ಅನರ್ಹಗೊಂಡ ಎಲ್ಲ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ- ಬಿಎಸ್ವೈ

ಮುಂಬರುವ ಉಪಚುನಾವಣೆಗಳಿಗೆ ಅನರ್ಹಗೊಂಡ ಎಲ್ಲ ಶಾಸಕರನ್ನು ಬಿಜೆಪಿ ಕಣಕ್ಕಿಳಿಸಲಿದೆ, ಇದಕ್ಕೆ ಅಮಿತ್ ಶಾ ಕೂಡ ಅನುಮೋದನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆ ಮೂಲಕ ಅನರ್ಹಗೊಂಡ ಎಲ್ಲ ಶಾಸಕರ ಸ್ಪರ್ಧೆ ವಿಚಾರವಾಗಿ ಇದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

Last Updated : Sep 30, 2019, 05:31 PM IST
ಅನರ್ಹಗೊಂಡ ಎಲ್ಲ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ- ಬಿಎಸ್ವೈ   title=
file photo

ಬೆಂಗಳೂರು: ಮುಂಬರುವ ಉಪಚುನಾವಣೆಗಳಿಗೆ ಅನರ್ಹಗೊಂಡ ಎಲ್ಲ ಶಾಸಕರನ್ನು ಬಿಜೆಪಿ ಕಣಕ್ಕಿಳಿಸಲಿದೆ, ಇದಕ್ಕೆ ಅಮಿತ್ ಶಾ ಕೂಡ ಅನುಮೋದನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆ ಮೂಲಕ ಅನರ್ಹಗೊಂಡ ಎಲ್ಲ ಶಾಸಕರ ಸ್ಪರ್ಧೆ ವಿಚಾರವಾಗಿ ಇದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

ಶಿಕಾರಿಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಈ ಶಾಸಕರ ರಾಜೀನಾಮೆಯಿಂದಾಗಿ ರಾಜ್ಯದಲ್ಲಿ ಬಿಜೆಪಿ ಬಂದಿದೆ ಎಂದು ಹೇಳಿದರು.

ಅನರ್ಹ ಶಾಸಕರನ್ನು ಬಿಜೆಪಿ ಕಣಕ್ಕಿಳಿಸುವುದಿಲ್ಲ ಹೇಳಿದ್ದ ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, ಇದರಲ್ಲಿ ಯಾವುದೇ ಗೊಂದಲವಿಲ್ಲ ಅವರನ್ನು ಬಿಜೆಪಿ ಕಣಕ್ಕೆ ಇಳಿಸಲಿದೆ ಎಂದು ಹೇಳಿದರು. ಬಿಜೆಪಿ ಶಾಸಕರು ಮತ್ತು ಟಿಕೆಟ್ ಆಕಾಂಕ್ಷಿಗಳು ಅನರ್ಹ ಶಾಸಕರನ್ನು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಮತ್ತು ಗೆಲ್ಲಲು ಬೆಂಬಲಿಸುವಂತೆ ಮನವಿ ಮಾಡಿದರು.

 

Trending News