ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳಿಂದ ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಪತ್ರವನ್ನು ಕುಲಪತಿ ಪ್ರೊ. ವಿಷ್ಣುಕಾಂತ ಎಸ್ ಚಟಪಲ್ಲಿ ಪಡೆದುಕೊಡರು.
ಸರಕಾರಿ ಶಾಲೆಗಳ ದತ್ತು ಸ್ವೀಕಾರ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲೆಯ ಗದಗ(Gadag)ರೋಣ ಮತ್ತು ಶಿರಹಟ್ಟಿ ತಾಲೂಕಗಳಿಗೆ ಸೇರಿದ ಒಟ್ಟು 11 ಗ್ರಾಮಗಳ 20 ಸರಕಾರಿ ಶಾಲೆಗಳನ್ನು ದತ್ತು ಸ್ವೀಕಾರ ಮಾಡಿಕೊಳ್ಳಲಾಗಿದ್ದು ಇದಕ್ಕೆ ಪೂರಕವಾಗಿ ಕುಲಸಚಿವರ ಅಧ್ಯಕ್ಷತೆಯಲ್ಲಿ ಸಂಚಾಲನ ಸಮಿತಿ ರಚನೆ ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಈ ಸಮಿತಿಯು ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಲಿದೆ.
ಇದನ್ನೂ ಓದಿ: ಹಳ್ಳಿರಂಗ ಶಾಲೆಯ ಜಾಡು ಹಿಡಿದು...
ಶಾಲೆಗಳ ಅಭಿವೃದ್ಧಿಗಾಗಿ ಮೊದಲು ವಿಶ್ವವಿದ್ಯಾಲಯದಲ್ಲಿ ಆಂತರಿಕ ಉಪಸಮಿತಿ ಮಾಡಿ ದತ್ತು ತೆಗೆದುಕೊಂಡ ಶಾಲೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿಕೊಂಡು ವಿಶ್ಲೇಷಣೆ ಮಾಡಿ ಶಾಲೆಯಲ್ಲಿನ ಪ್ರಸ್ತುತ ಸಮಸ್ಯೆಗಳ ಬಗ್ಗೆ ತಿಳಿದುಕೊಂಡು, ಮುಂದಿನ ಶೈಕ್ಷಣಿಕ ಚಟುವಟಿಕೆಗಳ ಮತ್ತು ಶಾಲೆಯ ಅಭಿವೃದ್ಧಿಗಾಗಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಬೇಕೆಂದು ನಮ್ಮ ವಿಶ್ವವಿದ್ಯಾಲಯವು ಕೈಜೋಡಿಸುತ್ತದೆ.
ಇದನ್ನೂ ಓದಿ: ಗದಗ ಬಸ್ ನಿಲ್ದಾಣಕ್ಕೆ ಪಂ.ಪುಟ್ಟರಾಜ ಗವಾಯಿಗಳ ಹೆಸರು ನಾಮಕರಣ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ
ಗುಣಮಟ್ಟದ ಶಿಕ್ಷಣಕ್ಕಾಗಿ ಬೇಕಾದಂತ ಸೌಲಭ್ಯಗಳನ್ನು ಒದಗಿಸಿ, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಗಣಿತ, ಇಂಗ್ಲೀಷ್ ಹಾಗೂ ಇನ್ನಿತರೆ ಅಗತ್ಯವಿರುವ ವಿಷಯಗಳ ವಿಶೇಷ ತರಗತಿಗಳನ್ನು ತೆಗೆದುಕೊಳ್ಳುವುದು ಮತ್ತು ಎಸ್.ಎಸ್.ಎಲ್.ಸಿ ನಂತರದ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಕ್ಷೇತ್ರಗಳಲ್ಲಿನ ಅವಕಾಶಗಳ ಕುರಿತಾಗಿ ವಿಶ್ವವಿದ್ಯಾಲಯದ ನೈಪುಣ್ಯ ಕೇಂದ್ರದಿಂದ ಕೌಶಲ್ಯ ತರಬೇತಿಯನ್ನು ಕೊಡುವದು ಹಾಗೂ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳವದರ ಮೂಲಕ ವಿಶ್ವವಿದ್ಯಾಲಯzವು ಕೈಜೋಡಿಸುತ್ತದೆ ಎಂದು ವಿಶ್ವವಿದ್ಯಾಲಯದ ಕುಲಪತಿಗಳು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.