ಬೆಂಗಳೂರು: ಮ್ಯಾಟ್ರಿಕ್ಸ್ ಇಮೇಜಿಂಗ್ ಕಂಪನಿ ಪ್ರಾರಂಭದ ವಿಷಯದಲ್ಲಿ ಸಿಎಂ ಪುತ್ರ ಡಾ.ಯತೀಂದ್ರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ್ದ ದೂರಿನಲ್ಲಿ ಯಾವುದೇ ಸತ್ಯಾಂಶವಿಲ್ಲವೆಂದು ತಿಳಿಸಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಪ್ರಕರಣವನ್ನು ಖುಲಾಸೆಗೊಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಯುನಿಟ್ ಆರಂಭಕ್ಕೆ ಟೆಂಡರ್ ಅನ್ನು ನಿಯಮಬಾಹಿರವಾಗಿ ನೀಡಲಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಎಸ್. ಭಾಸ್ಕರನ್ ಎಂಬುವರು 2016ರ ಮೇ 23ರಂದು ಎಸಿಬಿ ಮತ್ತು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು.
ಮ್ಯಾಟ್ರಿಕ್ಸ್ ಇಮೇಜಿಂಗ್ ಕಂಪೆನಿ ಪ್ರಾರಂಭದ ವಿಷಯದಲ್ಲಿ ನೀಡಿದ್ದ ದೂರಿಗೆ ಎಸಿಬಿಯಿಂದ ಕ್ಲೀನ್ ಚಿಟ್ ನೀಡಿರುವ ಎಸಿಬಿ ಧೋರಣೆಗೆ ಎಸ್. ಭಾಸ್ಕರನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹೈಕೋರ್ಟ್ ನಲ್ಲಿ ಕಾನೂನು ಸಮರ ಆರಂಭಿಸಲು ನಿರ್ಧರಿಸಿದ್ದಾರೆ.