ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ, ಸರ್ಕಾರದ ಸಡಿಲ ನೀತಿಯೇ ಕಾರಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ಯುವತಿ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಆಕೆಯನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಸರ್ಕಾರದ ಸಡಿಲ ನಿಲುವುಗಳೇ ಇದಕ್ಕೆಲ್ಲ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Prashobh Devanahalli | Last Updated : May 15, 2024, 03:25 PM IST
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಯುವತಿ ಹತ್ಯೆಯೇ ನಿದರ್ಶನ
    • ಸರ್ಕಾರದ ಸಡಿಲ ನಿಲುವುಗಳೇ ಇದಕ್ಕೆಲ್ಲ ಕಾರಣ
    • ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ, ಸರ್ಕಾರದ ಸಡಿಲ ನೀತಿಯೇ ಕಾರಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ title=
File Photo

ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಮತ್ತೊಂದು ಯುವತಿ ಹತ್ಯೆಯೇ ನಿದರ್ಶನ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: Lakshmi nivasa serial: ಲಕ್ಷ್ಮೀ ನಿವಾಸ ಸೈಕೋ ಕ್ಯಾರೆಕ್ಟರ್‌ ಜಯಂತ್ ರಿಯಲ್ ಲೈಫ್ ಕಥೆ ಕೇಳಿದ್ರೆ ಶಾಕ್ ಆಗ್ತೀರಾ..! ಈತ ಬರೀ ನಟನಲ್ಲ!!

ಯುವತಿ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಆಕೆಯನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಸರ್ಕಾರದ ಸಡಿಲ ನಿಲುವುಗಳೇ ಇದಕ್ಕೆಲ್ಲ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮತ್ತೆ ಭಗ್ನ ಪ್ರೇಮಿಯೊಬ್ಬ ಅಂಜಲಿ ಎಂಬ ಯುವತಿಯನ್ನು ಚಾಕುವಿನಿಂದ ಇರಿದು ಕೊಂದಿದ್ದು, ನೇಹಾ ಪ್ರಕರಣದಲ್ಲಿ ಸರ್ಕಾರ ತೋರಿದ ನಿರ್ಲಕ್ಷ್ಯವೇ ಇದಕ್ಕೆ ಕಾರಣ. ಹುಬ್ಬಳ್ಳಿಯಲ್ಲಿ ಪದೇ ಪದೇ ಇಂತಹ ಪ್ರಕರಣ ಘಟಿಸುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿ: ಗಂಟುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗಿ ಹೊರ ಹೋಗುವುದು!

ಅಂಜಲಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿರುವ ಸಚಿವರು, ಕುಟುಂಬಕ್ಕೆ ಭಗವಂತ ನೋವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News