ಹೋಟೆಲ್ ಬಿಲ್ ಬಾಕಿಸೌಹಾರ್ದಯುತ ಇತ್ಯರ್ಥ: ಈಶ್ವರ ಖಂಡ್ರೆ

Eshwara Khandre: ಕಳದ ವರ್ಷ ಏಪ್ರಿಲ್ ನಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.ಎ) ವತಿಯಿಂದ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

Written by - Savita M B | Last Updated : May 25, 2024, 05:08 PM IST
  • ರಾಜ್ಯ ಲಾಂಛನದ ಬಳಕೆಯೂ ಆಗಿರಲಿಲ್ಲ.
  • ಇದು ಸಂಪೂರ್ಣ ಎನ್.ಟಿ.ಸಿ.ಎ. ಕಾರ್ಯಕ್ರಮವಾಗಿತ್ತು ಎಂದರು.
ಹೋಟೆಲ್ ಬಿಲ್ ಬಾಕಿಸೌಹಾರ್ದಯುತ ಇತ್ಯರ್ಥ: ಈಶ್ವರ ಖಂಡ್ರೆ title=

ಬೆಂಗಳೂರು: ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, 2023ರ ಏಪ್ರಿಲ್ ನಲ್ಲಿ ಈ ಕಾರ್ಯಕ್ರಮ ನಡೆದಾಗ, ವಿಧಾನಸಭಾ  ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿತ್ತು ಹೀಗಾಗಿ ರಾಜ್ಯ ಸರ್ಕಾರ ಭಾಗಿ ಆಗಿರಲಿಲ್ಲ. ರಾಜ್ಯ ಲಾಂಛನದ ಬಳಕೆಯೂ ಆಗಿರಲಿಲ್ಲ. ಇದು ಸಂಪೂರ್ಣ ಎನ್.ಟಿ.ಸಿ.ಎ. ಕಾರ್ಯಕ್ರಮವಾಗಿತ್ತು ಎಂದರು.

ದೇಶದ ಪ್ರಧಾನಿಯವರು ರಾಜ್ಯಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ  ಆತಿಥ್ಯ ನಿರ್ವಹಣೆಗಾಗಿ ಸ್ಥಳೀಯವಾಗಿ ರಚಿಸಲಾಗಿದ್ದ ಸಮಿತಿಯಲ್ಲಿ ನಮ್ಮ ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು. ವಾಸ್ತವವಾಗಿ ಈ ಕಾರ್ಯಕ್ರಮಕ್ಕೆ ಆಗುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಎನ್.ಟಿ.ಸಿ.ಎ. ಹೇಳಿತ್ತು ಎಂದು ವಿವರಿಸಿದರು.

ಇದನ್ನೂ ಓದಿ-ವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ಧಿರಾ? ಸಿಎಂ ಸಿದ್ದರಾಮಯ್ಯನವರಿಗೆ ಹೆಚ್.ಡಿ.ಕುಮಾರಸ್ವಾಮಿ ತೀಕ್ಷ್ಣ ಪ್ರಶ್ನೆ!!

ಕಾರ್ಯಕ್ರಮಕ್ಕೆ ಆಗಿರುವ ವೆಚ್ಚ 6 ಕೋಟಿ 33 ಲಕ್ಷ. ಈ ಪೈಕಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3ಕೋಟಿ 33 ಲಕ್ಷ ರೂ. ಬಾಕಿ ಬರಬೇಕಿದೆ. ಇದರಲ್ಲಿ ರಾಡಿಸನ್ ಬ್ಲೂ ಆತಿಥ್ಯವೆಚ್ಚ ಸುಮಾರು 80 ಲಕ್ಷ ರೂ. ಸೇರಿದೆ ಎಂದು ತಿಳಿಸಿದರು.

ಈ ಬಗ್ಗೆ ನಮ್ಮ ಇಲಾಖೆಯ ಅಧಿಕಾರಿಗಳು ಹಲವು ಬಾರಿ ಪತ್ರ ಬರೆದಿದ್ದರೂ, ಫೋನ್ ಮಾಡಿದ್ದರೂ ಎನ್.ಟಿ.ಸಿ.ಎ. (ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ) ಈ ಬಾಕಿ ಹಣ ನೀಡಿಲ್ಲ. ಈಗ ವಿಷಯ ತಮ್ಮ ಗಮನಕ್ಕೆ ಬಂದಿದ್ದು, ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ-ರೌಡಿಸಂ ಮಾಡುವವರನ್ನು ಸುಮ್ಮನೆ ಬಿಡುವುದಿಲ್ಲ: ಗೃಹ ಸಚಿವ ಪರಮೇಶ್ವರ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News