ದೇಶಾದ್ಯಂತ HMT ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

Union Minister HD Kumaraswamy: ಕಾರ್ಖಾನೆಗೆ ಭೇಟಿ ನೀಡಿದ ನಂತರ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಜತೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

Written by - Prashobh Devanahalli | Last Updated : Jul 12, 2024, 04:58 PM IST
    • ಅನೇಕ ಕಡೆ ಕಂಪನಿಗೆ ದೊಡ್ಡ ಪ್ರಮಾಣದಲ್ಲಿ ಭೂಮಿ ಇದೆ
    • ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಜತೆ ಮಾತುಕತೆ
    • ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಭರವಸೆ
ದೇಶಾದ್ಯಂತ HMT ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ title=
File Photo

ಹೈದರಾಬಾದ್: ತೀವ್ರ ಸಂಕಷ್ಟದ ಸ್ಥಿತಿಯಲ್ಲಿರುವ ಇಲ್ಲಿನ HMT- ಮಶೀನ್ & ಟೂಲ್ಸ್  (HMT MTL) ಘಟಕವೂ ಸೇರಿದಂತೆ ನಗರದಲ್ಲಿರುವ ಕಂಪನಿ ವ್ಯಾಪ್ತಿಯ ಎಲ್ಲಾ ಭೂಮಿಯ ರಕ್ಷಣೆಗೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಕಾರ್ಖಾನೆಗೆ ಭೇಟಿ ನೀಡಿದ ನಂತರ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಜತೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಇದನ್ನೂ ಓದಿ: ಸ್ನೇಹಿತೆಯ ಪತಿಗೆ ಅಣ್ಣ ಎಂದು ರಾಖಿ ಕಟ್ಟಿದ್ಳು… ಆದ್ರೆ ಆತನಿಂದಲೇ ಮದುವೆಗೂ ಮುನ್ನ ಗರ್ಭಿಣಿಯಾದ್ಳು ಈ ಪ್ರಸಿದ್ಧ ನಟಿ!

ನಾನು ಭಾರೀ ಕೈಗಾರಿಕೆ ಸಚಿವನಾಗಿ ಅಧಿಕಾರ ವಹಿಸಿಕೊಂಡ ಮೇಲೆ HMT ಬಗ್ಗೆಯೇ ಸರಣಿ ಸಭೆಗಳನ್ನು ನಡೆಸಿದ್ದೇನೆ. ಕರ್ನಾಟಕದ ಬೆಂಗಳೂರು, ಹರಿಯಾಣದ ಪಿಂಜೋರ್’ನಲ್ಲಿರುವ ಘಟಕಗಳಿಗೆ ಭೇಟಿ ನೀಡಿದ್ದೇನೆ. ದೇಶದ ಎಲ್ಲಾ ಕಡೆಯಲ್ಲೂ HMT ಘಟಕಗಳು ಒಂದೇ ರೀತಿಯ ಸಂಕಷ್ಟ ಎದುರಿಸುತ್ತಿವೆ ಎಂದು ಹೇಳಿದರು.

ಅನೇಕ ಕಡೆ ಕಂಪನಿಗೆ ದೊಡ್ಡ ಪ್ರಮಾಣದಲ್ಲಿ ಭೂಮಿ ಇದೆ. ಕೆಲವಡೆ ಅಕ್ರಮ ಒತ್ತುವರಿ ಆಗಿದೆ. ಕಾನೂನು ಕ್ರಮದ ಮೂಲಕ ಒತ್ತುವರಿ ಭೂಮಿಯನ್ನು ವಶಕ್ಕೆ ಪಡೆಯಲಾಗುವುದು. ಈ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದೇನೆ ಎಂದು ಹೇಳಿದರು.

ಹೈದರಾಬಾದ್’ನಲ್ಲಿರುವ HMT- ಮಶೀನ್ & ಟೂಲ್ಸ್  (HMT MTL) ಘಟಕ ಕೆಲ ವರ್ಷಗಳ ಹಿಂದೆ ಉತ್ತಮ ಸ್ಥಿತಿಯಲ್ಲಿತ್ತು. ಇಸ್ರೋ, ಸೇನೆ ಸೇರಿದಂತೆ ವಿವಿಧ ವಲಯಗಳ ಬೇಡಿಕೆಗಳಿಗೆ ತಕ್ಕಂತೆ ವಿಸ್ತೃತವಾಗಿ ಉತ್ಪಾದನೆ ಮಾಡುತ್ತಿತ್ತು. ಹಲವು ಕಾರಣಗಳಿಂದಾಗಿ ಅದು ಸಂಕಷ್ಟಕ್ಕೆ ಸಿಲುಕಿದೆ. ಅದಕ್ಕೆ ಮರುಜನ್ಮ ನೀಡುವ ಬಗ್ಗೆ ಮುಕ್ತವಾಗಿ ಚಿಂತನೆ ನಡೆಸಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತ್ಮನಿರ್ಭರ್ ಭಾರತ ಕಲ್ಪನೆಯ ಅಡಿಯಲ್ಲಿ ಮಾರ್ಗೋಪಾಯ ಹುಡುಕಲಾಗುವುದು ಎಂದು ಅವರು ಹೇಳಿದರು.

ಕಾರ್ಖಾನೆ ವೀಕ್ಷಣೆ

ಇಡೀ ಕಾರ್ಖಾನೆಯನ್ನು ವೀಕ್ಷಿಸಿದ ಕೇಂದ್ರ ಸಚಿವರು; ಬೃಹತ್ ಯಂತ್ರೋಪಕರಣಗಳು, ಅವುಗಳ ಸುಸ್ಥಿತಿಯ ಬಗ್ಗೆ ತಾಂತ್ರಿಕ ವಿಭಾಗದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್-ಪ್ರಜ್ವಲ್ ರೇವಣ್ಣ ಭೇಟಿ! ಮುಖಾಮುಖಿ ವೇಳೆ ಆಗಿದ್ದೇನು?

ಈ ಸಂದರ್ಭದಲ್ಲಿ ಹಾಲಿ, ನಿವೃತ್ತ ಕಾರ್ಮಿಕರ ಜತೆ ಸಂವಾದ ನಡೆಸಿದ ಅವರು; ಬಳಿಕ ಆಡಳಿತ ಮಂಡಳಿಯ ಸಭೆ ನಡೆಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News