ಬಿ ವಿ ಕಕ್ಕಿಲ್ಲಾಯ ಪ್ರತಿಷ್ಠಾನದ ಉಪನ್ಯಾಸ ಕಾರ್ಯಕ್ರಮಕ್ಕೆ ಎಬಿವಿಪಿ ಭಾರೀ ವಿರೋಧ!!

Manglore University : ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಬಿ‌.ವಿ.ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ಇಂದು ಆಯೋಜಿಸಲ್ಪಟ್ಟ ಉಪನ್ಯಾಸ ಕಾರ್ಯಕ್ರಮಕ್ಕೆ ಎಬಿವಿಪಿ‌‌ ವಿರೋಧ ವ್ಯಕ್ತಪಡಿಸಿದ ಘಟನೆ ನಡೆಯಿತು.   

Written by - Savita M B | Last Updated : Sep 9, 2023, 11:40 AM IST
  • ಬಿವಿ ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸ ಕಾರ್ಯಕ್ರಮ
  • ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದೆ
  • ವಿವಾದಾತ್ಮಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ ಕಾಲೇಜಿನಲ್ಲಿ ಸಂಘರ್ಷ
ಬಿ ವಿ ಕಕ್ಕಿಲ್ಲಾಯ ಪ್ರತಿಷ್ಠಾನದ ಉಪನ್ಯಾಸ ಕಾರ್ಯಕ್ರಮಕ್ಕೆ ಎಬಿವಿಪಿ ಭಾರೀ ವಿರೋಧ!! title=

ಮಂಗಳೂರು : ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಏಕೀಕರಣ ಚಳುವಳಿಯ ನಾಯಕ, ಸಿಪಿಐ ಹಾಗೂ ಎಐಟಿಯುಸಿ ನಾಯಕರು, ರಾಜ್ಯಸಭೆ ಹಾಗೂ ವಿಧಾನಸಭೆಯ ಸದಸ್ಯ, ಚಿಂತಕ, ಲೇಖಕ ಬಿವಿ ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸ ಕಾರ್ಯಕ್ರಮವು ಇಂದು ಬೆಳಗ್ಗೆ ಮಂಗಳೂರು ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದೆ. 

ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲಿರುವ ದೆಹಲಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಡಾ. ಶಂಸುಲ್‌ ಇಸ್ಲಾಂ ಆಗಮನಕ್ಕೆ ಎಬಿವಿಪಿ‌‌ ತೀವ್ರ ವಿರೋಧ ವ್ಯಕ್ತಪಡಿಸಿತು‌. ವಿರೋಧದ ನಡುವೆಯೂ ಬಿ‌ವಿ ಕಕ್ಕಿಲ್ಲಾಯ ಪ್ರತಿಷ್ಠಾನದಿಂದ  ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. 

ಇದನ್ನೂ ಓದಿ-ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಅದನ್ನು ಯಾರು ಸೃಷ್ಟಿಸಿದವರು..? : ಗೃಹ ಸಚಿವರ ಪ್ರಶ್ನೆ

ವಿವಾದಾತ್ಮಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ ಕಾಲೇಜಿನಲ್ಲಿ ಸಂಘರ್ಷ ವಾತಾವರಣ ಸೃಷ್ಠಿಗೆ ಸಂಚು ಮಾಡಲಾಗಿದೆ ಎಂದು ಆರೋಪಿಸಿದ ಎಬಿವಿಪಿ ಪ್ರತಿಭಟನೆ ನಡೆಸಿತ್ತು.

ಉಪನ್ಯಾಸ ಕಾರ್ಯಕ್ರಮಕ್ಕೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾಲೇಜು ಆವರಣದಲ್ಲಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ‌.

ಇದನ್ನೂ ಓದಿ-ಬಟ್ಟೆ ಬದಲಿಸುವಂತೆ ಮಹಿಳೆಯರನ್ನ ಬದಲಿಸುತ್ತಾನೆ : ಇನ್ಸ್‌ಪೆಕ್ಟರ್ ವಿರುದ್ಧ ಪತ್ನಿ ದೂರು

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News