ಆಗಸ್ಟ್ ತಿಂಗಳಾಂತ್ಯಕ್ಕೆ ಆಧಾರ್ ಸೀಡಿಂಗ್ ಮುಕ್ತಾಯ

ಆಧಾರ್‌ ಸೀಡಿಂಗ್‌ನಿಂದಾಗಿ ಸರ್ಕಾರಕ್ಕೆ ಸಾಕಷ್ಟು ಅಂಕಿಅಂಶಗಳು ಸಿಗುತ್ತಿದೆ. 36.53 ಲಕ್ಷ ಜಮೀನುಗಳಲ್ಲಿ ವ್ಯಕ್ತಿ ತೀರಿ ಹೋಗಿದ್ದರೂ, ಪಹಣಿಯಲ್ಲಿ ಅವರ ಹೆಸರೇ ಉಲ್ಲೇಖವಾಗಿರುವುದು ಆಧಾರ್‌ ಸೀಡಿಂಗ್‌ನಿಂದ ತಿಳಿದುಬಂದಿದೆ. 

Written by - Manjunath N | Last Updated : Aug 13, 2024, 08:36 PM IST
  • ಎರಡು ತಿಂಗಳ ನಂತರ ಅದಾಲತ್‌ ಮೂಲಕ ಪೌತಿ ಖಾತೆ ಅಭಿಯಾನ ಆರಂಭಿಸುವ ಚಿಂತನೆ ಇದೆ.
  • ಅಲ್ಲದೆ, ಆಧಾರ್‌ ಸೀಡಿಂಗ್‌ನಿಂದಾಗಿ ನಕಲಿ ವ್ಯಕ್ತಿ ಸೃಷ್ಟಿಸಿ ಅಕ್ರಮವಾಗಿ ಜಮೀನು ಮಾರಾಟವನ್ನು ತಪ್ಪಿಸಬಹುದು.
  • ಬಿಟ್ಟು ಹೋದ ಸರ್ಕಾರದ ಜಮೀನುಗಳೂ ಸಹ ಇದೀಗ ಸಿಕ್ಕಿದೆ. ಒತ್ತುವರಿಯಾದದ್ದೂ ಗೊತ್ತಾಗಿದೆ.
ಆಗಸ್ಟ್ ತಿಂಗಳಾಂತ್ಯಕ್ಕೆ ಆಧಾರ್ ಸೀಡಿಂಗ್ ಮುಕ್ತಾಯ  title=

ಬೆಂಗಳೂರು: ಆಧಾರ್‌ ಸೀಡಿಂಗ್‌ನಿಂದಾಗಿ ಸರ್ಕಾರಕ್ಕೆ ಸಾಕಷ್ಟು ಅಂಕಿಅಂಶಗಳು ಸಿಗುತ್ತಿದೆ. 36.53 ಲಕ್ಷ ಜಮೀನುಗಳಲ್ಲಿ ವ್ಯಕ್ತಿ ತೀರಿ ಹೋಗಿದ್ದರೂ, ಪಹಣಿಯಲ್ಲಿ ಅವರ ಹೆಸರೇ ಉಲ್ಲೇಖವಾಗಿರುವುದು ಆಧಾರ್‌ ಸೀಡಿಂಗ್‌ನಿಂದ ತಿಳಿದುಬಂದಿದೆ. 

ಬೆಂಗಳೂರಿನ ರಸ್ತೆ ಗುಂಡಿ ಸರಿ ಪಡಿಸಲು ನೂತನ ಆ್ಯಪ್‌ ಬಿಡುಗಡೆ ಮಾಡಿದ ಬಿಬಿಎಂಪಿ..! ನೀವು ಕೂಡ ದೂರು ನೀಡಬಹುದು..!

ಹೀಗಾಗಿ ಎರಡು ತಿಂಗಳ ನಂತರ ಅದಾಲತ್‌ ಮೂಲಕ ಪೌತಿ ಖಾತೆ ಅಭಿಯಾನ ಆರಂಭಿಸುವ ಚಿಂತನೆ ಇದೆ. ಅಲ್ಲದೆ, ಆಧಾರ್‌ ಸೀಡಿಂಗ್‌ನಿಂದಾಗಿ ನಕಲಿ ವ್ಯಕ್ತಿ ಸೃಷ್ಟಿಸಿ ಅಕ್ರಮವಾಗಿ ಜಮೀನು ಮಾರಾಟವನ್ನು ತಪ್ಪಿಸಬಹುದು. ಬಿಟ್ಟು ಹೋದ ಸರ್ಕಾರದ ಜಮೀನುಗಳೂ ಸಹ ಇದೀಗ ಸಿಕ್ಕಿದೆ. ಒತ್ತುವರಿಯಾದದ್ದೂ ಗೊತ್ತಾಗಿದೆ. May be an image of 2 people and text

ಜಮೀನಿಗೆ ಆಧಾರ್‌ ಲಿಂಕ್‌ ಮಾಡುವಾಗ 2.20 ಲಕ್ಷ ಜಮೀನು ಸರ್ಕಾರಿ ಭೂಮಿ ಎಂದು ಗುರುತಿಸದ ಭೂಮಿ ಇವೆ ಎಂದು ತಿಳಿದುಬಂದಿದೆ. ಆಧಾರ್‌ ಸೀಡಿಂಗ್‌ ಮುಗಿಯುವುದರ ಒಳಗಾಗಿ 3 ರಿಂದ 3.50 ಲಕ್ಷ ಹೆಚ್ಚುವರಿ ಸರ್ಕಾರಿ ಭೂಮಿ ಲೆಕ್ಕಕ್ಕೆ ಬರುವ ಸಾಧ್ಯತೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: ನಾಳೆ ರಾಜಧಾನಿಯ ಕೆಲವೆಡೆ ಕರೆಂಟ್ ಕಟ್ !ಸಂಜೆ 4 ಗಂಟೆವರೆಗೂ ಆಗಲಿದೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News