ಚಿಂತಾಮಣಿ ಬಳಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಾಟಾ ಏಸ್ ನಲ್ಲಿದ್ದ 12 ಮಂದಿ ಮೃತಪಟ್ಟಿದ್ದರು.

Last Updated : Jul 4, 2019, 08:13 AM IST
ಚಿಂತಾಮಣಿ ಬಳಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ title=

ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಬಳಿ ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಸಂಭವಿಸಿದ ಅಪಘಾತದಲ್ಲಿ ಟಾಟಾ ಏಸ್ ನಲ್ಲಿದ್ದ 12 ಮಂದಿ ಮೃತಪಟ್ಟಿದ್ದರು. ಮೃತರಲ್ಲಿ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

ಈ ಅಪಘಾತ ಅತ್ಯಂತ ದುರದೃಷ್ಟಕರ ಎಂದು ಬಣ್ಣಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಪಘಾತದಿಂದ ಮೃತ ಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

Trending News