ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ: ನಕಲಿ ಸಹಿ ಆರೋಪದಡಿ ರಾಜ್ಯಪಾಲರಿಗೆ ದೂರು!

MUDA scam: ಮುಖ್ಯಮಂತ್ರಿಯವರು ಕನ್ನಡದಲ್ಲಿ ಸಹಿ ಮಾಡುವುದು ಸಾಮಾನ್ಯ. ಸಾಕಷ್ಟು ಸರ್ಕಾರಿ ದಾಖಲೆಗಳಲ್ಲಿ ಕನ್ನಡದಲ್ಲಿ ಸಹಿ ಇರುವುದನ್ನು ಗಮನಿಸಿದ್ದೇನೆ. ಆದರೆ ಮುಡಾ ಹಗರಣ ಸಂಬಂಧ ರಾಜ್ಯಪಾಲರಿಗೆ ಬರೆದಿರುವ ಪತ್ರ ಮತ್ತು ಲೋಕಾಯುಕ್ತಕ್ಕೆ ಸಲ್ಲಿಸಿದ ಆಸ್ತಿ ವಿವರದ ಪ್ರಮಾಣಪತ್ರದಲ್ಲಿ ಅವರ ಸಹಿ ಇಂಗ್ಲಿಷ್‌ನಲ್ಲಿದೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಆರೋಪಿಸಿ ದೂರು ನೀಡಿದ್ದಾರೆ. 

Written by - Puttaraj K Alur | Last Updated : Aug 25, 2024, 09:54 PM IST
  • ಮುಡಾ ಹಗರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ
  • ಸಿಎಂ ಸಿದ್ದರಾಮಯ್ಯನವರ ಸಹಿಯನ್ನು ಬೇರೆಯವರು ನಕಲು ಮಾಡಿದ್ದಾರೆಂದು ಆರೋಪ
  • ಲೋಕಾಯುಕ್ತರಿಂದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ದೂರು
ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ: ನಕಲಿ ಸಹಿ ಆರೋಪದಡಿ ರಾಜ್ಯಪಾಲರಿಗೆ ದೂರು! title=
ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ!

MUDA Scam: ಮುಡಾ ನಿವೇಶನ ಹಗರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಿಎಂ ಸಿದ್ದರಾಮಯ್ಯರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಕಲಿ ಸಹಿ ಆರೋಪದಡಿ ಅವರ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ.

ಸಿದ್ದರಾಮಯ್ಯನವರ ಸಹಿಯನ್ನು ಬೇರೆಯವರು ನಕಲು ಮಾಡಿದ್ದಾರೆಂದು ಆರೋಪಿಸಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಈ ಬಗ್ಗೆ ಲೋಕಾಯುಕ್ತರಿಂದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಅಂತಾ ರಾಜ್ಯಪಾಲರಿಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲ

ಇದೇ ವಿಚಾರವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಶನಿವಾರ ದೂರು ಸಲ್ಲಿಸಲಾಗಿದೆ. ಇದರೊಂದಿಗೆ ಅವರು ಸಿದ್ದರಾಮಯ್ಯರ ವಿರುದ್ಧ ಮತ್ತೊಂದು ದೂರು ಸಲ್ಲಿಸಿದಂತಾಗಿದೆ. ಮುಖ್ಯಮಂತ್ರಿಯವರು ಕನ್ನಡದಲ್ಲಿ ಸಹಿ ಮಾಡುವುದು ಸಾಮಾನ್ಯ. ಸಾಕಷ್ಟು ಸರ್ಕಾರಿ ದಾಖಲೆಗಳಲ್ಲಿ ಕನ್ನಡದಲ್ಲಿ ಸಹಿ ಇರುವುದನ್ನು ಗಮನಿಸಿದ್ದೇನೆ. ಆದರೆ ಮುಡಾ ಹಗರಣ ಸಂಬಂಧ ರಾಜ್ಯಪಾಲರಿಗೆ ಬರೆದಿರುವ ಪತ್ರ ಮತ್ತು ಲೋಕಾಯುಕ್ತಕ್ಕೆ ಸಲ್ಲಿಸಿದ ಆಸ್ತಿ ವಿವರದ ಪ್ರಮಾಣಪತ್ರದಲ್ಲಿ ಅವರ ಸಹಿ ಇಂಗ್ಲಿಷ್‌ನಲ್ಲಿದೆ. 

ಸಿಎಂ ಅವರ ಈ ಸಹಿ ನಕಲು ಆಗಿದ್ದು, ಬೇರೆ ಯಾರೋ ಸಹಿ ಮಾಡಿದ್ದಾರೆ. ಆದ್ದರಿಂದ ಅದನ್ನು ಗಮನಿಸಿ ಸಾಂವಿಧಾನಿಕ ಹುದ್ದೆಯ ಗೌರವ ಕಾಪಾಡಬೇಕೆಂದು ಕೋರಲಾಗಿದೆ. ಈ ದೂರಿನೊಂದಿಗೆ ಆರು ದಾಖಲೆಗಳನ್ನು ನೀಡಿರುವುದಾಗಿ ಸ್ನೇಹಮಯಿ ಕೃಷ್ಣ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂ ಯುವತಿಯರ ಮೇಲಿನ ದೌರ್ಜನ್ಯ ಹೆಚ್ಚಳ, ಉಗ್ರ ಕ್ರಮ : ವಿ.ಸುನೀಲ್‍ಕುಮಾರ್ ಒತ್ತಾಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News