ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಗೆಲುವು; ಸಚಿವ ಸಂಪುಟ ಸೇರಲಿದ್ದಾರೆಯೇ ಅನಿತಾ ಕುಮಾರಸ್ವಾಮಿ?

ಅನಿತಾ ಕುಮಾರಸ್ವಾಮಿ ಅವರು 62,238 ಮತಗಳನ್ನು ಗಳಿಸಿ ಗೆಲುವು ಸಾಧಿಸಿದ್ದಾರೆ.

Last Updated : Nov 6, 2018, 11:56 AM IST
ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಗೆಲುವು; ಸಚಿವ ಸಂಪುಟ ಸೇರಲಿದ್ದಾರೆಯೇ ಅನಿತಾ ಕುಮಾರಸ್ವಾಮಿ? title=

ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. 

ಚುನಾವಣೆಗೆ ಎರಡು ದಿನಗಳು ಬಾಕಿ ಇವೆ ಎನ್ನುವ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಕಾಂಗ್ರೆಸ್ ಸೇರಿ ಕಣದಿಂದ ಹಿಂದೆ ಸರಿದಿದ್ದರು. ಆದಾಗ್ಯೂ ಅವರ ಹೆಸರು ಅಭ್ಯರ್ಥಿ ಪಟ್ಟಿಯಲ್ಲಿ ಇರಲಿದೆ ಎಂದು ಚುನಾವಣಾ ಆಯುಕ್ತರು ಹೇಳಿದ್ದರು. ಹೀಗಾಗಿ ಪ್ರಬಲ ಪ್ರತಿಸ್ಪರ್ಧಿ ಇಲ್ಲದ ಕಾರಣ ಅನಿತಾ ಕುಮಾರಸ್ವಾಮಿ ಅವರು 1,25,043 ಮತಗಳನ್ನು ಗಳಿಸಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ 15,906 ಮತಗಳನ್ನು ಗಳಿಸಿದ್ದಾರೆ. 

ಈ ಮೂಲಕ ಅನಿತಾ ಕುಮಾರಸ್ವಾಮಿ ಅವರು ಎರಡನೇ ಬಾರಿಗೆ ವಿಧಾನಸಭೆ ಪ್ರವೇಶಿಸಲಿದ್ದು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಂಪುಟ ಸೇರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 2008ರಲ್ಲಿ ನಡೆದಿದ್ದ ಉಪ ಚುನಾವಣೆಯಲ್ಲಿ ಮಧುಗಿರಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಅನಿತಾ, 2013ರಲ್ಲಿ ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ವಿರುದ್ಧ ಸೋಲು ಅನುಭವಿಸಿದ್ದರು.

Trending News