ಹಂಪಿ: ವಿಶ್ವ ವಿಖ್ಯಾತ ಹಂಪಿಯಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದಾಗಿ ಅಂಗಡಿಗಳು, ಛತ್ರ, ಹೋಟೆಲ್ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ.
ಈ ಅಗ್ನಿ ಅನಾಹುತದಲ್ಲಿ ಹಂಪಿಯ ಜನತಾ ಪ್ಲಾಟ್ ನಲ್ಲಿದ್ದ ಪ್ರಸಿದ್ದ ಮ್ಯಾಂಗೋ ಟ್ರೀ ಹೊಟೇಲ್, ಅನ್ನಪೂರ್ಣೇಶ್ವರಿ ಛತ್ರ ಮತ್ತು ಬಟ್ಟೆ ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ಇದನ್ನೂ ಓದಿ- ಸಗಣಿ ಎರೆಚಾಟ-ಅಶ್ಲೀಲ ಬೈದಾಟ.. ತಮಿಳುನಾಡಲ್ಲಿ ಕನ್ನಡಿಗರ ಸಂಭ್ರಮ!!
ಹಂಪಿಯ ಜನತಾ ಪ್ಲಾಟ್ ನಲ್ಲಿ ಮೊದಲು ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬಳಿಕ ಪಕ್ಕದ ಅಂಗಡಿಗಳು, ಹೋಟೆಲ್ ಮತ್ತು ಛತ್ರಕ್ಕೆ ಬೆಂಕಿ ಆವರಿಸಿದೆ. ಈ ಸಂದರ್ಭದಲ್ಲಿ ಹೋಟೆಲ್ ನಲ್ಲಿದ್ದ ಸಿಲಿಂಡರ್ ಗಳು ಬ್ಲಾಸ್ಟ್ ಆಗಿದ್ದು ಇಡೀ ಮ್ಯಾಂಗೋ ಟ್ರೀ ಹೋಟೆಲ್ ಸುಟ್ಟು ಕರಕಲಾಗಿದೆ ಎಂದು ವರದಿ ಆಗಿದೆ.
ಇದನ್ನೂ ಓದಿ- ಪಂಚರತ್ನ ರಥಯಾತ್ರೆ; ಬೆಂಗಳೂರಿನಲ್ಲಿ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ
ಇನ್ನು ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಆಗಿಲ್ಲ ಘಟನೆ ಕುರಿತಂತೆ ಹಂಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ