'ಜೆಡಿಎಸ್ ಏನೋ ಗಿಮಿಕ್ ಮಾಡುತ್ತಿದೆ, ಅದನ್ನು ನನ್ನ ಕಡೆಯಿಂದ ಹೇಳಿಸಬೇಡಿ'

ಈ ಸಮಯದಲ್ಲಿ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಮಾಡುವ ಅವಶ್ಯಕತೆ ಬಿಜೆಪಿಗಿಲ್ಲ

Last Updated : Dec 21, 2020, 06:33 PM IST
  • ಈ ಸಮಯದಲ್ಲಿ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಮಾಡುವ ಅವಶ್ಯಕತೆ ಬಿಜೆಪಿಗಿಲ್ಲ
  • ಇಲ್ಲಿ ಜೆಡಿಎಸ್ ಏನೋ ಗಿಮಿಕ್ ಮಾಡುತ್ತಿದೆ. ಅದನ್ನೆಲ್ಲಾ ನನ್ನ ಕಡೆಯಿಂದ ಹೇಳಿಸಬೇಡಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್
  • ರಾಜ್ಯದಲ್ಲಿ ಈಗ ಯಾವ ಚುನಾವಣೆಗಳೂ ಇಲ್ಲ. ಗ್ರಾಮ ಪಂಚಾಯತಿ ಚುನಾವಣ ಪಕ್ಷದ ಚಿಹ್ನೆ ಮೇಲೆ ನಡೆಯಲ್ಲ, ಹೀಗಾಗಿ ಈ ಸಮಯದಲ್ಲಿ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಮಾಡುವ ಅವಶ್ಯಕತೆ ಬಿಜೆಪಿಗಿಲ್
'ಜೆಡಿಎಸ್ ಏನೋ ಗಿಮಿಕ್ ಮಾಡುತ್ತಿದೆ, ಅದನ್ನು ನನ್ನ ಕಡೆಯಿಂದ ಹೇಳಿಸಬೇಡಿ' title=

ಬೆಂಗಳೂರು: ಈ ಸಮಯದಲ್ಲಿ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಮಾಡುವ ಅವಶ್ಯಕತೆ ಬಿಜೆಪಿಗಿಲ್ಲ. ಇಲ್ಲಿ ಜೆಡಿಎಸ್ ಏನೋ ಗಿಮಿಕ್ ಮಾಡುತ್ತಿದೆ. ಅದನ್ನೆಲ್ಲಾ ನನ್ನ ಕಡೆಯಿಂದ ಹೇಳಿಸಬೇಡಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಯಾವ ಚುನಾವಣೆ(Election)ಗಳೂ ಇಲ್ಲ. ಗ್ರಾಮ ಪಂಚಾಯತಿ ಚುನಾವಣೆ ಪಕ್ಷದ ಚಿಹ್ನೆ ಮೇಲೆ ನಡೆಯಲ್ಲ, ಹೀಗಾಗಿ ಈ ಸಮಯದಲ್ಲಿ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಮಾಡುವ ಅವಶ್ಯಕತೆ ಬಿಜೆಪಿಗಿಲ್ಲ ಎಂದರು.

ಬಿಎಸ್ ವೈಯೇ ಕರ್ನಾಟಕದ ಮುಖ್ಯಮಂತ್ರಿ: ಸಿಎಂ ಬದಲಾವಣೆಯ ಪ್ರಸ್ತಾಪ ಇಲ್ಲ

ಇಂದು ವಿಧಾನ ಸೌಧದ ಕಚೇರಿಯಲ್ಲಿ ಬಿ.ಸಿ. ಪಾಟೀಲ್, ಸಂಸದ ಶಿವಕುಮಾರ ಉದಾಸಿ ಮತ್ತು ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ತುಂಗಾ ಮೇಲ್ದಂಡೆ ಯೋಜನೆ ಹಾಗೂ ಉಡುಗಣಿ ತಾಳಗುಂದ ಹೊಸೂರು ಹೋಬಳಿಗಳ ಕೆರೆ ತುಂಬಿಸುವ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆಯ ಬಗ್ಗೆ ಪರಿಶೀಲನೆ ನಡೆಸಿ ಪ್ರಕ್ರಿಯೆ ತ್ವರಿತಗೊಳಿಸಲು ನಿರ್ದೇಶನ ನೀಡಲಾಯಿತು.

ನಾಳೆ ಗ್ರಾ.ಪಂ. ಮೊದಲ ಹಂತದ ಮತದಾನ: ಎಲ್ಲೆಲ್ಲಿ ಚುನಾವಣೆ ನಡೆಯುತ್ತೆ?

Trending News