಕೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪತಿ ಪ್ರೀತಮ್ ಗಲ್ಫ್ ದೇಶದಲ್ಲಿ ಕೆಲಸಕ್ಕೆಂದು ಹೋಗಿದ್ದಾರೆ.
ಗಂಡನಿಲ್ಲದ ಮನೆಯಲ್ಲಿ ಮಾವನನ್ನು ಚನ್ನಾಗಿ ನೋಡಿಕೊಳ್ಳಬೇಕಿದ್ದ ಉಮಾ ಅವರ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ್ದಾಳೆ. ಇನ್ನು ವೈರಲ್ ಆಗಿರುವ ವಿಡಿಯೋದಲ್ಲಿ, ಮಾವನನ್ನು ವಾಕಿಂಗ್ ಸ್ಟಿಟ್ ನಿಂದ ಥಳಿಸಿ ಸೋಪಾದ ಮೇಲೆ ನೂಕಿದ ದೃಶ್ಯವನ್ನು ಕಾಣಬಹುದು. ಕೆಳಗೆ ಬಿದ್ದ ವೃದ್ಧ ನೋವಿನಿಂದ ಒದ್ದಾಡುತ್ತಿರುವ ದೃಶ್ಯ ವಿಡಿಯೋದಲ್ಲಿದೆ.
#Mangalore daughter-in-law #assaults father-in-law with a walking stick; video goes viral; KEB officer #Umashankari has been arrested by Mangalore #Police after the video went viral on social media. #BreakingNews #daughter pic.twitter.com/T82lhr7m0V
— Headline Karnataka (@hknewsonline) March 11, 2024
ಇದನ್ನೂ ಓದಿ: ಚುನಾವಣೆ ಹೊಸ್ತಿಲಲ್ಲಿ ಸಂಕಷ್ಟಕ್ಕೆ ಸಿಲುಕಿದ ಕೇಜ್ರಿವಾಲ್
ಗಲ್ಫ್ನಲ್ಲಿದ್ದ ಆಕೆಯ ಪತಿ ಪ್ರೀತಮ್ ಈ ಘಟನೆಯನ್ನು ಸಿಸಿಟಿವಿ ಕ್ಯಾಮೆರಾದಲ್ಲಿ ಇದನ್ನು ನೋಡಿ ತಕ್ಷಣವೇ ತನ್ನ ಸಹೋದರಿ ಪ್ರಿಯಾಗೆ ತಿಳಿಸಿದ್ದಾನೆ. ಕೂಡಲೇ ಮನೆಗೆ ತಲುಪಿ ಗಾಯಗೊಂಡಿದ್ದ ತಂದೆ ಪದ್ಮನಾಭ ಸುವರ್ಣ ಅವರನ್ನು ಎಬ್ಬಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಆಕೆಯ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.
ಕಂಕನಾಡಿ ಪೊಲೀಸರು ದಾಲು ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಗಾಯಗೊಂಡ ವೃದ್ಧನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿ ನೋಡಿದ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ. ಅಲ್ಲದೆ, ಇಂತಹ ಸೊಸೆಗೆ ಕಠಿಣ ಶಿಕ್ಷೆಯಾಗಬೇಕು ಅಂತ ಆಕ್ರೋಶ ಹೊರಹಾಕಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.